ಮೆಸ್ಕಾಂ ಶಾಖಾ ಕಚೇರಿ ಸ್ಥಳಾಂತರಕ್ಕೆ ವಿರೋಧ
Team Udayavani, Jun 15, 2020, 9:01 AM IST
ಮೂಡಿಗೆರೆ: ತಾಲೂಕಿನ ದಾರದಹಳ್ಳಿ ಫ್ರಿಡರ್ ವ್ಯಾಪ್ತಿಯ ಮೆಸ್ಕಾಂ ಶಾಖಾ ಕಚೇರಿಯನ್ನು ಮೂಡಿಗೆರೆಗೆ ವರ್ಗಾಯಿಸುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಕಿತ್ತಳೆಗಂಡಿ ಗ್ರಾಮದಲ್ಲಿ ಮೆಸ್ಕಾಂ ಶಾಖಾ ಕಚೇರಿಯಿದ್ದು, ಇದರಿಂದಾಗಿ ಗೌಡಹಳ್ಳಿ, ಪಟ್ಟದೂರು, ಊರುಬಗೆ, ದಾರದಹಳ್ಳಿ, ಬಿಳ್ಳೂರು ಸೇರಿದಂತೆ ಹಲವು ಹಳ್ಳಿಗಳ ಜನರಿಗೆ ಉಪಯೋಗವಾಗುತ್ತಿತ್ತು. ಶಾಖಾ ಕಚೇರಿಯಲ್ಲಿ ಗ್ರಾಹಕರು ವಿದ್ಯುತ್ ಬಿಲ್ ಪಾವತಿ ಮಾತ್ರವಲ್ಲದೆ, ದೂರು ದಾಖಲಿಸಲು, ಹೊಸ ಸಂಪರ್ಕಕ್ಕೆ ನೋಂದಣಿ, ಆಡಳಿತಾತ್ಮಕ ವಿಚಾರಗಳಿಗೆ ಸಂಬಂ ಧಿಸಿದ ಹಲವು ಕಾರ್ಯಗಳಿಗೆ ಅನುಕೂಲ ಕಲ್ಪಿಸುತ್ತಿತ್ತು. ಆದರೆ ಇಲ್ಲಿನ ಶಾಖಾ ಕಚೇರಿಯನ್ನು ಸ್ಥಳಾಂತರ ಮಾಡಲು ಉದ್ದೇಶಿಸಿರುವುದರಿಂದ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಮಾತನಾಡಿದ ಸ್ಥಳೀಯರು, ಮೆಸ್ಕಾಂ ಶಾಖಾ ಕಚೇರಿ ವಿದ್ಯುತ್ ಇಲಾಖೆಗೆ ಸಂಬಂಧಪಟ್ಟ ಹತ್ತು ಹಲವು ಕಾರ್ಯಗಳಿಗೆ ಸ್ಥಳೀಯರಿಗೆ ಅನುಕೂಲ ಕಲ್ಪಿಸುತ್ತಿತ್ತು. ಆದರೆ ಇದೀಗ ಮೆಸ್ಕಾಂ ಅಧಿಕಾರಿಗಳು ಇಲ್ಲಿನ ಶಾಖಾ ಕಚೇರಿಯನ್ನು ಮೂಡಿಗೆರೆ ಪಟ್ಟಣದ ಮೆಸ್ಕಾಂ ಮುಖ್ಯ ಕಚೇರಿಗೆ ಸ್ಥಳಾಂತಸರಿಸಲು ನಿರ್ಧಾರ ಮಾಡಿದ್ದಾರೆ. ಇದು ಸ್ಥಳೀಯರಿಗೆ ತೀವ್ರ ಅನಾನುಕೂಲ ಮಾಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರತೀ ತಿಂಗಳು ಬಿಲ್ ಪಾವತಿ ಮಾಡಲು ಸುಮಾರು 30ಕಿಮೀನಷ್ಟು ದೂರ ಪ್ರಯಾಣ ಮಾಡಬೇಕಾಗುತ್ತದೆ. ಈಗಾಗಲೇ ಮೆಸ್ಕಾಂ ಉನ್ನತ ಅಧಿಕಾರಿಗಳಿಗೆ ಸ್ಥಳಾಂತರದ ಉದ್ದೇಶವನ್ನು ಕೈಬಿಡುವಂತೆ ಕೇಳಿಕೊಳ್ಳಲಾಗಿದೆ. ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪತ್ರಿಕೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.