ಒಳ್ಳೆಯವನೋ ಕೆಟ್ಟವನೋ ನಿರ್ಧರಿಸುವವರು ಜನ: ರವಿ


Team Udayavani, Oct 25, 2017, 2:27 PM IST

25-24.jpg

ಚಿಕ್ಕಮಗಳೂರು: ಚುನಾವಣೆಯಿಂದ ಚುನಾವಣೆಗೆ ಬಂದು ಹೋಗುವಂತಹ ಜನಪ್ರತಿನಿಧಿ ನಾನಲ್ಲ. ಸಾವು-ನೋವು, ಶುಭ ಕಾರ್ಯಗಳು ಸೇರಿದಂತೆ ಊರ ಜಾತ್ರೆಯಲ್ಲಿ ಮನೆ ಮಗನಾಗಿ ಭಾಗಿಯಾಗಿ ತಮ್ಮ ಪ್ರೀತಿ-ವಿಶ್ವಾಸ ಉಳಿಸಿಕೊಂಡಿದ್ದೇನೆ ಎಂಬ ನಂಬಿಕೆ ಇದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ನಗರ ಹೊರವಲಯದ ಮತ್ತಾವರದಲ್ಲಿ ಸೋಮವಾರ ನಡೆದ ಗ್ರಾಮ ವಾಸ್ತವ್ಯದಲ್ಲಿ ಅವರು ಮಾತನಾಡಿದರು. ಚುನಾವಣೆ ಬಂದಿದೆಯೆಂದು ಶಾಸಕರು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಇಂತಹ ಕೆಟ್ಟ ಎಂಎಲ್‌ಎ ನಾವು ನೋಡೇ ಇಲ್ಲ. ಕ್ಷೇತ್ರ ಬಿಟ್ಟು ತೊಲಗು ಎಂದು ಚಳವಳಿ ಮಾಡುತ್ತೇನೆಂದು ವಿರೋಧ ಪಕ್ಷದವರ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನೆಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದರು. ನನಗೆ ಮತ ಹಾಕಿದ ಜನ ನನ್ನ ಮಾಲೀಕರು. ನಾನು ಕೆಟ್ಟವನಾ? ಒಳ್ಳೆಯವನಾ ಎಂಬುದು ಜನಕ್ಕೆ ಬಿಟ್ಟ ವಿಚಾರ.
ಒಳ್ಳೆ ಶಾಸಕ ಅನಿಸಿದ್ದರೆ ಕೈ ಮೇಲೆತ್ತುವ ಮೂಲಕ ನೀವು ತೀರ್ಮಾನಿಸಿ ತೀರ್ಪು ನೀಡಿ ಎಂದು ಗ್ರಾಮಸ್ಥರಿಗೆ ಕೇಳಿದಾಗ
ಸಭೆಯಲ್ಲಿ ಕುಳಿತಿದ್ದವರು ಒಕ್ಕೊರಲಾಗಿ ಕೈ ಎತ್ತಿ ಬೆಂಬಲ ವ್ಯಕ್ತಪಡಿಸಿದರು.

ಯಾವುದೇ ಫಾರಂ ನಂ 53 ಅರ್ಜಿ ಬಂದಾಗ ಒಂದು ರೂ. ಲಂಚ ನಾನು ಪಡೆದಿದ್ದರೂ ಯಾವುದೇ ಮುಲಾಜು ನೋಡದೆ ಮನೆಗೆ ಕಳುಹಿಸಿ ಎಂದು ಹೇಳಿದ ಸಿ.ಟಿ.ರವಿ, ನಾನು ಶಾಶ್ವತ ಅಲ್ಲ. ಅಧಿಕಾರವೂ ಶಾಶ್ವತ ಅಲ್ಲ ಎಂಬ ಅರಿವು ನನಗಿದೆ. ಅಧಿಕಾರ ಬಂದಿದೆಯೆಂದು ಮೆರೆಯಬೇಡ. ಅಧಿಕಾರ ಕೊಟ್ಟಿರುವ ಜನರನ್ನು ಮರೆತು ರಾಜಕಾರಣ ಮಾಡಬೇಡ. ಯಾರ ಮನಸು ಮುರಿಯಬೇಡ ಎಂಬ ಹಿರಿಯರು ಕೊಟ್ಟ ಸಲಹೆ ಪಾಲಿಸುತ್ತಿದ್ದೇನೆ ಎಂದು ತಿಳಿಸಿದರು.

2017ರಲ್ಲಿ ಅಭಿವೃದ್ಧಿ ಕಾರ್ಯಗಳಿಗೆ 2 ಕೋಟಿ.ರೂ. ಮಂಜೂರು ಮಾಡಲಾಗಿದೆ. ಗ್ರಾಮ ವಿಕಾಸಯೋಜನೆಯಡಿ 1 ಕೋಟಿ ರೂ. ನೀಡಲಾಗಿದೆ. ಸಿಮೆಂಟ್‌ ರಸ್ತೆ ಮತ್ತು ಡಾಂಬರೀಕರಣಕ್ಕೆ 10 ಲಕ್ಷ ರೂ. ಮತ್ತಾವರಕ್ಕೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಯುವಂತೆ ಗ್ರಾಮಸ್ಥರು ಎಚ್ಚರ ವಹಿಸಬೇಕು ಎಂದು ಸೂಚಿಸಿದರು. ದುಮ್ಮಗೆರೆ ಗ್ರಾಮದ ಬಾಕ್ಸ್‌ ಚರಂಡಿಗೆ 10 ಲಕ್ಷ ರೂ.  ನೀಡಿರುವೆ. ವಿಶೇಷ ಅನುದಾನಕ್ಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಸದ್ಯದಲ್ಲೆ ಹಣ ಬಿಡುಗಡೆಯಾಗಲಿದೆ ಎಂದು ನುಡಿದರು. ವಿವಿಧ ಗ್ರಾಮಗಳ 38 ಜನ ಗ್ರಾಮಸ್ಥರು ಸಮಸ್ಯೆಗಳ ಕುರಿತು ಕೇಳಿದ ಪ್ರಶ್ನೆಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಉತ್ತರ ಕೊಡಿಸಿ ಹಲವು ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ತಾಕೀತು ಮಾಡಿದರು. ಗ್ರಾಮ ವಾಸ್ತವ್ಯ ಅಂಗವಾಗಿ ಕಬ್ಬಡಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಶಾಲೆಯಲ್ಲಿ ವಾಸ್ಯವ್ಯ ಮಾಡಿದರು. 

ಜಿಪಂ ಅಧ್ಯಕ್ಷೆ ಬಿ.ಎಸ್‌.ಚೈತ್ರಶ್ರೀ, ಸದಸ್ಯರಾದ ಹಿರಿಗಯ್ಯ, ಜಿ.ಸೋಮಶೇಖರ್‌, ತಾಪಂ ಅಧ್ಯಕ್ಷ ಈ.ಆರ್‌.ಮಹೇಶ್‌, ಸದಸ್ಯ ಯು.ಸಿ.ಮಹೇಶ್‌, ಎಪಿಎಂಸಿ ಅಧ್ಯಕ್ಷ ಕವೀಶ್‌, ಉಪಾಧ್ಯಕ್ಷ ರಾಜೀವ್‌, ಸದಸ್ಯ ವಿಕ್ರಾಂತ್‌, ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್‌, ಪಾಪಣ್ಣ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.