ಪ್ರಧಾನಿ ಮೋದಿ ಆಡಳಿತದಲ್ಲಿ ಅಭಿವೃದ್ಧಿಗೆ ಶರವೇಗ: ನಡ್ಡಾ
Team Udayavani, Feb 22, 2023, 6:03 AM IST
ಚಿಕ್ಕಮಗಳೂರು: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿದೆ. ಅಭಿವೃದ್ಧಿ ಕಾರ್ಯಗಳು ಶರವೇಗ ಪಡೆದುಕೊಂಡಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.
ನಗರದಲ್ಲಿ ಮಂಗಳವಾರ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರ ಮತ್ತು ಚಿಂತಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಒಂಬತ್ತು ವರ್ಷಗಳ ಹಿಂದೆ ದೇಶದ ಪರಿಸ್ಥಿತಿ ಹೇಗಿತ್ತು ಎಂದು ಊಹಿಸಿಕೊಂಡರೆ ಭ್ರಷ್ಟಾಚಾರ ಎಲ್ಲೆ ಮೀರಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಕೀಳಾಗಿ ಕಾಣಲಾಗುತ್ತಿತ್ತು ಎಂದು ಕಾಂಗ್ರೆಸ್ ಪಕ್ಷದ ಆಡಳಿತವನ್ನು ಅವರು ಜರಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಅವರು ತೆಗೆದುಕೊಂಡ ಅತ್ಯುತ್ತಮ ನಿರ್ಧಾರಗಳಿಂದ ದೇಶ ಪ್ರಗತಿಪಥದತ್ತ ಸಾಗುತ್ತಿದೆ. ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದ್ದು, ಇದಕ್ಕೆಲ್ಲ ಮೋದಿಯವರ ಡೈನಾಮಿಕ್ ನಾಯಕತ್ವವೇ ಕಾರಣ ಎಂದು ಬಣ್ಣಿಸಿದರು.
ದೇಶದಲ್ಲಿ ಅನೇಕ ಪಕ್ಷಗಳು ಆಡಳಿತ ನಡೆಸಿವೆ. ಆಗ ದೇಶ ಹೇಗಿತ್ತು. ಮೋದಿ ಬಂದ ಮೇಲೆ ದೇಶ ಹೇಗಿದೆ ಎಂದು ಯೋಚಿಸಬೇಕಿದೆ. ಕೋವಿಡ್ ಸಂದರ್ಭ, ಉಕ್ರೇನ್ ಮತ್ತು ರಷ್ಯಾ ಯುದ್ಧ ಸಂದರ್ಭ ದೇಶ ಆರ್ಥಿಕವಾಗಿ ದುರ್ಬಲವಾಗದೆ ಹಲವು ದೇಶಗಳಿಗೆ ನೆರವು ನೀಡಿದೆ ಎಂದು ಹೇಳಿದರು.
ಭಾರತ ದೇಶದ ಜಿಡಿಪಿ 7.4ರಷ್ಟಿದೆ. ಅಮೆರಿಕ 2.3, ಚೀನ 3.3, ಫ್ರಾನ್ಸ್ 1.5ರಷ್ಟಿದೆ. ಆರ್ಥಿಕವಾಗಿ ದೇಶ ಸದೃಢವಾಗಿದ್ದು, ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೋವಿಡ್ ಸಂದರ್ಭ ಜನರು ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲಾಗಿದೆ ಎಂದರು.
ಸಿದ್ದು ವಿರುದ್ಧ ಹರಿಹಾಯ್ದ ನಡ್ಡಾ
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತ ಅವ ಧಿಯಲ್ಲಿ ಭ್ರಷ್ಟಾಚಾರ, ಒಡೆದು ಆಳುವ ನೀತಿ ಅನುಸರಿಸಿದರು. ನಾವು ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದರೆ ಸಿದ್ದರಾಮಯ್ಯ ಸರಕಾರ ಪಿಎಫ್‌ಐ ಸಂಘಟನೆ ಮುಖಂಡರ ಮೇಲಿದ್ದ 175 ಪ್ರಕರಣವನ್ನು ಹಿಂಪಡೆಯಿತು. ಲೋಕಾಯುಕ್ತವನ್ನು ಮುಚ್ಚುವ ಕೆಲಸ ಮಾಡಿದರು ಎಂದರು.
ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿರುವುದು ಹಾಗೂ ಜಗದ್ಗುರುಗಳ ಆಶೀರ್ವಾದ ಪಡೆದಿರುವುದು ಅತ್ಯಂತ ಸಂತೋಷದಾಯಕವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಶ್ರೀ ಶಾರದಾ ಪೀಠಕ್ಕೆ ಸೋಮವಾರ ಆಗಮಿಸಿ ವಾಸ್ತವ್ಯ ಹೂಡಿದ್ದ ಅವರು ಮಂಗಳವಾರ ಕೊರಡಕಲ್ಲಿನ ಹೆಲಿಪ್ಯಾಡಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಇದಕ್ಕೂ ಮೊದಲು ಅವರು ಶ್ರೀಮಠದ ಹೊರಆವರಣದ ಶ್ರೀ ವಿದ್ಯಾಶಂಕರ ದೇಗುಲ, ಶ್ರೀ ಶಂಕರಾಚಾರ್ಯ, ಶ್ರೀ ಸುಬ್ರಮಣ್ಯ ದೇವಸ್ಥಾನ, ಶ್ರೀಮಠದ ಒಳ ಆವರಣದ ಶ್ರೀ ಶಕ್ತಿ ಗಣಪತಿ, ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.