ದೇಶಕ್ಕೆ ರಾಜೀವ ಗಾಂಧಿ ಕೊಡುಗೆ ಅಪಾರ
Team Udayavani, May 22, 2018, 4:16 PM IST
ಶೃಂಗೇರಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವವನ್ನು ಎತ್ತಿ ಹಿಡಿದಿದ್ದರು.ದೂರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿ ಕ್ರಾಂತಿ ಉಂಟು ಮಾಡಿ ಸಂಪರ್ಕ ಸೇವೆಯನ್ನು ಅಭಿವೃದ್ಧಿ ಪಡಿಸಿದ ಕೀರ್ತಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ಗೋಪಾಲಹೆಗ್ಡೆ ಹೇಳಿದರು.
ಪಟ್ಟಣದಲ್ಲಿ ರಾಜೀವ್ ಗಾಂಧಿಪುಣ್ಯ ತಿಥಿ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀ ಮಠದ ಭಕ್ತರಾಗಿದ್ದ ರಾಜೀವ್‌ಗಾಂಧಿ, ಪೀಠಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು, ಜಗದ್ಗುರುಗಳ ಆಶೀರ್ವಾದ ಪಡೆದಿದ್ದರು ಎಂದರು.
ಬ್ಲಾಕ್ ಕಾಂಗ್ರೆಸ್ ಮಹಿಳಾ ಕಾರ್ಯಧ್ಯಕ್ಷೆ ಸೌಮ್ಯ ಮಾತನಾಡಿ, ಶತಮಾನ ಇತಿಹಾಸವಿರುವ ಕಾಂಗ್ರೆಸ್ ಪಕ್ಷದಲ್ಲಿ ನೆಹರೂ ಕುಟುಂಬವು ದೇಶಕ್ಕಾಗಿ ತಮ್ಮ ಜೀವವನ್ನೇ ಒತ್ತೆ ಇಟ್ಟಿದ್ದಾರೆ. ದೇಶ ಕಂಡ ಅಪ್ರತಿಮ ನಾಯಕರಲ್ಲಿ ರಾಜೀವ್ ಗಾಂಧಿ ಒಬ್ಬರಾಗಿದ್ದು, ಹಂತಕರ ದಾಳಿಗೆ ಬಲಿಯಾದರು. ಆದರೆ ಅವರು ಹಾಕಿಕೊಟ್ಟ ಮಾರ್ಗವು ದೇಶದ ಪ್ರಗತಿಗೆ ಪೂರಕವಾಗಿದೆ ಎಂದರು.
ಕಾಂಗ್ರೆಸ್ ವಕ್ತಾರ ಉಮೇಶ್ ಪುದುವಾಳ್ ಮಾತನಾಡಿ, ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ರಾಜೀವ್ ಗಾಂಧಿ ಯವರ ಕೊಡುಗೆ ಅಪಾರ. ಅತಿ ಚಿಕ್ಕ ವಯಸ್ಸಿನಲ್ಲಿ ದೇಶದ ಪ್ರಧಾನಿಯಾಗಿ, ಹಲವಾರು ಅಭೂತಪೂರ್ವ ಯೋಜನೆ ಅನುಷ್ಠಾನಗೊಳಿಸಿದರು. ತಾಯಿ ಇಂದಿರಾ ಗಾಂಧಿ ಮಾರ್ಗದರ್ಶನದಲ್ಲಿ ದೇಶದ ಬಡ ಜನರ ಕಷ್ಟವನ್ನು ಅರಿತು ಅವರ ಸೇವೆಗಾಗಿ ಸದಾ ದುಡಿದಿದ್ದರು ಎಂದರು.
ಇದೇ ಸಂದರ್ಭದಲ್ಲಿ ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಮುಖಂಡರಾದ ವಿದ್ಯಾರಣ್ಯಪುರ ಗ್ರಾ.ಪಂ.ಅಧ್ಯಕ್ಷ ರಾಜೇಶ್ ಶೆಟ್ಟಿ,ನಾಗರಾಜ ಶ್ರೇಷ್ಠಿ, ಮುರುಳಿಧರ ಪೈ, ವಿಜಯಕುಮಾರ್, ಪ್ರಕಾಶ್, ನಾಗೇಶ್ ಮತ್ತಿತರರು ಇದ್ದರು.
ಯುವಸಮೂಹಕ್ಕೆ ರಾಜೀವ ಗಾಂಧಿ ಮಾದರಿ
ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಸೋಮವಾರ ದಿವಂಗತ ರಾಜೀವ್ ಗಾಂಧಿಯವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ನಡೆಯಿತು. ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿದರು. ಇದೇ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಡಿ.ಎಲ್. ವಿಜಯಕುಮಾರ್, ರಾಜೀವ್ ಗಾಂಧಿಯವರು ಪ್ರಧಾನಮಂತ್ರಿಯಾಗಿದ್ದಾಗ ಈ ದೇಶಕ್ಕೆ ಅದರಲ್ಲೂ ಯುವ ಸಮೂಹವನ್ನು ಗಮನದಲ್ಲಿಟ್ಟು ಹಲವಾರು ಯೋಜನೆಯನ್ನು ಜಾರಿಗೆ ತಂದಿದ್ದರು ಎಂದು ಹೇಳಿದರು.
ಯುವಕರು ಮತದಾನದಲ್ಲಿ ತೊಡಗಬೇಕು. ಈ ಮೂಲಕ ಅವರಿಗೆ ಪ್ರಜಾಪ್ರಭುತ್ವದ ಮಹತ್ವ ತಿಳಿಸಿಕೊಡಬೇಕೆಂಬ ಸದುದ್ದೇಶದಿಂದ 18 ವರ್ಷ ತುಂಬಿದವರಿಗೆ ಮತದಾನದ ಹಕ್ಕನ್ನು ನೀಡಿದರು. ಮಾಹಿತಿ ತಂತ್ರಜ್ಞಾನವನ್ನು ದೇಶದಲ್ಲಿ ಮಿಂಚಿನ ರೀತಿಯಲ್ಲಿ ಪಸರಿಸುವ ಕೆಲಸ ಮಾಡಿದ್ದರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಸದಸ್ಯ ಬಿ.ಎಂ. ಸಂದೀಪ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್. ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಯುವಘಟಕದ ಜಿಲ್ಲಾಧ್ಯಕ್ಷ ಶಿವಕುಮಾರ್, ಜಿಲ್ಲಾ ವಕ್ತಾರ ಎಂ.ಸಿ.ಶಿವಾನಂದಸ್ವಾಮಿ, ಮುಖಂಡರಾದ ಎ.ಎನ್.ಮಹೇಶ್, ರೂಬಿನ್ ಮೋಸಸ್, ಚೇತನಾ, ಕಾರ್ತಿಕ್ ಚೆಟ್ಟಿಯಾರ್, ಓಂಕಾರೇಗೌಡ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.