ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ
Team Udayavani, Feb 4, 2019, 10:29 AM IST
ಬಾಳೆಹೊನ್ನೂರು: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ, ಎಂಎಡಿಬಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಅವರು ಸಮೀಪದ ಖಾಂಡ್ಯ ಹೋಬಳಿಯ ದೇವದಾನ ಗ್ರಾ.ಪಂ.ವ್ಯಾಪ್ತಿಯ ಹುಣಸೇಹಳ್ಳಿ ಗ್ರಾಮದಲ್ಲಿ 10ಕೋಟಿಗೂ ಅಧಿಕ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು. ಹುಣಸೇ ಹಳ್ಳಿ-ತುಂಬಳ್ಳಿಪುರ ರಸ್ತೆಗೆ ಈ ಹಿಂದೆ ಮೂರು ಬಾರಿ ಅನುದಾನ ಮಂಜೂರಾಗಿದ್ದರೂ ಸಹ ಚಿಕ್ಕಮಗಳೂರು ಕ್ಷೇತ್ರದ ಶಾಸಕರು ತನ್ನ ತಾಲೂಕು ವ್ಯಾಪ್ತಿಗೆ ಈ ಗ್ರಾಮ ಬರುತ್ತದೆ ಎಂದು ತಡೆ ಹಿಡಿದಿದ್ದರು. ಆದರೂ ಸತತ ಪ್ರಯತ್ನ ಮಾಡಿ ಈ ರಸ್ತೆಯ ಅಭಿವೃದ್ಧಿ ಕಾರ್ಯವನ್ನು 1.35 ಕೋಟಿ ರೂ. ವೆಚ್ಚದಲ್ಲಿ ಮಂಜೂರು ಮಾಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್ ಮಾತನಾಡಿ, ಈ ಹಿಂದೆ ಬಿಜೆಪಿಯವರು ಕಡವಂತಿ ರಸ್ತೆಯನ್ನು ರಾಜೇಗೌಡರು ಮಾಡಿಸುವಂತೆ ಸವಾಲು ಹಾಕಿದ್ದರು. ಅದನ್ನು ತಾವು ಸ್ವೀಕರಿಸಿ, ಇಂದು ಆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು. ಖಾಂಡ್ಯ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಬಿ.ಎನ್.ಸೋಮೇಶ್ ಮಾತನಾಡಿದರು. ದೇವದಾನ ಗ್ರಾಪಂ ಅಧ್ಯಕ್ಷೆ ಇಂದಿರಾ, ಉಪಾಧ್ಯಕ್ಷೆ ಫರ್ಹಾತ್ ಬಾನು, ಕಾಂಗ್ರೆಸ್ ಮುಖಂಡರಾದ ಎಸ್.ಜೆ.ಜಯಶೀಲ್, ಗುರುಮೂರ್ತಿ, ಮಸೀಗದ್ದೆ ಸತೀಶ್, ಪಿಎಸಿಎಸ್ ಅಧ್ಯಕ್ಷ ಕೆ.ಎಲ್.ಚಂದ್ರೇಗೌಡ, ಬಿ.ಕೆ.ಸತೀಶ್, ಗಣೇಶ್, ಮಸೀಗದ್ದೆ ಸತೀಶ್, ಎಸ್.ಪೇಟೆ ಸತೀಶ್, ರಾಘವೇಂದ್ರ, ಎಂ.ಬಿ.ರತನ್, ಮಹೇಂದ್ರ, ಪಿ.ಎ.ಮಂಜುನಾಥ್, ಬಿ.ಎನ್.ಸಚಿನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.