ಪಿಒಪಿ ಗಣಪತಿ ವಿಗ್ರಹಗಳಿಗೆ ಕಡಿವಾಣ ಹಾಕಿ: ಸತ್ಯವತಿ


Team Udayavani, Aug 23, 2017, 2:02 PM IST

23-CHIK-4.jpg

ಚಿಕ್ಕಮಗಳೂರು: ರಾಸಾಯನಿಕ ವಸ್ತುಗಳ ಬಳಕೆಯಿಂದ ತಯಾರದ ಗಣಪತಿ ವಿಗ್ರಹಗಳನ್ನು ಜಲ ಮೂಲಗಳಲ್ಲಿ ವಿಸರ್ಜಸುವುದರಿಂದ ನೀರು ಕಲುಷಿತಗೊಂಡು ಜಲಚರಗಳ ಜೀವಕ್ಕೆ ಅಪಾಯ ಉಂಟಾಗುತ್ತದೆ. ಇವುಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಜಿ.ಸತ್ಯವತಿ ಕರೆ ನೀಡಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶ ಚತುರ್ಥಿ ಹಾಗೂ ಇತರೆ ಹಬ್ಬಗಳ ಕುರಿತ ಮುನ್ನೆಚರಿಕೆ ಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡದರು. ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೊರಾಡಲು ಬಾಲಗಂಗಾಧರನಾಥ ತಿಲಕರು ಎಲ್ಲಾ ಧರ್ಮದವರನ್ನು
ಒಗ್ಗೂಡಿಸಲು ಗಣೇಶ ಚತುರ್ಥಿಯನ್ನು ಪ್ರಾರಂಭಿಸಿದರು ಎಂದರು. ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಹಾಗೂ ರಾಸಾನಿಕಯುಕ್ತ ಸಿಂಥೆಟಿಕ್‌ ಬಣ್ಣಗಳ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಿ ಅವುಗಳನ್ನು ಕೆರೆ ಕಟ್ಟೆಗಳಲ್ಲಿ, ನದಿಗಳಲ್ಲಿ ವಿಸರ್ಜನೆ ಮಾಡುವುದರಿಂದ ನೀರು ಕಲುಷಿತಗೊಂಡು ಪಶು,
ಪಕ್ಷಿ, ಪ್ರಾಣಿ ಹಾಗೂ ಜಲಚರಗಳ ಜೀವಕ್ಕೆ ಕುತ್ತು  ಉಂಟಾಗುವುದರ ಜೊತೆಗೆ ಸಾರ್ವಜನಿಕರ ಆರೋಗ್ಯಕ್ಕೆ ದಕ್ಕೆಯಾಗುತ್ತದೆ. ಬಣ್ಣವಿಲ್ಲದ, ಗಾತ್ರದಲ್ಲಿ ಚಿಕ್ಕದಾದ ರಾಸಾಯನಿಕ ಬಳಕೆ ಇಲ್ಲದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಸ್ಥಾಪನೆ ಮಾಡಲು ಮುಂದಾಗಬೇಕು ಎಂದರು. ಗಣಪತಿ ವಿಗ್ರಹಗಳ ವಿಸರ್ಜನೆ ಸಮಯದಲ್ಲಿ ಸ್ಥಳೀಯ ಸಂಸ್ಥೆಗಳು ನಿಗಧಿ ಪಡಿಸಿರುವ ಸ್ಥಳಗಳಲ್ಲಿ ಅವುಗಳನ್ನು ವಿಸರ್ಜಸಬೇಕು. ಗಣಪತಿ ಪೆಂಡಾಲ್‌ಗ‌ಳಲ್ಲಿ ಕರ್ಕಶವಾದ ಶಬ್ದ ಹೊರಡಿಸುವ ಧ್ವನಿ ವರ್ಧಕಗಳನ್ನು ಬಳಸಬಾರದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸಾಲು ಸಾಲಾಗಿ ಹಬ್ಬಗಳು ಬರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ತಾಲೂಕು ದಂಡಾಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕಲ್ಲದೆ ಶಾಂತಿ ಸಭೆಗಳನ್ನು ನಡೆಸಬೇಕೆಂದರು. ಹೊರ ಜಿಲ್ಲೆಗಳಿಂದ ಆಗಮಿಸುವ ರಾಸಾಯನಿಕ ಬಳಕೆ ಮಾಡಿದ ವಿಗ್ರಹಗಳನ್ನು ತಡೆಹಿಡಿಯಬೇಕು. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರು ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್‌.ವೈಶಾಲಿ, ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಜಗದೀಶ್‌, ನಗರಸಭೆ ಆಯುಕ್ತೆ ತುಷಾರಮಣಿ, ಪರಿಸರ ಅಧಿಕಾರಿ ಶ್ವೇತಾ, ತಾಲೂಕಿನ ತಹಶೀಲ್ದಾರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.