ಹಣ ಪಡೆದಿದ್ದು ಸಾಬೀತಾದಲ್ಲಿ ರಾಜಕೀಯ ನಿವೃತ್ತಿ
ತಾಲೂಕು ಕಚೇರಿಯಲ್ಲಿ ಕಾನೂನು ಬಾಹಿರವಾಗಿ ಹಕ್ಕುಪತ್ರ ನೀಡಲಾಗುತ್ತಿದೆ
Team Udayavani, Jan 12, 2022, 6:02 PM IST
ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ಪಡೆದಿದ್ದು ಸಾಬೀತುಪಡಿಸಿದಲ್ಲಿ ರಾಜಕೀಯ ನಿವೃತ್ತಿ ಪಡೆಯುವುದಾಗಿ ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ತಾಲೂಕಿನಲ್ಲಿ 250 ರಿಂದ 300 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ಯಾವುದೇ ಅಧಿಕಾರಿಯಿಂದ ಒಂದು ರೂಪಾಯಿ ಪಡೆದುಕೊಂಡಿಲ್ಲ ಎಂದು ಹೇಳಿದರು.
ತಾಲೂಕು ಕಚೇರಿಯಲ್ಲಿ ಕಾನೂನು ಬಾಹಿರವಾಗಿ ಹಕ್ಕುಪತ್ರ ನೀಡಲಾಗುತ್ತಿದೆ ಎಂಬ ಮಾಹಿತಿ ಇದ್ದು, ತಹಶೀಲ್ದಾರ್‌ಗೆ ಅನೇಕ ಬಾರಿ ಸೂಚನೆ ನೀಡಲಾಗಿತ್ತು. ಯಾವುದೇ ಅಧಿಕಾರಿ ಮತ್ತು ನೌಕರರು ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸದಲ್ಲಿ ಕ್ರಮ ಆಗೇ ಅಗುತ್ತದೆ ಎಂದು ಎಚ್ಚರಿಸಿದರು.
ತಮ್ಮ ಲೆಟರ್ ಹೆಡ್ ಬಳಸಿಕೊಂಡು ನಕಲಿ ಸಹಿ ಮಾಡಿರುವ ಸಂಬಂಧ ತನಿಖೆ ನಡೆಸುವಂತೆ ಗೃಹಸಚಿವ ಆರಗ ಜ್ಞಾನೇಂದ್ರ ಮತ್ತು ಕೊಪ್ಪ ಡಿವೈಎಸ್‌ಪಿಗೆ ತಿಳಿಸಲಾಗಿದೆ. ಅರಣ್ಯೇತರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈಗಾಗಲೇ ಅನೇಕ ಕಾಯ್ದೆಗಳಿವೆ. ಹೊಸದಾಗಿ ಮತ್ತೂಂದು ಕಾಯ್ದೆ ಜಾರಿಗೊಳಿಸುವ ಅಗತ್ಯವಿಲ್ಲ, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ಮುಖ್ಯಮಂತ್ರಿಗಳ ನಿಯೋಗ ತೆರಳಿ ಕೇರಳ ಮಾದರಿಯಲ್ಲಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಏಷ್ಯಾಖಂಡದಲ್ಲಿ ಸಹಕಾರ ಸಾರಿಗೆ ಹೆಗ್ಗಳಿಕೆ ಗಳಿಸಿದ್ದು, ಕುಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿತ್ತು. ಇಂಧನ ಬೆಲೆ ಏರಿಕೆ, ಚಚ್ಚಾರಸ್ತೆಯಲ್ಲಿ ಬಸ್ ಓಡಿಸಿದ ಪರಿಣಾಮ ನಷ್ಟ ಅನುಭವಿಸಬೇಕಾಯಿತು. ಸಂಸ್ಥೆ ಬಾಗಿಲು ಮುಚ್ಚಿದೆ. ಸಂಸ್ಥೆ ನಡೆಸಲು ಯಾರಾದರೂ ಮುಂದೆ ಬಂದರೆ ಬಿಟ್ಟುಕೊಡಲು ಸಂಸ್ಥೆ ಪದಾ ಧಿಕಾರಿಗಳು ಮುಂದಾಗುತ್ತಾರೆಂದು ಹೇಳಿದರು.
ಚಳಿಗಾಲದ ಅಧಿವೇಶನದಲ್ಲಿ ಸಹಕಾರ ಸಾರಿಗೆ ವಿಷಯ ಪ್ರಸ್ತಾಪಿಸಲು ನಿರ್ಧರಿಸಿದ್ದು, ಶೂನ್ಯವೇಳೆಯಲ್ಲೂ ಅವಕಾಶ ಪಡೆಯಲು ಸಾಧ್ಯವಾಗಿಲ್ಲ. ಕಡಿಮೆ ಬಡ್ಡಿದರದಲ್ಲಿ ಸರ್ಕಾರದಿಂದ ಸಾಲ ಕೊಡಿಸಲು ಹಿಂದಿನ ಸರ್ಕಾರದ ಅವಧಿಯಲ್ಲಿ ಸಹಕಾರ ಸಚಿವರು ಪ್ರಯತ್ನಿಸಿದ್ದರೂ ಅದು ಸಾಧ್ಯವಾಗಲಿಲ್ಲ ಎಂದ ಅವರು, ಸಂಸ್ಥೆ ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.
ಕೊಪ್ಪದ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಕಾರ್ಫ್ ಮತ್ತು ಕೇಸರಿ ಶಲ್ಯ ವಿವಾದವನ್ನು ಪೋಷಕರ ಸಭೆಯಲ್ಲಿ ಸರಿಪಡಿಸಲಾಗಿದೆ. ಕಾಲೇಜಿನಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿರುವುದರಿಂದ ಅದನ್ನು ಪಾಲಿಸುವುದು ಸೂಕ್ತವೆಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಪೋಷಕರು ಸಮ್ಮತಿಸಿದ್ದಾರೆ. ಇದನ್ನು ಮೀರಿ ನಡೆದರೆ ಬೇರೆ ಕಾಲೇಜಿಗೆ ವರ್ಗಾವಣೆ ಪತ್ರ ನೀಡಲಾಗುವುದು ಎಂದು ಎಚ್ಚರಿಸಿದರು.
ಭಾವನಾತ್ಮಕ ಸಂಪ್ರದಾಯಗಳನ್ನು ಬಿಡಿ ಎಂದು ಹೇಳಲಾಗದು. ಯಾವುದೇ ಸಮುದಾಯದ ಸಂಪ್ರದಾಯದ ಬಗ್ಗೆ ಪ್ರಶ್ನೆ ಮಾಡುವುದು ಸರಿಯಲ್ಲ. ಯಾವುದೇ ವಿದ್ಯಾರ್ಥಿಗಳು ನಾವು ಭಾರತಾಂಬೆಯ ಮಕ್ಕಳು ಎಂಬ ಭಾವನೆ ಹೊಂದಿರಬೇಕೆಂದು ತಿಳಿ ಹೇಳಲಾಗಿದೆ. ಯಾರದೋ ಪ್ರಚೋದನೆಯಿಂದ ಕೆಲವರು ಕಾಲೇಜಿಗೆ ಬಂದು ಕಾಲೇಜಿನ ನಿಯಮ ಉಲ್ಲಂಘಿಸಿದರೆ ಕಾಲೇಜಿನಿಂದ ಹೊರಗೆ ಕಳುಹಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದರು.
ಚುನಾವಣೆಗಳು ಹತ್ತಿರ ಬರುತ್ತಿವೆ ಎನ್ನುವಾಗ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸೌಹಾರ್ದ ವಾತಾವರಣವನ್ನು ಕೆಡಿಸಲಾಗುತ್ತಿದೆ. ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ರಾಜಕೀಯಕ್ಕೆ ಅವಕಾಶ ಇರಬಾರದು. ಹೊರಗಡೆಯಿಂದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಲಾಗುತ್ತಿರುವುದನ್ನು ಅಲ್ಲಗಳೆಯಲಾಗದು. ಕಾಣದ ಕೈಗಳು ಕೆಲಸ ಮಾಡುತ್ತಿದ್ದರೆ, ಮಟ್ಟ ಹಾಕಬೇಕಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.