ಪ್ರಭಾರ ಪಿಡಿಒ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
Team Udayavani, Jan 30, 2019, 9:22 AM IST
ಕಡೂರು: ತಾಲೂಕಿನ ಸೋಮನಹಳ್ಳಿ (ಪ್ರಭಾರ) ಪಿಡಿಒ ಎಸ್. ಜಯಪ್ಪನವರ ಮೇಲೆ ನಡೆದ ಹಲ್ಲೆ ಖಂಡಿಸಿ ತಾಲೂಕು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರ ಸಂಘದಿಂದ ಹಲ್ಲೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಮನವಿ ಸಲ್ಲಿಸಲಾಯಿತು.
ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಿಂದ ಬಂದಿದ್ದ ಪಿಡಿಒಗಳು, ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ಮಾತನಾಡಿ, ಜಯಪ್ಪ ಉತ್ತಮ ಕೆಲಸಗಾರರು. ಹಿರಿಯ ಅಧಿಕಾರಿಯಾಗಿದ್ದರು. ಉತ್ತಮ ಒಡನಾಟದಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗುತ್ತಿದ್ದರು. ಇಂತಹ ಅಧಿಕಾರಿಗೆ ಸೋಮನಹಳ್ಳಿ ಗ್ರಾಮ ಪಂಚಾಯತ್ ಸದಸ್ಯೆ, ಸದಸ್ಯ ಮತ್ತು ಅವರ ಪತಿ ಹಲ್ಲೆ ಮಾಡಿದ್ದಾರೆ. ಇದನ್ನು ನಮ್ಮ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದರು.
ಜಯಪ್ಪನವರ ಮೇಲೆ ಹಲ್ಲೆ ಮಾಡಿರುವ ಗ್ರಾಪಂ ಸದಸ್ಯೆ ಡಿ. ಲಲಿತಾ, ನಾಗಮ್ಮ, ಆಕಾಶ ನಾಯ್ಕ ಅವರನ್ನು ದುರ್ನಡತೆಯ ಆಧಾರದ ಮೇಲೆ ಸದಸ್ಯತ್ವದಿಂದ ವಜಾಗೊಳಿಸಲು ಸರಕಾರಕ್ಕೆ ಒತ್ತಾಯ ಮಾಡುತ್ತೇವೆ. ಗ್ರಾಮ ಪಂಚಾಯತ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳ ಮೇಲೆ ನಿಂದನೆ ಮತ್ತು ದೈಹಿಕ ಹಲ್ಲೆಯ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು ನೌಕರರಿಗೆ ಸೂಕ್ತ ಭದ್ರತೆ ಇಲ್ಲದಿರುವುದೆ ಇಂತಹ ಪ್ರಕರಣಗಳಿಗೆ ಕಾರಣವಾಗಿದೆ. ಇಂತಹ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಾನೂನು ಕ್ರಮ ಕೈಗೊಂಡು ನ್ಯಾಯ ದೊರಕಿಸಬೇಕೆಂದು ಮನವಿ ಮಾಡಿದರು.
ತಾಪಂ ಸಹಾಯಕ ನಿರ್ದೇಶಕಿ ನಯನ, ಅಭಿವೃದ್ಧಿ ಅಧಿಕಾರಿಗಳಾದ ರಾಜೇಶ್, ರಾಜು, ಮಂಜುನಾಥ್, ಸತೀಶ್ ಮಲ್ಲಿಕಾರ್ಜುನ ಮತ್ತಿತರರು ಇದ್ದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಮಹೇಶ್ಚಂದ್ರ ಮಾತನಾಡಿ, ಪಿಡಿಒ ಮೇಲೆ ನಡೆದ ಹಲ್ಲೆ ಖಂಡಿಸಿ ಸಂಘಟನೆಯಿಂದ ನೀಡಿರುವ ಮನವಿಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.