ದತ್ತ ಭಕ್ತರಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸಿ
Team Udayavani, Nov 26, 2018, 4:23 PM IST
ಚಿಕ್ಕಮಗಳೂರು: ದತ್ತಜಯಂತಿ ಕಾರ್ಯಕ್ರಮ ಡಿ.20 ರಿಂದ 22 ರವರೆಗೆ ಮೂರು ದಿನ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿ. 20 ರಂದು ಅನಸೂಯಾ ಜಯಂತಿ ನಡೆಯಲಿದ್ದು, 22 ರಂದು ದತ್ತ ಜಯಂತಿ ನಡೆಯಲಿದೆ. ದತ್ತಜಯಂತಿಗೆ ಬರುವ
ಭಕ್ತಾದಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಯಂತಿಯಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡುವಂತೆ, ಗಣ್ಯರಿಗೆ ಹಾಗೂ ಸ್ವಯಂ ಸೇವಕರಿಗೆ ಗುರುತಿನಚೀಟಿ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ರಕ್ಷಣಾಧಿಕಾರಿಗೆ ತಿಳಿಸಿದ ಅವರು, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ರಸ್ತೆಗಳನ್ನು ದುರಸ್ತಿಪಡಿಸಿ ರಸ್ತೆ ಪಕ್ಕದಲ್ಲಿನ ಗಿಡಗಂಟಿಗಳನ್ನು ತೆಗೆಯಬೇಕು ಹಾಗೂ ಸೂಚನಾ ಫಲಕಗಳನ್ನು ಅಳವಡಿಸುವಂತೆ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿ, ಹೊನ್ನಮ್ಮನಹಳ್ಳದ ಬಳಿಯ ಸ್ನಾನಘಟ್ಟವನ್ನು ದುರಸ್ತಿಪಡಿಸಿ ಸ್ವತ್ಛಗೊಳಿಸುವಂತೆ ಅತ್ತಿಗುಂಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು.
ಜಯಂತಿ ನಡೆಯುವ 3 ದಿನವು ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ, ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ಔಷಧಿ, ಅಂಬುಲೆನ್ಸ್‌ನೊಂದಿಗೆ ವೈದ್ಯಾಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಭಕ್ತಾದಿಗಳ ಅಗತ್ಯಕ್ಕೆ ತಕ್ಕಂತೆ ಕೆ.ಎಸ್.ಆರ್ .ಟಿ.ಸಿ ಹಾಗೂ ಖಾಸಗಿ ಮಿನಿ ಬಸ್ ಸೌಕರ್ಯ ಏರ್ಪಡಿಸುವಂತೆ ಕೆ.ಎಸ್.ಆರ್.ಟಿ.ಸಿ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದ ಅವರು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೀರಿನ ಟ್ಯಾಂಕರ್‌ಗಳನ್ನು ಹೆಚ್ಚಾಗಿ ಒದಗಿಸುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.
ದತ್ತ ಪೀಠಕ್ಕೆ ಬರುವ ಸ್ವಯಂ ಸೇವಕರಿಗೆ ಜಿಲ್ಲಾಡಳಿತದಿಂದ ಪ್ರಸಾದ ವಿತರಣೆ ಮಾಡಲಾಗುವುದು. ಜಯಂತಿಯು
ಶಾಂತಿಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು. ಹೊರ ಜಿಲ್ಲೆಯಿಂದ ಬರುವ ಸ್ವಯಂ ಸೇವಕರಿಗೆ ಶಾಂತಿಯಿಂದ ಕಾರ್ಯಕ್ರಮ ನಡೆಯಲು ಸಹಕರಿಸುವಂತೆ ತಿಳಿಸಬೇಕೆಂದು ಮುಖಂಡರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದ ಭದ್ರತಾ ವ್ಯವಸ್ಥೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಹರೀಶ್ ಪಾಂಡೆ ಮಾಹಿತಿ ನೀಡಿ, ಯಾವುದೇ ಅಹಿತಕರಘಟನೆಗೆ ತಾವು ಅವಕಾಶ ನೀಡದೆ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಎಲ್ಲರ ಸಹಕಾರ ಅತೀ ಮುಖ್ಯ. ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಅಗತ್ಯ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ನಂದಕುಮಾರ್, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನಪ್ಪ ಹಾಗೂ ಸಂಘಟನೆ ಮುಖಂಡರು ಹಾಜರಿದ್ದರು.
ಜಯಂತಿಯಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡುವಂತೆ, ಗಣ್ಯರಿಗೆ ಹಾಗೂ ಸ್ವಯಂ ಸೇವಕರಿಗೆ ಗುರುತಿನಚೀಟಿ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ರಕ್ಷಣಾಧಿಕಾರಿಗೆ ತಿಳಿಸಿದ ಅವರು, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ರಸ್ತೆಗಳನ್ನು ದುರಸ್ತಿಪಡಿಸಿ ರಸ್ತೆ ಪಕ್ಕದಲ್ಲಿನ ಗಿಡಗಂಟಿಗಳನ್ನು ತೆಗೆಯಬೇಕು ಹಾಗೂ ಸೂಚನಾ ಫಲಕ ಅಳವಡಿಸುವಂತೆ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿ, ಹೊನ್ನಮ್ಮನಹಳ್ಳದ ಬಳಿಯ ಸ್ನಾನಘಟ್ಟವನ್ನು ದುರಸ್ತಿಪಡಿಸಿ ಸ್ವತ್ಛಗೊಳಿಸುವಂತೆ ಅತ್ತಿಗುಂಡಿ ಗ್ರಾಪಂ ಪಿಡಿಒಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.