ವಿಶ್ವ ಮಹಿಳಾ ದಿನ ಅದ್ಧೂರಿ ಆಚರಣೆಗೆ ನಿರ್ಧಾರ

Team Udayavani, Feb 28, 2020, 6:23 PM IST

28-Febraury-34

ಎನ್‌.ಆರ್‌.ಪುರ: ಪಟ್ಟಣದ ಗುರು ಭವನದಲ್ಲಿ ಮಾರ್ಚ್‌ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.

ಸಾಮರ್ಥ್ಯ ಸೌಧದಲ್ಲಿ ತಾಲೂಕು ಪಂಚಾಯಿತಿ ಇಒ ಎಸ್‌.ನಯನ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಧನಂಜಯ ಮೇದೂರ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿಯ ಮಹಿಳಾ ದಿನವನ್ನು ತಾಲೂಕಿನ ವ್ಯಾಪ್ತಿಯ ಎಲ್ಲಾ ಮಹಿಳಾ ಸಂಘಗಳು, ಸ್ತ್ರೀ ಶಕ್ತಿ, ಸ್ವಸಹಾಯ ಸಂಘದವರನ್ನು ಒಳಗೊಂಡು ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಮುತ್ತಿನಕೊಪ್ಪ, ಎನ್‌.ಆರ್‌.ಪುರ, ಬಾಳೆಹೊನ್ನೂರು, ಕಾನೂರು ವೃತ್ತ ವ್ಯಾಪ್ತಿಯ ಅಂಗನವಾಡಿಯಲ್ಲಿ ಸಮಯ ಪಾಲನೆ, ಅಂಗನವಾಡಿ ಸ್ವತ್ಛತೆ, ರುಚಿಕರ ಅಡುಗೆ ಮಾಡುವುವವರು ಮತ್ತಿತರ ಅಂಶಗಳನ್ನು ಗಮನಿಸಿ ವೃತ್ತ ಮಟ್ಟದ ಅಂಗನವಾಡಿ ಸಹಾಯಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಎಂಬ ಬಿರುದು ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದರು.

ಮಹಿಳೆಯರಿಗೆ ಆಟೋಟ ಅಥವಾ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಬಹುಮಾನ ವಿತರಿಸಲು ಚಿಂತಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಇಲಾಖೆಯಿಂದ 20ಸಾವಿರ ರೂ.ಭರಿಸಲಾಗುವುದು. ಉಳಿದ ಮೊತ್ತವನ್ನು ಎಲ್ಲರ ಸಹಕಾರದಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲಾಗುವುದು ಎಂದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಸ್‌.ಎಸ್‌.ಶಾಂತಕುಮಾರ್‌ ಮಾತನಾಡಿ, ಮಹಿಳಾ ದಿನವನ್ನು ವೈವಿಧ್ಯಮಯವಾಗಿ ಆಚರಿಸುವ ಮೂಲಕ ಹೊಸ ಸಂಪ್ರದಾಯ ಹುಟ್ಟುಹಾಕಬೇಕು. ಎಲ್ಲಾ ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಆಚರಿಸಲು ನಿರ್ಧರಿಸಿರುವುದು ಒಳ್ಳೆಯ ತೀರ್ಮಾನ. ರೋಟರಿ ಸಂಸ್ಥೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಸಾಹಿತ್ಯ, ಸಂಗೀತ, ಶಿಕ್ಷಣ, ಕ್ರೀಡೆ, ಸಮಾಜ ಸೇವೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು, ಪಟ್ಟಣದಲ್ಲಿ ಮಹಿಳಾ ಸಮಾಜದ ಸ್ಥಾಪಕರನ್ನು ಹಾಗೂ ಇನ್ನರ್‌ವ್ಹೀಲ್‌ ಸಂಸ್ಥೆ ಸ್ಥಾಪಕರನ್ನು ಸನ್ಮಾನಿಸಲು ನಿರ್ಧರಿಸಲಾಯಿತು. ಪಟ್ಟಣ ಪಂಚಾಯಿತಿ ವೃತ್ತದ ಸಮೀಪದಿಂದ ಜಾಥಾ ನಡೆಸಲು ನಿರ್ಧರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ನಯನ ಮಾತನಾಡಿ, ಮಹಿಳಾ ದಿನಾಚರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಎಲ್ಲರೂ ಒಟ್ಟುಗೂಡಿ ನೆನಪಿನಲ್ಲಿ ಉಳಿಯುವಂತಹ ಕಾರ್ಯಕ್ರಮವನ್ನು ಮಾಡೋಣ ಎಂದರು.

ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ, ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಅಂಬಿಕಾ, ಇನ್ನರ್‌ವ್ಹೀಲ್‌ ಸಂಸ್ಥೆ ಅಧ್ಯಕ್ಷೆ ಪ್ರಶಾಂತಿ ವೆಂಕಟೇಶ್‌, ಸೀಜಾ ಸದಾನಂದ, ರೋಟರಿ ಕ್ಲಬ್‌ ಅಧ್ಯಕ್ಷ ಬಿ.ವಿ.ಉಪೇಂದ್ರ ಇತರರಿದ್ದರು. ಎಲ್ಲಾ ಸಂಘ-ಸಂಸ್ಥೆಯವರು ಮಹಿಳಾ ದಿನಾಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.