ಸುಪ್ರೀಂ ಆದೇಶ ಮರುಪರಿಶೀಲಿಸಿ

•ಆಟೋ ಸಂಘ, ಗೂಡ್ಸ್‌, ಪಿಕಪ್‌ ವಾಹನಗಳ ಚಾಲಕರ‌ ಪ್ರತಿಭಟನೆ

Team Udayavani, Jul 23, 2019, 11:21 AM IST

cm-tdy-1

ಬಾಳೆಹೊನ್ನೂರು: ಸುಪ್ರೀಂಕೋರ್ಟ್‌ ಆದೇಶ ಪರಿಶೀಲಿಸುವಂತೆ ಒತ್ತಾಯಿಸಿ ಆಟೋ ಸಂಘ ಹಾಗೂ ಗೂಡ್ಸ್‌, ಪಿಕಪ್‌ ವಾಹನಗಳ ಚಾಲಕರು ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿದರು.

ಬಾಳೆಹೊನ್ನೂರು: ಆಟೋದಲ್ಲಿ ಮೂರಕ್ಕಿಂತ ಹೆಚ್ಚು ಜನರ ಪ್ರಯಾಣ ನಿಷೇಧಿಸಿ ಹಾಗೂ ಸರಕು ವಾಹನದಲ್ಲಿ ಜನರನ್ನು ಕರೆದೊಯ್ಯುವುದನ್ನು ನಿರ್ಬಂಧಿಸಿರುವ ಸುಪ್ರೀಂಕೋರ್ಟ್‌, ತನ್ನ ಆದೇಶವನ್ನು ಮರು ಪರಿಶೀಲಿಸಬೇಕೆಂದು ಒತ್ತಾಯಿಸಿ ಆಟೋ ಸಂಘ ಹಾಗೂ ಗೂಡ್ಸ್‌, ಪಿಕಪ್‌ ವಾಹನಗಳ ಚಾಲಕರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಬಾಳೆಹೊನ್ನೂರಿನ ಆಟೋ ಸಂಘ, ಕೂಲಿ ಕಾರ್ಮಿಕರ ಒಕ್ಕೂಟ, ಗೂಡ್ಸ್‌, ಪಿಕಪ್‌ ವಾಹನ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸೋಮವಾರ ಪಟ್ಟಣದ ಶ್ರೀ ಮಾರ್ಕಾಂಡೇಶ್ವರ ದೇವಸ್ಥಾನದ ಆವರಣದಿಂದ ರೋಟರಿ ವೃತ್ತದ ವರೆಗೆ ಹಾಗೂ ರೋಟರಿ ವೃತ್ತದಿಂದ ಜೆಸಿ ವೃತ್ತದ ವರೆಗೆ ಬೃಹತ್‌ ಮೆರವಣಿಗೆ ನಡೆಸಿದರು. ನಂತರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಇದಾದ ನಂತರ ನಾಡಕಚೇರಿ ಅಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಂ.ಉಮೇಶ್‌ ಕಲ್ಮಕ್ಕಿ ಮಾತನಾಡಿ, ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್‌ ಆಟೋದಲ್ಲಿ ಮೂರು ಜನ ಹಾಗೂ ಸರಕು ಸಾಗಣೆ ವಾಹನದಲ್ಲಿ ಯಾರೂ ಪ್ರಯಾಣಿಸದಂತೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ, ವಾಹನಗಳನ್ನು ತಡೆದು ಅಧಿಕ ದಂಡ ವಸೂಲಿ ಮಾಡಲಾಗುತ್ತಿದೆ. ಅಲ್ಲದೇ, ವಾಹನಗಳನ್ನು ಜಪ್ತಿ ಮಾಡುವುದರಿಂದ ಬಹಳಷ್ಟು ತೊಂದರೆಯುಂಟಾಗಿದೆ. ಇದರಿಂದಾಗಿ ಕೂಲಿ ಕಾರ್ಮಿಕರಿಗೆ ಹಾಗೂ ಎಲ್ಲಾ ವರ್ಗದ ಜನರಿಗೆ ಸಮಸ್ಯೆಯುಂಟಾಗುತ್ತಿದೆ. ಕೂಲಿ ಕಾರ್ಮಿಕರಿಗೆ ಹಾಗೂ ರೈತರು ಪಿಕಪ್‌ ಹಾಗೂ ಆಟೋ, ಗೂಡ್ಸ್‌ ವಾಹನಗಳನ್ನು ಬಳಸುವುದು ಅನಿವಾರ್ಯವಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.

ಆಟೋ ಸಂಘದ ಅಧ್ಯಕ್ಷ ಸಂದೇಶ್‌ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರು ಮತ್ತು ಗ್ರಾಮಸ್ಥರು ಮುಖ್ಯ ರಸ್ತೆಗೆ ತಲುಪಲು ಕನಿಷ್ಠ ಪಕ್ಷ 10ರಿಂದ 12ಕಿ.ಮೀ. ದೂರ ನಡೆದುಕೊಂಡೇ ಬರುವ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಆಟೋ ಹಾಗೂ ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆಯಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನಪ್ರತಿನಿಧಿಗಳು ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಈ ಕಾನೂನಿನ ಬಗ್ಗೆ ತಿದ್ದುಪಡಿ ತಂದು ಸುಪ್ರೀಂಕೋರ್ಟ್‌ ಮನವರಿಕೆ ಮಾಡಿಕೊಡಬೇಕು. ರೆಸಾರ್ಟ್‌ ರಾಜಕಾರಣ ಬಿಟ್ಟು ಉದ್ಭವಿಸಿರುವ ಸಮಸ್ಯೆ ಬಗೆಹರಿಸುವಲ್ಲಿ ರಾಜಕಾರಣಿಗಳು ಮುಂದಾಗಬೇಕೆಂದು ಕರೆ ನೀಡಿದರು.

ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಮಹಮ್ಮದ್‌ ಹನೀಫ್‌, ತಾಲೂಕು ಬಿಜೆಪಿ ಅಧ್ಯಕ್ಷ ವೆನಿಲಾ ಭಾಸ್ಕರ್‌, ಗ್ರಾಪಂ ಸದಸ್ಯ ರವಿಚಂದ್ರ, ತಾಪಂ ಸದಸ್ಯ ಕಲ್ಮಕ್ಕಿ ನಾಗೇಶ್‌, ಖಾಂಡ್ಯ ಹೋಬಳಿ ಬಿಜೆಪಿ ಅಧ್ಯಕ್ಷ ಹುಯಿಗೆರೆ ರವಿ, ಚಂದ್ರಶೇಖರ್‌, ಹೋಬಳಿ ಅಧ್ಯಕ್ಷ ಕೆ.ಕೆ.ವೆಂಕಟೇಶ್‌ ಮಾತನಾಡಿದರು.ತಾಪಂ ಉಪಾಧ್ಯಕ್ಷ ಹೊಳೆಬಾಗಿಲು ಮಂಜು, ಗ್ರಾಪಂ ಸದಸ್ಯೆ ಸೆಲ್ಫಿ, ಜಾನ್‌ ಡಿಸೋಜ, ಅರಳೀ ಕೊಪ್ಪ ಜಗದೀಶ್‌, ಅಟೋ ಚಾಲಕರ ಮತ್ತುಮಾಲಿಕರ ಸಂಘದ ಅನಿಲ್, ಮಹೇಶ್‌ ಶೆಟ್ಟಿ, ಗೂಡ್ಸ್‌, ಪಿಕಪ್‌, ಆಟೋ ಚಾಲಕರ ಮತ್ತು ಮಾಲಿಕರ ಸಂಘ, ವಿವಿಧ ಸಂಘಗಳ ಸದಸ್ಯರು, ಕೂಲಿ ಕಾರ್ಮಿಕರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.