ಆಪರೇಷನ್ ಗಜ ಯಶಸ್ವಿ; ಒಂಟಿ ಸಲಗ ಸೆರೆ
ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಸಲಗ
Team Udayavani, Apr 10, 2022, 3:19 PM IST
ಚಿಕ್ಕಮಗಳೂರು: ಹಂಪಾಪುರ, ಬೀಕನಹಳ್ಳಿ ಹಾಗೂ ಚುರ್ಚೆಗುಡ್ಡ ಸುತ್ತಮುತ್ತಲಿನ ಜನರಿಗೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಒಂಟಿ ಸಲಗವನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಸೆರೆ ಹಿಡಿದ ಸಲಗವನ್ನು ಬಂಡೀಪುರ ಅಭಯಾರಣ್ಯಕ್ಕೆ ರವಾನಿಸಲಾಗಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓಡಾಡುತ್ತಿದ್ದ ಒಂಟಿ ಸಲಗ ರೈತರ ಜಮೀನುಗಳಿಗೆ ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶಗೊಳಿಸಿತ್ತು. ಈ ಭಾಗದ ಜನ ದಿನವೂ ಜೀವ ಭಯದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಒಂಟಿ ಸಲಗವನ್ನು ಸೆರೆ ಹಿಡಿಯುವಂತೆ ಅಥವಾ ಕಾಡಿಗಟ್ಟುವಂತೆ ಜನ ಅರಣ್ಯ ಇಲಾಖೆಗೆ ಪದೇ ಪದೇ ಒತ್ತಡ ತಂದಿದ್ದರು. ಒಂಟಿ ಸಲಗ ಸೆರೆ ಹಿಡಿಯಲು ಕಳೆದ ಎರಡು ವಾರಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಶನಿವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ ಚಿಕ್ಕಮಗಳೂರು ಸಮೀಪದ ಬೀಕನಹಳ್ಳಿಯಲ್ಲಿ ಸಲಗವನ್ನು ಸೆರೆ ಹಿಡಿದಿದ್ದಾರೆ. ಎರಡು ವಾರಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು ನಾಗರಹೊಳೆಯಿಂದ ಭೀಮ ಮತ್ತು ಅರ್ಜುನ ಹೆಸರಿನ ಸಾಕಾನೆಗಳನ್ನು ಕರೆಸಿ ಕಾರ್ಯಾಚರಣೆ ಆರಂಭಿಸಿದ್ದರು. ಚರ್ಚೆಗುಡ್ಡ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಸಾಕಾನೆಗಳ ಮೇಲೆ ಕಾಡಾನೆ ಎಗರಿ ಬಂದಿದ್ದು, ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆಗ ಮಾವುತನಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂಟಿ ಸಲಗವನ್ನು ಸೆರೆ ಹಿಡಿಯಬೇಕೆಂದು ಹಠಕ್ಕೆ ಬಿದ್ದ ಅರಣ್ಯ ಇಲಾಖೆ ಸಿಬ್ಬಂದಿ ನಾಗರಹೊಳೆಯ ಭೀಮ ಮತ್ತು ಅರ್ಜುನ ಜೊತೆಗೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ಬಾಲಣ್ಣ, ಸಾಗರ್ ಮತ್ತು ಭಾನುಮತಿ ಹೆಣ್ಣಾನೆಯನ್ನು ಕರೆಸಿಕೊಳ್ಳಲಾಗಿತ್ತು.
ಐದು ಸಾಕಾನೆ ಮತ್ತು ಮಾವುತರು, ನಾಗರಹೊಳೆಯ 15 ಜನ ಸಿಬ್ಬಂದಿ, ಸಕ್ರೇಬೈಲು ಆನೆ ಬಿಡಾರದ 15 ಜನ ಸಿಬ್ಬಂದಿ, ಶಿವಮೊಗ್ಗದ ಡಾ|ವಿನಯ್ ಹಾಗೂ ಬಂಡೀಪುರದ ಡಾ|ವಾಸೀಂ ಸೇರಿದಂತೆ 100 ಜನ ಸಿಬ್ಬಂದಿ ಶನಿವಾರ ಬೆಳಗ್ಗೆ ಕಾರ್ಯಾಚರಣೆಗಿಳಿದರು. ಸಾಕಾನೆ ಮತ್ತು ಸಿಬ್ಬಂದಿ ಕಾಡಂಚಿನಲ್ಲಿ ಸಂಚರಿಸಿದರು. ಬೀಕನಹಳ್ಳಿ ಸಮೀಪ ಬೆಳಗ್ಗೆ 9 ಗಂಟೆ ಸುಮಾರಿಗೆ ಐದು ಸಾಕಾನೆಗಳು ಒಂಟಿ ಸಲಗವನ್ನು ಸುತ್ತುವರಿಯುತ್ತಿದ್ದಂತೆ ವೈದ್ಯರು ಒಂಟಿ ಸಲಗಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡಿದರು.
ಪ್ರಜ್ಞೆ ತಪ್ಪುತ್ತಿದ್ದಂತೆ ಕುತ್ತಿಗೆಗೆ ಹಗ್ಗ ಬಿಗಿದು ಸರಪಳಿಯಿಂದ ಬಂಧಿಸಲಾಯಿತು. ಬಳಿಕ ಸಾಕಾನೆಗಳ ಸಹಾಯ ಮತ್ತು ಕ್ರೇನ್ ಮೂಲಕ ಒಂಟಿ ಸಲಗವನ್ನು ಲಾರಿ ಹತ್ತಿಸಿ 11 ಗಂಟೆ ವೇಳೆಗೆ ಬಂಡೀಪುರ ಅಭಯಾರಣ್ಯಕ್ಕೆ ರವಾನಿಸಲಾಯಿತು. ಕಳೆದ ಅನೇಕ ದಿನಗಳಿಂದ ಒಂಟಿ ಸಲಗದ ಉಪಟಳದಿಂದ ಜೀವ ಭಯದಲ್ಲಿದ್ದ ಜನ ಆನೆ ಸೆರೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ.
ಚಿಕ್ಕಮಗಳೂರು ಸುತ್ತಮುತ್ತ ಕಳೆದ ಮೂರ್ನಾಲ್ಕು ತಿಂಗಳಿಂದ ಸಂಚರಿಸುತ್ತಿದ್ದ ಒಂಟಿ ಸಲಗವನ್ನು ಐದು ಸಾಕಾನೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶನಿವಾರ ಸೆರೆ ಹಿಡಿದಿದ್ದು, ಬಂಡೀಪುರ ಅರಣ್ಯಕ್ಕೆ ಬಿಡಲಾಗುತ್ತದೆ. -ಎನ್.ಇ.ಕ್ರಾಂತಿ, ಡಿಎಫ್‌ಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.