ನ.8ರಿಂದ ದತ್ತಮಾಲಾ ಅಭಿಯಾನ; ಗಂಗಾಧರ ಕುಲಕರ್ಣಿ
8ರಂದು ಮಾಲಾಧಾರಣ, 11ಕ್ಕೆ ದತ್ತ ದೀಪೋತ್ಸವ, 12ರಂದು ಪಡಿ ಸಂಗ್ರಹ, 14ಕ್ಕೆ ಧರ್ಮಸಭೆ
Team Udayavani, Oct 18, 2021, 8:45 PM IST
ಚಿಕ್ಕಮಗಳೂರು: ಶ್ರೀರಾಮ ಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ನ.8ರಿಂದ 14ರವರೆಗೆ 17ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯಲಿದೆ ಎಂದು ಶ್ರೀರಾಮ ಸೇನೆ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ದತ್ತಮಾಲಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನ.8ರಂದು ನಗರದ ಶಂಕರ ಮಠದಲ್ಲಿ ಬೆಳಗ್ಗೆ 10ಗಂಟೆಗೆ ಮಾಲಾಧಾರಣ ಕಾರ್ಯಕ್ರಮ ನಡೆಯಲಿದೆ. 11ರಂದು ದತ್ತ ದೀಪೋತ್ಸವ, 12ರಂದು ಪಡಿ ಸಂಗ್ರಹ, 14ರಂದು ದತ್ತಪೀಠದಲ್ಲಿ ಧರ್ಮಸಭೆ ಮತ್ತು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಶೋಭಾಯಾತ್ರೆ ಇಲ್ಲ: 2019ರಲ್ಲಿ ಶೋಭಾಯಾತ್ರೆ ಸಂದರ್ಭದಲ್ಲಿ ದತ್ತಮೂರ್ತಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದ್ದು, ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ ಈ ಬಾರಿಯಿಂದ ಶೋಭಾಯಾತ್ರೆ ರದ್ದುಪಡಿಸಲಾಗಿದೆ.
ಜಿಲ್ಲಾಡಳಿತದ ಕೆಟ್ಟದಾಗಿ ನಡೆಸಿಕೊಂಡಿದ್ದು, ಈ ಸಂದೇಶ ಇಡೀ ರಾಜ್ಯಕ್ಕೆ ರವಾನೆಯಾಗಬೇಕು. ಈ ಹಿನ್ನೆಲೆಯಲ್ಲಿ ಶೋಭಾಯಾತ್ರೆ ಮಾಡದಿರಲು ಶ್ರೀರಾಮ ಸೇನೆ ನಿರ್ಧರಿಸಿದೆ ಎಂದರು.
ಇದನ್ನೂ ಓದಿ:ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್
ಜಿಲ್ಲಾಡಳಿತದಿಂದ ಅನುಮತಿ ಪಡೆಯಲ್ಲ: ಗುಹೆಯೊಳಗೆ ಸ್ವಾಮೀಜಿಗಳು ಪ್ರವೇಶಿಸಿ ಪೂಜೆ ಸಲ್ಲಿಸಲು ಇದುವರೆಗೂ ಯಾವುದೇ ನಿರ್ಬಂಧವಿರಲಿಲ್ಲ. ಹೈಕೋರ್ಟ್ ತೀರ್ಪು ಬಂದ ಬಳಿಕ ಗುಹೆಯೊಳಗೆ ಸ್ವಾಮೀಜಿಗಳು ಪ್ರವೇಶಿಸಲು ಜಿಲ್ಲಾಡಳಿತದಿಂದ ಅನುಮತಿ ಪಡೆದುಕೊಳ್ಳಬೇಕೆಂದು ಹೇಳುತ್ತಿದ್ದಾರೆ. ಈ ಹಿಂದೆ ಇಲ್ಲದ ನಿರ್ಬಂಧ ಈಗ್ಯಾಕೆ? ಈ ಬಗ್ಗೆ ಇತ್ತೀಚೆಗೆ ಗುಹೆ ಪ್ರದೇಶದಲ್ಲೇ ಪ್ರತಿಭಟನೆ ನಡೆಸಿದ್ದೆವು. ದತ್ತಮಾಲೆ ಅಭಿಯಾನದ ಸಂದರ್ಭದಲ್ಲಿ ಸ್ವಾಮೀಜಿಯವರ ಗುಹೆ ಪ್ರವೇಶಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆಯಲು ವಿನಂತಿಸುವುದಿಲ್ಲ ಎಂದರು.
ಸರ್ಕಾರ ಸಮಿತಿ ರಚಿಸಿದ್ದು ಖಂಡನೀಯ: ಶ್ರೀ ದತ್ತಾತ್ರೇಯ ಬಾಬಾಬುಡನ್ ದರ್ಗಾ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸರ್ಕಾರ ಆಕ್ಷೇಪಣೆ ಸಲ್ಲಿಸಲು ಸಮಿತಿ ರಚಿಸಿರುವುದು ಖಂಡನೀಯ. ರಾಜ್ಯ ಸರ್ಕಾರ ಕೋರ್ಟ್ ಆದೇಶದಂತೆ ಶೀಘ್ರವೇ ನಿರ್ಣಯ ಕೈಗೊಂಡು ಹಿಂದೂ ಅರ್ಚಕರನ್ನು ನೇಮಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ
Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.