ಸಂದಲ್‌ ಉರುಸ್ ‌ಗೆ ಅನುಮತಿ ನೀಡಲು ಆಗ್ರಹಿಸಿ ಧರಣಿ


Team Udayavani, Mar 31, 2021, 8:39 PM IST

nvcbhgfhn

ಚಿಕ್ಕಮಗಳೂರು: ಬಾಬಾಬುಡನ್‌ಗಿರಿ ದರ್ಗಾದಲ್ಲಿ ನಡೆಯುವ ಉರುಸ್‌ ಅಂಗವಾಗಿ ಸೋಮವಾರ ನಡೆಯಬೇಕಿದ್ದ ಸಂದಲ್‌ ಉರುಸ್‌ ಅನ್ನು ಶಾಖಾದ್ರಿ ನೇತೃತ್ವದಲ್ಲಿ ನಡೆಸಲು ಜಿಲ್ಲಾಡಳಿತ ನಿರಾಕರಿಸಿದ್ದು, ಅನುಮತಿ ನೀಡದ ಹಿನ್ನೆಲೆಯಲ್ಲಿ ಶಾಖಾದ್ರಿ ನೇತೃತ್ವದಲ್ಲಿ ಭಕ್ತರು ದರ್ಗಾದ ಎದುರು ಕೆಲಹೊತ್ತು ಧರಣಿ ನಡೆಸಿ ಜಿಲ್ಲಾಡಳಿತದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಬಾಬಾಬುಡನ್‌ಗಿರಿ ಉರುಸ್‌ ಹಿನ್ನೆಲೆಯಲ್ಲಿ ಶಾಖಾದ್ರಿ ಚಿಕ್ಕಮಗಳೂರು ನಗರದಿಂದ ಅತ್ತಿಗುಂಡಿ ಮಾರ್ಗವಾಗಿ ಬಾಬಾಬುಡನ್‌ಗಿರಿಗೆ ಸಂದಲ್‌(ಗಂಧ) ಕೊಂಡೊಯ್ದಿದ್ದರು. ಗಿರಿ ಆವರಣದಲ್ಲಿ ಶಾಖಾದ್ರಿ ತಮ್ಮ ನೇತೃತ್ವದಲ್ಲಿ ಧಾರ್ಮಿಕ ವಿಧಿ ಗಳನ್ನು ನಡೆಸಲು ಅವಕಾಶ ನೀಡಬೇಕೆಂದು, ಗಂಧಲೇಪನ ಸೇರಿದಂತೆ ಗೋರಿಗಳಿಗೆ ಹಸಿರುಹೊದಿಕೆ ಅವಕಾಶ ನೀಡಬೇಕೆಂದು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಬಳಿ ಕೇಳಿ ಕೊಂಡರು.

ಆದರೆ ನ್ಯಾಯಾಲಯದ ಆದೇಶದಂತೆ ಶಾಖಾದ್ರಿಗೆ ಧಾರ್ಮಿಕ ವಿಧಿ ಗಳನ್ನು ಕೈಗೊಳ್ಳಲು ಅವಕಾಶವಿಲ್ಲ ಎಂದು ಜಿಲ್ಲಾ ಧಿಕಾರಿ ಶಾಖಾದ್ರಿಯ ಪ್ರಸ್ತಾವವನ್ನು ತಿರಸ್ಕರಿಸಿದರು. ಶಾಖಾದ್ರಿ ಮಾತನಾಡಿ, ಅನಾದಿ ಕಾಲದಿಂದಲೂ ಶಾಖಾದ್ರಿ ನೇತೃತ್ವದಲ್ಲಿಯೇ ಉರುಸ್‌ನ ಧಾರ್ಮಿಕ ವಿ ಧಿಗಳನ್ನು ಆಚರಿಸುವುದು ಸಂಪ್ರದಾಯವಾಗಿದೆ. ಇದು 1976ಕ್ಕೂ ಹಿಂದಿನ ಆಚರಣೆಯಾಗಿದೆ. ನ್ಯಾಯಾಲಯ ಹಾಗೂ ಸರ್ಕಾರದ ಆದೇಶದಲ್ಲಿ 1975ಕ್ಕೂ ಹಿಂದಿನ ಆದೇಶ ಪಾಲಿಸಲು ತಿಳಿಸಲಾಗಿದೆ.

ಉರುಸ್‌ ಆಚರಣೆ 1975ಕ್ಕೂ ಮುಂಚಿನ ಆಚರಣೆಯಾಗಿದ್ದು, ಇದಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿದರೂ ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡಲಿಲ್ಲ. ನಂತರ ಶಾಖಾದ್ರಿ ನೇತೃತ್ವದಲ್ಲಿ ಸಾವಿರಾರು ಸೂಫಿ ಪಂಥದ ಭಕ್ತರು, ಫಕೀರರು ಬಾಬಾಬುಡನ್‌ಗಿರಿ ದರ್ಗಾದ ಗೇಟ್‌ ಎದುರು ಜಿಲ್ಲಾಡಳಿತದ ಕ್ರಮ ಖಂಡಿಸಿ ಧರಣಿ ನಡೆಸಿದರು. ಬಳಿಕ ಜಿಲ್ಲಾಡಳಿಕ್ಕೆ ಮನವಿ ಸಲ್ಲಿಸಿ ಸಂದಲ್‌ನೊಂದಿಗೆ ಅತ್ತಿಗುಂಡಿಗೆ ಹಿಂದಿರುಗಿದರು. ಉರುಸ್‌ ಹಿನ್ನೆಲೆಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಸೂಫಿ ಸಂತರು ಹಾಗೂ ಬೆಂಗಳೂರಿನ ಸರ್ವ ಧರ್ಮ ಪೀಠದ ಸಂಗಮ್‌ ಆನಂದ್‌ ಸ್ವಾಮೀಜಿ ಉರುಸ್‌ ಹಿನ್ನೆಲೆಯಲ್ಲಿ ಬಾಬಾ ಬುಡನ್‌ಗಿರಿಗೆ ಭೇಟಿ ನೀಡಿದ್ದರು. ಸೂಫಿ ಪಂಥದ ಐದು ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರು ಉರುಸ್‌ ಹಿನ್ನೆಲೆಯಲ್ಲಿ ಗಿರಿಗೆ ಭೇಟಿ ನೀಡಿದ್ದರು.

ಮುಸ್ಲಿಂ ಸಂಘಟನೆಗಳ ಮುಖಂಡ ಯೂಸೂಫ್‌ ಹಾಜಿ ಸೇರಿದಂತೆ ಸಮುದಾಯದ ಅನೇಕ ಮುಖಂಡರು ಇದ್ದರು. ಉರುಸ್‌ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿರುವ ಸಾವಿರಾರು ಸೂಫಿ ಪಂಥದ ಅನುಯಾಯಿಗಳು, ಫಕೀರರು ಮಂಗಳವಾರ ಧಾರ್ಮಿಕ ಸಭೆ ನಡೆಸಿದ್ದು, ಬುಧವಾರ ನಾಗೇನಹಳ್ಳಿ ದರ್ಗಾದಲ್ಲಿ ಉರುಸ್‌ ಕಾರ್ಯಕ್ರಮ ನಡೆಯಲಿದೆ. ಉರುಸ್‌ ಹಿನ್ನೆಲೆಯಲ್ಲಿ ಬಾಬಾ ಬಡನ್‌ಗಿರಿ ಆವರಣದಲ್ಲಿ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ದರ್ಗಾದ ದರ್ಶನ ಪಡೆದರು. ಸ್ಥಳದಲ್ಲಿ ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎಂ.ಎಚ್‌. ಅಕ್ಷಯ್‌, ಅಪರ ಜಿಲ್ಲಾ ಧಿಕಾರಿ ರೂಪಾ ಸೇರಿದಂತೆ ಧಾರ್ಮಿಕ ದತ್ತಿ ಇಲಾಖೆಯ ಅಧಿ ಕಾರಿಗಳು ಇದ್ದರು.

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chikkamagaluru

Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.