ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ

Team Udayavani, Jun 11, 2019, 8:53 AM IST

cm-tdy-1..

ಚಿಕ್ಕಮಗಳೂರು: ರೈತಸಂಘದ ಕಾರ್ಯಕರ್ತರು ನಗರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದರು.

ಚಿಕ್ಕಮಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಸೋಮವಾರ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ ತಡೆದು ಭಾರೀ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 173ರ ಕಡೂರು-ಚಿಕ್ಕಮಗಳೂರು ರಸ್ತೆಯ ನಗರದ ಎಐಟಿ ವೃತ್ತದ ಬಳಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಸ್ತೆ ತಡೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಬೇಡಿಕೆ ಈಡೇರಿಸಿ: ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತಸಂಘ ಮತ್ತು ಹಸಿರು ಸೇನೆ ಕಾರ್ಯಾಧ್ಯಕ್ಷ ಬಿ.ಸಿ.ದಯಾಕರ, ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭೂಸ್ವಾಧೀನ ಕಾಯಿದೆ ತಿದ್ದುಪಡಿ ವಾಪಸ್‌ ಪಡೆಯುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.

ಸೂಕ್ತ ಪರಿಹಾರ ನೀಡಿ: 2013ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಭೂಸ್ವಾಧೀನ ಕಾಯಿದೆಗೆ ತಿದ್ದುಪಡಿ ತಂದಿದೆ. ಇದರ ಪ್ರಕಾರ ರೈತರ ಒಪ್ಪಿಗೆ ಇಲ್ಲದೇ ಯಾವುದೇ ಕಾರಣಕ್ಕೂ ಭೂಸ್ವಾಧೀನ ಪಡಿಸಿಕೊಳ್ಳುವಂತಿಲ್ಲ.ರೈತರಿಗೆ ಕೊಡುವ ಪರಿಹಾರ ಮಾರುಕಟ್ಟೆ ದರದ 4 ಪಟ್ಟು ಹೆಚ್ಚಾಗಿರಬೇಕು. ನಗರ ಪ್ರದೇಶವಾದರೆ 2 ಪಟ್ಟು ನೀಡಬೇಕು. ಸ್ವಾಧೀನಪಡಿಸಿಕೊಂಡ ಭೂಮಿಯನ್ನು 5 ವರ್ಷದೊಳಗೆ ಉದ್ದೇಶಿತ ಯೋಜನೆಗೆ ಬಳಕೆ ಮಾಡಬೇಕು. ಇಲ್ಲದಿದ್ದರೆ ಆ ಭೂಮಿಯನ್ನು ಮೂಲ ರೈತನಿಗೆ ಬಿಟ್ಟುಕೊಡಬೇಕು ಹಾಗೂ ಭೂಸ್ವಾಧೀನ ಸಂಪೂರ್ಣವಾಗಿ ಸಾರ್ವಜನಿಕ ಉದ್ದೇಶಗಳಿಗೆ ಸೀಮಿತವಾಗಿರಬೇಕು ಎಂದು ಆ ಕಾಯಿದೆ ಹೇಳಿದೆ ಎಂದರು.

ತಿದ್ದುಪಡಿ ವಾಪಸ್‌ಗೆ ಆಗ್ರಹ: ಭೂಸ್ವಾಧೀನ ಕಾಯಿದೆಯಿಂದ ರೈತರಿಗೆ ಸಾಕಷ್ಟು ಅನುಕೂಲವಾಗುತ್ತಿತ್ತು. ಆದರೆ, ರಾಜ್ಯ ಮೈತ್ರಿ ಸರ್ಕಾರ ಈ ಕಾಯಿದೆಗೆ ಮತ್ತೆ ತಿದ್ದುಪಡಿ ತರಲು ಮುಂದಾಗಿದೆ. ಒಂದು ವೇಳೆ ತಿದ್ದುಪಡಿಯಾದಲ್ಲಿ ಮೇಲಿನ ಎಲ್ಲಾ ಅಂಶಗಳನ್ನು ಜಿಲ್ಲಾಧಿಕಾರಿ ವಿವೇಚನೆಗೆ ಬಿಡಲಾಗುತ್ತದೆ. ಈ ರೀತಿ ತಿದ್ದುಪಡಿಗೆ ಮುಂದಾಗಿರುವುದು ರಾಜ್ಯದ ರೈತ ಸಮುದಾಯಕ್ಕೆ ದ್ರೋಹ ಬಗೆದಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಭೂಸ್ವಾಧೀನ ಕಾಯಿದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ಸಮರ್ಪಕ ವಿದ್ಯುತ್‌ ಪೂರೈಸಿ: ಗ್ರಾಮೀಣ ಪ್ರದೇಶಕ್ಕೆ ಅಗತ್ಯವಾಗಿ ಬೇಕಿರುವ ವಿದ್ಯುತ್‌ ಅನ್ನು ಸರಬರಾಜು ಮಾಡುವಲ್ಲಿ ವಿದ್ಯುತ್‌ ಸರಬರಾಜು ಕಂಪನಿಗಳು ವಿಫಲವಾಗಿವೆ. ತ್ರಿಪೇಸ್‌ ವಿದ್ಯುತ್‌ ಅನ್ನು ಕೆಲವೇ ಗಂಟೆ ನೀಡುತ್ತಿದ್ದುದರಿಂದ ಕುಡಿಯುವ ನೀರು ಸೇರಿದಂತೆ ರೈತರ ಹೊಲಗದ್ದೆಗಳಿಗೆ ತೀವ್ರ ತೊಂದರೆಯಾಗಿದೆ. ವಿದ್ಯುತ್‌ ಏರಿಳಿತದಿಂದ ರೈತರ ಉಪಕರಣಗಳು ಸುಟ್ಟು ನಷ್ಟ ಉಂಟಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್‌ ಸರಬರಾಜು ಮಾಡಬೇಕೆಂದು ಆಗ್ರಹಿಸಿದರು.

ರಾಜ್ಯಾದ್ಯಂತ ಕೆರೆಗಳನ್ನು ತುಂಬಿಸುವ ಯೋಜನೆ ಯನ್ನು ಜಾರಿಗೆ ತರಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ, ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಮಹೇಶ್‌, ಕೆ.ನಾಗರಾಜ್‌, ಮಂಜೇಗೌಡ, ನಿರಂಜನ ಮೂರ್ತಿ ಮತ್ತಿತರರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.