ವೈರಾಲಜಿ ಲ್ಯಾಬ್‌ನಲ್ಲಿ 50,000ಕ್ಕೂ ಹೆಚ್ಚು ಪರೀಕ್ಷೆ: ಜಿಲ್ಲಾಧಿಕಾರಿ
Team Udayavani, Nov 7, 2020, 7:41 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಆರ್.ಟಿ.ಪಿ.ಸಿ.ಆರ್. ವೈರಾಲಜಿ ಲ್ಯಾಬ್ ಆ.1 ರಿಂದ ಪ್ರಾರಂಭಿಸಲಾಗಿದ್ದು, ಈವರೆಗೆ 50,000ಕ್ಕೂ ಹೆಚ್ಚು ಪರೀಕ್ಷೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ತಿಳಿಸಿದರು.
ಪರೀಕ್ಷೆಗಳಿಗೆ ಬೇಕಾಗಿರುವ ಆರ್.ಟಿ.ಪಿ.ಸಿ.ಆರ್. ಕಿಟ್ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಪ್ರಯೋಗಾಲಯದಿಂದ ಪಡೆಯಲಾಗುತ್ತಿದೆ. ನ.5ರ ಅಂತ್ಯಕ್ಕೆ 50,562 ಟೆಸ್ಟ್ ಮಾಡಲಾಗಿದ್ದು, ಅವುಗಳಲ್ಲಿ 4,687 ಪಾಸಿಟಿವ್‌ಫಲಿತಾಂಶ, 307 ಇನ್‌ಕನ್‌ಕ್ಲೂಸಿವ್ ಮತ್ತು 45,568 ನೆಗೆಟಿವ್ ಫಲಿತಾಂಶ ಬಂದಿದೆ. ಪ್ರಯೋಗಾಲಯದಲ್ಲಿ ಇಬ್ಬರು ಮೈಕ್ರೋಬಯಾಲಜಿಸ್ಟ್, ಒಬ್ಬರು ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಂತ್ರಜ್ಞ, 11 ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಂತ್ರಜ್ಞರು, 04 ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ 18 ಅ ಧಿಕಾರಿ ಹಾಗೂ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಆಸ್ಪತ್ರೆಯ ವೈದ್ಯರು ಹಾಗೂ ಪ್ರಯೋಗ ಶಾಲಾ ಟೆಕ್ನಾಲಜಿಸ್ಟ್ ಹಾಸನ ಮೆಡಿಕಲ್ ಕಾಲೇಜು ಹಾಗೂ ನಿಮ್ಹಾನ್ಸ್‌ನಲ್ಲಿ ತರಬೇತಿ ಪಡೆದಿದ್ದಾರೆ. ಮೈಕ್ರೋಬಯಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಸನದ ವೈದ್ಯಕೀಯ ಕಾಲೇಜಿನ ಡಾ| ಶರತ್‌ಕುಮಾರ್ ಶೆಟ್ಟಿ, ಅವರನ್ನು ಈ ಪ್ರಯೋಗಾಲಯಕ್ಕೆ ನಿಯೋಜಿಸಿದ್ದು, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಮೈಕ್ರೋಬಯಾಲಜಿಸ್ಟ್ ಡಾ| ವಿಶ್ವಜಿತ್ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಲ್ಯಾಬ್‌ನ ಕಾರ್ಯಕ್ಷಮತೆ ಹೆಚ್ಚಿಸಲು ಆಟೋಮೇಟೆಡ್ ಆರ್.ಎನ್.ಎ. ಎಕ್ಟ್ರಾಕ್ಟರ್‌ಮತ್ತು 96 ವೆಲ್ಸ್ ಆರ್.ಟಿ.ಪಿ.ಸಿ.ಆರ್. ಕಿಟ್ ಅನ್ನು ಹೆಚ್ಚುವರಿಯಾಗಿ ರಾಜ್ಯ ಡ್ರಗ್ಸ್ ಆ್ಯಂಡ್ ಲಾಜಿಸ್ಟಿಕ್ ಸೊಸೈಟಿ, ಬೆಂಗಳೂರು ಇವರು ಸರಬರಾಜು ಮಾಡುತ್ತಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸ್ಥಾಪಿತವಾಗಿರುವ ಆರ್ .ಟಿ.ಪಿ.ಸಿ.ಆರ್ ಲ್ಯಾಬ್‌ನಲ್ಲಿ ದಿನವೊಂದಕ್ಕೆ 1,200ಕ್ಕೂ ಹೆಚ್ಚು ಪರೀಕ್ಷೆಗಳನ್ನು ಮಾಡಬಹುದಾಗಿದೆ. ತ್ವರಿತವಾಗಿ ಫಲಿತಾಂಶ ದೊರೆಯುತ್ತಿದ್ದು, ರೋಗಿಗಳ ಪತ್ತೆ ಮತ್ತು ಚಿಕಿತ್ಸೆ ಹಾಗೂ ರೋಗ ಹರಡದಂತೆ ಮುಂಜಾಗ್ರತೆ ವಹಿಸಲು ಸಹಕಾರಿಯಾಗಲಿದೆ. ಪ್ರಯೋಗಾಲಯ ಸ್ಥಾಪನೆಗೆ ಸಿವಿಲ್ ಕಾಮಗಾರಿಗಳಿಗಾಗಿ ರೂ.25ಲಕ್ಷ ಹಾಗೂ ಉಪಕರಣಗಳು ಮತ್ತು ಕನ್ಸೂಮಬಲ್ಸ್ ರೂ.123.62 ಲಕ್ಷಗಳು ಸೇರಿ ಒಟ್ಟು ರೂ. 148.62 ಲಕ್ಷಗಳ ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದ್ದು, ಸಿವಿಲ್ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.