ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ
Team Udayavani, Sep 22, 2020, 7:52 PM IST
ಚಿಕ್ಕಮಗಳೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಗೆ ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿ ಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಸೋಮವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಿಪಿಐ, ಕಾಂಗ್ರೆಸ್, ಡಿಎಸ್‌ಎಸ್, ರೈತ ಸಂಘಟನೆಯ ವಿವಿಧ ಬಣಗಳ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಅಂಗೀಕರಿಸಿದ ಎಪಿಎಂಸಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನವಾಗಿದೆ. ಕೇಂದ್ರ ಸರ್ಕಾರ ಪ್ರಜಾತಂತ್ರಕ್ಕೆ ವಿರುದ್ಧವಾಗಿದ್ದುಒಕ್ಕೂಟ ವ್ಯವಸ್ಥೆಯನ್ನೇ ಮರೆತಿದೆ. ಕೇಂದ್ರದ ಸಚಿವೆಯೊಬ್ಬರು ತಿದ್ದುಪಡಿ ವಿರೋಧಿಸಿ ರಾಜೀನಾಮೆಗೆ ಮುಂದಾಗಿದ್ದರೂ ಶಾಸನ ಸಭೆಗಳಿಗೆ ಬೆಲೆ ಕೊಡದೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸಿದೆ ಎಂದು ಆರೋಪಿಸಿದರು.
ಮೂರು ಕಾಯ್ದೆಗಳಿಗೆ ತಿದ್ದುಪಡಿ ತರುವುದರಿಂದ ಬಂಡವಾಳ ಶಾಹಿಗಳು, ಉದ್ದಿಮೆದಾರರಿಗೆ ಲಾಭವಾಗಲಿದೆಯೇ ವಿನಾ ರೈತರಿಗೆ ಯಾವುದೇ ಪ್ರಯೋಜನವಿಲ್ಲ, ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ, ಕಾರ್ಮಿಕರ ಹಕ್ಕು ದಮನ ಮಾಡುವ ಷಡ್ಯಂತ್ರ ನಡೆಸಿದೆ ಎಂದು ದೂರಿದರು. ಸಿಪಿಐನ ಎಚ್.ಎಂ. ರೇಣುಕಾರಾಧ್ಯ, ಬಿ. ಅಮ್ಜದ್, ರಘು, ಡಿಎಸ್‌ಎಸ್ ಅಣ್ಣಯ್ಯ, ರೈತಸಂಘದ ಉದ್ದೇಗೌಡ, ಗುರುಶಾಂತಪ್ಪ, ರವೀಶ್ ಬಸಪ್ಪ ಮಾತನಾಡಿದರು. ಜಿಲ್ಲಾಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.