ಸಾವಿನಲ್ಲೂ ಸಾರ್ಥಕತೆ : ಮೆದುಳು ನಿಷ್ಕ್ರಿಯಗೊಂಡ ಯುವತಿಯ ಹೃದಯ ಬೆಂಗಳೂರಿಗೆ ರವಾನೆ
ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಕಾಫಿನಾಡಿನ ರಕ್ಷಿತಾ
Team Udayavani, Sep 22, 2022, 12:25 PM IST
ಚಿಕ್ಕಮಗಳೂರು : ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಮೊದಲ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾ ಅವರ ಅಂಗಾಂಗವನ್ನು ದಾನ ಮಾಡಲು ಪೋಷಕರು ಮುಂದಾಗಿದ್ದಾರೆ.
ಪೋಷಕರ ಒಪ್ಪಿಗೆಯಂತೆ ವೈದ್ಯರು ರಕ್ಷಿತಾಳ ಬಹು ಅಂಗಾಂಗ ದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ನಡೆಸಿದ್ದು, ವಿಶೇಷ ವೈದ್ಯರ ತಂಡವು ಜಿಲ್ಲಾಸ್ಪತ್ರೆಗೆ ಬಂದಿದ್ದು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ, ಅದರಂತೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿರುವ ರೋಗಿಯೊಬ್ಬರಿಗೆ ಹೃದಯ ಕಸಿ ಮಾಡುವ ಉದ್ದೇಶದಿಂದ ರಕ್ಷಿತಾಳ ಹೃದಯವನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಇದರೊಂದಿಗೆ ರಕ್ಷಿತಾಳ ಒಟ್ಟು ಒಂಬತ್ತು ಅಂಗಾಂಗಗಳನ್ನು ದಾನ ಮಾಡಲು ಪೋಷಕರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಕಡೂರು ತಾಲೂಕಿನ ಸೋಮನಹಳ್ಳಿಯ ತಾಂಡ್ಯದ ರಕ್ಷಿತಾ ಬಸ್ ಚಲಿಸುತ್ತಿರುವಾಗಲೇ ಕೆಳಗೆ ಬಿದ್ದಿದ್ದು ಆಕೆಯ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು ಅಲ್ಲದೆ ಆಕೆ ಬದುಕುಳಿಯುವ ಯಾವುದೇ ಲಕ್ಷಣಗಳು ಇರಲಿಲ್ಲ. ಈ ವೇಳೆ ವೈದ್ಯರು ಅಂಗಾಂಗ ದಾನದ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಾರೆ, ಅದರಂತೆ ರಕ್ಷಿತಾಳ ಅಂಗಾಂಗ ದಾನಕ್ಕೆ ತಾಯಿ ಲಕ್ಷ್ಮಿಬಾಯಿ, ತಂದೆ ಸುರೇಶ್ ನಾಯ್ಕ ಅವರು ಒಪ್ಪಿಗೆ ನೀಡಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಬೆಳ್ಳಂಬೆಳಗ್ಗೆ ಪೊಲೀಸರ ಕಾರ್ಯಾಚರಣೆ, ಬೊಳಂತೂರಿನ ವ್ಯಕ್ತಿ ಪೊಲೀಸರ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.