ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಕನಸು
Team Udayavani, Jan 22, 2022, 9:06 PM IST
cಇಕ್ಕ
ಚಿಕ್ಕಮಗಳೂರು: ಸ್ವತ್ಛ ಚಿಕ್ಕಮಗಳೂರು ಹಾಗೂ ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಮಾಡುವುದು ನನ್ನ ಕನಸಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ನಗರಸಭೆ ನೂತನ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು. ಶುಕ್ರವಾರ ನಗರದ ನಗರಸಭೆ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಅಭಿನಂದನೆ ಸ್ವೀಕರಿಸಿ, ಅಧ್ಯಕ್ಷ ಸ್ಥಾನ ಅಲಂಕರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಚಿಕ್ಕಮಗಳೂರು ನಗರಸಭೆ ವ್ಯಾಪ್ತಿಯಲ್ಲಿ ಅನೇಕ ಸಮಸ್ಯೆಗಳಿವೆ. ಮುಂದಿನ ದಿನಗಳಲ್ಲಿ ಅ ಧಿಕಾರಿಗಳು ಮತ್ತು ಸಿಬ್ಬಂ ದಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದರು. ಕಳೆದ 31ವರ್ಷಗಳಿಂದ ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಅನೇಕ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಿ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಹನುಮಂತಪ್ಪ ವೃತ್ತ ಯುವಕ ಸಂಘದಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ರಾಮ ಜನ್ಮಭೂಮಿ ಹೋರಾಟದ ಮೂಲಕ ಬಿಜೆಪಿಗೆ ಪಾದಾರ್ಪಣೆ ಮಾಡಿದೆ ಎಂದು ಅಂದಿನ ದಿನಗಳನ್ನು ನೆನೆದರು.
ನೂತನ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮತ್ತು ಉಪಾಧ್ಯಕ್ಷೆ ಸಿ.ಎಚ್. ಉಮಾದೇವಿ ಅವರನ್ನು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ. ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮುರುಡಪ್ಪ, ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸೇರಿದಂತೆ ಸಂಬಂ ಧಿಕರು, ಸ್ನೇಹಿತರು, ವಾರ್ಡಿನ ಪ್ರಮುಖರು ಹೂವಿನ ಹಾರ, ಮೈಸೂರು ಪೇಟ ತೊಡಿಸಿ ಶಾಲು ಹೊದೆಸಿ ಅಭಿನಂದಿಸಿದರು. ಅಭಿನಂದನಾ ಸಮಾರಂಭ ಮುಕ್ತಾಯದ ಬಳಿಕ ನಗರಸಭೆ ಮುಂಭಾಗದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಕಚೇರಿಗೆ ಆಗಮಿಸಿ ಕಚೇರಿ ಬಾಗಿಲಿಗೆ ನಮಸ್ಕರಿಸಿ ಬಲಗಾಲಿಟ್ಟು ಕಚೇರಿ ಪ್ರವೇಶಿಸಿದರು. ಕಚೇರಿಯಲ್ಲಿ ದೇವರ ಫೋಟೋ ಮತ್ತು ಅಧ್ಯಕ್ಷರ ಆಸನಕ್ಕೆ ಪೂಜೆ ಸಲ್ಲಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.