ದತ್ತ ಮೂರ್ತಿ ಮೆರವಣಿಗೆಗೆ ಪೊಲಿಸರ ವಿರೋಧ: ಮುತಾಲಿಕ್ ಸೇರಿ ದತ್ತ ಭಕ್ತರಿಂದ ಪ್ರತಿಭಟನೆ
Team Udayavani, Oct 13, 2019, 12:31 PM IST
ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಶೋಭಾಯಾತ್ರೆಗೆ ದತ್ರಾತ್ರೇಯರ ಶಿಲಾ ವಿಗ್ರಹ ತರಲು ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆ ದತ್ತಮಾಲಾದಾರಿಗಳಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುಥಾಲಿಕ್, ಕಾಶ್ಮೀರಿ ಪಂಡಿತ್ ರಾಹುಲ್ ಕೌಲ್, ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಕಾಳಿ ಸ್ವಾಮೀಜಿ ಮತ್ತು ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ನಗರದ ಬಸವನಹಳ್ಳಿ ಮುಖ್ಯರಸ್ತೆಯ ಶಂಕರಮಠದ ಎದುರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಗುತ್ತಿದೆ.
ಕಾರವಾರ ಭಕ್ತರು ನೀಡಿರೋ ದತ್ತ ಮೂರ್ತಿಯನ್ನು ಮೆರವಣಿಗೆಯ ಮೂಲಕ ಕೊಂಡೊಯ್ಯಲು ಅವಕಾಶ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯ ನಡೆಸುತ್ತಿದ್ದಾರೆ.
ಆದರೆ ಮೂರ್ತಿ ಇರುವ ಜಾಗದಲ್ಲಿ ಪೊಲೀಸರು ಸರ್ಪಗಾವಲು ಹಾಕಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.