ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೋರಾಟ
Team Udayavani, Dec 13, 2020, 4:51 PM IST
ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೊಳಪಡುವ ಕೆಲವು ಗ್ರಾಪಂಗಳಲ್ಲಿನಾಮಪತ್ರ ಸಲ್ಲಿಸಿದ್ದು ಅವರ ಮನವೊಲಿಸಿ ನಾಮಪತ್ರ ವಾಪಸ್ ತೆಗೆಸುವುದು ಮತ್ತುಡಿ.15ರಂದು ಬೃಹತ್ ಪ್ರತಿಭಟನೆ ನಡೆಸುವ ಸಲುವಾಗಿ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಕಸ್ತೂರಿ ರಂಗನ್ ವರದಿ ವಿರೋ ಧಿ ಹೋರಾಟ ಸಮಿತಿ ಸಂಚಾಲಕ ಎಸ್. ವಿಜಯಕುಮಾರ್, ಹಾಗೂ ಕೆಜಿಎಫ್ ಅಧ್ಯಕ್ಷ ಡಾ| ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಸರ ಸೂಕ್ಷ್ಮವಲಯ ವ್ಯಾಪ್ತಿಗೆ ಒಳಪಡುವ ಗ್ರಾಮ ಪಂಚಾಯತ್ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸಿದ್ದರು. ಆದರೆ ಕೆಲವು ಪಂಚಾಯತ್‌ಗಳಲ್ಲಿ ಈಗಾಗಲೇ ನಾಮಪತ್ರಗಳನ್ನು ಸಲ್ಲಿಸಿದ್ದು, ವಿವಿಧ ಪಕ್ಷಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ, ಅಭ್ಯರ್ಥಿಗಳ ಮನವೊಲಿಸಿ ನಾಮಪತ್ರಹಿಂಪಡೆಯುವಂತೆ ನೋಡಿಕೊಳ್ಳಲು ಸಭೆಯಲ್ಲಿ ನಿರ್ಧಾರಿಸಿದರು.
ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ನಾಮಪತ್ರಗಳನ್ನು ಹಿಂಪಡೆಯುವ ಜವಾಬ್ದಾರಿಯನ್ನು ಆಯಾ ಪಕ್ಷದ ಮುಖಂಡರು ವಹಿಸಿಕೊಳ್ಳಬೇಕು.ಕರ್ನಾಟಕ ಬೆಳೆಗಾರರ ಒಕ್ಕೂಟ ಮತ್ತುಹೋರಾಟ ಸಮಿತಿ ಜಂಟಿಯಾಗಿ ಡಿ.15ರಂದು ಆಯೋಜಿಸಿರುವ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಒಳಪಡುವಗ್ರಾಮಗಳ ಜನರು ಭಾಗವಹಿಸುವಂತೆ ನೋಡಿಕೊಳ್ಳುವುದು ಹಾಗೂ ಖಾಂಡ್ಯದಲ್ಲಿ ಪ್ರತ್ಯೇಕವಾಗಿ ನಡೆಸುತ್ತಿರುವ ಹೋರಾಟವನ್ನು ಕೈಬಿಟ್ಟು ಅವರು ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕೇಳಿಕೊಂಡರು.
ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸುವಂತೆ ನೋಡಿಕೊಳ್ಳಲು ಆಯಾ ಪಕ್ಷದ ಮುಖಂಡರಿಗೆ ಸೂಚಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್ .ಭೋಜೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮರಡಪ್ಪ, ಎಚ್.ಡಿ. ತಮ್ಮಯ್ಯ, ಕೆಜಿಎಫ್‌ನ ಬಾಲಕೃಷ್ಣ, ಎ.ಕೆ. ವಸಂತೇಗೌಡ, ಜೆಡಿ ಎಸ್‌ನಎಚ್.ಎಚ್. ದೇವರಾಜ್, ಜಿ.ಎಸ್. ಚಂದ್ರಪ್ಪ, ಸಿಪಿಐನ ಎಚ್.ಎಂ. ರೇಣುಕಾರಾಧ್ಯ, ಜಿ.ರಘು, ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ.ಎಂ.ಸಂದೀಪ್, ಶಿವಾನಂದಸ್ವಾಮಿ, ಕನ್ನಡಪರ ಸಂಘಟನೆಗಳ ಜಿಲ್ಲಾಧ್ಯಕ್ಷರಾದ ತೇಗೂರು ಜಗದೀಶ್, ಪಿ.ಸಿ. ರಾಜೇಗೌಡ, ಅನಿಲ್‌ಕುಮಾರ್, ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ಪರಮೇಶ್, ರೈತ ಮುಖಂಡ ಗುರುಶಾಂತಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.