ಬಾಣಂತಿಗೆ 5 ಸಾವಿರ ರೂ. ಸಹಾಯಧನ
Team Udayavani, Oct 14, 2020, 5:57 PM IST
ಚಿಕ್ಕಮಗಳೂರು: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಮೊದಲ ಹೆರಿಗೆಯಾದ ಫಲಾನುಭವಿಗಳ ಖಾತೆಗೆ 5000 ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ತಿಳಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಸಾಗಾಟ ನಿವಾರಣಾ ಯೋಜನೆ, ಕೌಟುಂಬಿಕಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಹಾಗೂ ಸಖೀ, ಬಾಲ್ಯ ವಿವಾಹ ಮತ್ತು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಜಿಲ್ಲೆಯಲ್ಲಿ 2020 ಏಪ್ರಿಲ್‌ನಿಂದ ಸೆಪ್ಟೆಂಬರ್ ವರೆಗೆ 3,448 ಫಲಾನುಭವಿಗಳ ಖಾತೆಗೆ ನೇರವಾಗಿ ಮೂರು ಕಂತುಗಳಲ್ಲಿ 5000ರೂ. ಸಹಾಯಧನ ನೀಡಲಾಗಿದೆ. ಮೂಡಿಗೆರೆ, ಕಳಸ ಸೇರಿದಂತೆ ಮಲೆನಾಡು ಹಾಗೂ ಗುಡ್ಡಗಾಡುಪ್ರದೇಶಗಳ ಅರ್ಹ ಫಲಾನುಭವಿಗಳಿದ್ದಲ್ಲಿ ಅವರನ್ನು ಗುರುತಿಸಿ ಸೌಲಭ್ಯ ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಕೇಂದ್ರ ಸರ್ಕಾರ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಉದ್ದೇಶದಿಂದ ಸಖೀ(ಒನ್ ಸ್ಟಾಫ್ ಸೆಂಟರ್) ಕೇಂದ್ರ ಆರಂಭಿಸಿದ್ದು,ನಗರದ ರುಕ್ಮಿಣಿಯಮ್ಮ ಹೆರಿಗೆ ಆಸ್ಪತ್ರೆಯಲ್ಲಿ ಸಖೀ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಸಮಾಲೋಚಕರು, ವಕೀಲರು, ಸಮಾಜ ಸೇವಾ ಕಾರ್ಯಕರ್ತರು ಸೇರಿದಂತೆ ಹಲವರು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರದಲ್ಲಿ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ 2020ರ ಏಪ್ರಿಲ್‌ನಿಂದ-ಸೆಪ್ಟೆಂಬರ್‌ವರೆಗೆ 18 ಅತ್ಯಾಚಾರ ಪ್ರಕರಣಗಳು, 7 ಬಾಲ್ಯ ವಿವಾಹ ಪ್ರಕರಣ, 12ಲೈಂಗಿಕ ದೌರ್ಜನ್ಯ ಹಾಗೂ 7ಅಪಹರಣ ಕೇಸುಗಳು ಸೇರಿದಂತೆ 45 ಪ್ರಕರಣಗಳುದಾಖಲಾಗಿವೆ. ಇದರಲ್ಲಿ 8 ಕೇಸ್‌ಗಳು ಇತ್ಯರ್ಥವಾಗಿ37 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾಹಂತದಲ್ಲಿವೆ ಎಂದರು. ಸಭೆಯಲ್ಲಿ ಎಸ್ಪಿ ಎಂ.ಎಚ್. ಅಕ್ಷಯ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಮಲ್ಲಿಕಾರ್ಜುನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಇಲಾಖೆ ಸಹಾಯಕ ನಿರ್ದೇಶಕ ಮುದ್ದಣ್ಣ, ಜಿಲ್ಲಾ
ಸರ್ಜನ್ ಡಾ| ಮೋಹನ್, ಕಾರ್ಮಿಕ ಇಲಾಖಾ ಅಧಿಕಾರಿ ರವಿಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಂಗನಾಥ್ ಇತರರು ಉಪಸ್ಥಿತರಿದ್ದರು.
ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ ನಿವಾರಣೆಗೆ ಸಂಬಂಧಿಸಿದಂತೆಜಿಲ್ಲೆಯಲ್ಲಿ 227 ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ಅಧಿಕಾರಿಗಳು ಕೇವಲ ಸಭೆಗಳಿಗೆ ಸೀಮಿತವಾಗದೆ ಇಂತಹ ಪ್ರಕರಣಗಳನ್ನು ಗುರುತಿಸಲು ನಿಗಾ ವಹಿಸಬೇಕು –ಡಾ| ಬಗಾದಿ ಗೌತಮ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.