ರಾಣಿಝರಿ ಪ್ರಪಾತದ ಅಂಚಲ್ಲಿ ಪ್ರಿ ವೆಡ್ಡಿಂಗ್ ಫೋಟೋಶೂಟ್
Team Udayavani, Nov 26, 2020, 6:48 PM IST
ಕೊಟ್ಟಿಗೆಹಾರ: ಸುಂಕಸಾಲೆ ಗ್ರಾಪಂ ವ್ಯಾಪ್ತಿಯ ಬಲ್ಲಾಳರಾಯನ ದುರ್ಗದ ರಾಣಿಝರಿ ಪ್ರಪಾತದ ಅಂಚಲ್ಲಿ ಮಂಗಳವಾರ ಸಂಜೆ ಅರಣ್ಯ ಇಲಾಖೆ ಅನುಮತಿ ಪಡೆಯದೆ ಪ್ರಿವೆಡ್ಡಿಂಗ್‌ಫೋಟೋ ಶೂಟ್ ಮಾಡಲಾಗಿದ್ದು ಅರಣ್ಯ ಇಲಾಖೆ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದೆ.
ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ವೇಳೆ ತೆಪ್ಪ ಮಗುಚಿ ನವಜೋಡಿಗಳು ಮೃತಪಟ್ಟ ಘಟನೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು ಅಪಾಯಕಾರಿ ಸ್ಥಳಗಳಲ್ಲಿಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡುವುದಕ್ಕೆ ಎಲ್ಲೆಡೆ ವಿರೋಧವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ರಾಣಿಝರಿಯ ಪ್ರಪಾತದ ಅಂಚಿನಲ್ಲಿ ನವಜೋಡಿಗಳು ಮಂಗಳವಾರ ಫೋಟೋಶೂಟ್‌ನಲ್ಲಿ ತೊಡಗಿದ್ದರೂ ಕೂಡ ಅರಣ್ಯ ಇಲಾಖೆ ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ರಾಣಿಝರಿ ಪ್ರಪಾತ, ದೇವರಮನೆ, ಚಾರ್ಮಾಡಿ ಘಾಟ್ ಶ್ರೇಣಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿದ್ದು ಅರಣ್ಯದೊಳಗೆ ಪ್ರವೇಶಿಸಲು ಅರಣ್ಯ ಇಲಾಖೆ ಅನುಮತಿ ಕಡ್ಡಾಯ. ಆದರೆ ಹಾಡಹಗಲೇ ನಾಲ್ಕೈದು ಜನರ ಗುಂಪು ಅಪಾಯಕಾರಿ ರಾಣಿಝರಿಯ ಪ್ರಪಾತದಂಚಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ತೊಡಗಿದ್ದರೂ ಕೂಡ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ತಂಡ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಲು ಅರಣ್ಯ ಇಲಾಖೆ ಅನುಮತಿ ಪಡೆದಿಲ್ಲ. ಪ್ರಪಾತದ ಅಂಚಿನಲ್ಲಿ ಪ್ರೀ ವೆಡ್ಡಿಂಗ್ ಶೂಟ್‌ಅಪಾಯಕಾರಿಯಾಗಿರುವುದರಿಂದ ಇದಕ್ಕೆಅನುಮತಿ ನೀಡುವುದಿಲ್ಲ.?-ಯಾಸಿನ್, ಉಪ ವಲಯ ಅರಣ್ಯಾಧಿಕಾರಿ
ದುರ್ಗದಹಳ್ಳಿ, ದೇವರಮನೆ, ರಾಣಿಝರಿ ಮುಂತಾಧ ಸ್ಥಳಗಳಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಲು ಅವಕಾಶ ನೀಡಬಾರದು. ರಾಣಿಝರಿಯ ಪ್ರಪಾತದ ಅಂಚಿನಲ್ಲಿ ಫೋಟೋ ಶೂಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. –ಅಭಿ ಗ್ರಾಮಸ್ಥರು, ದುರ್ಗದಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.