Tragedy: 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು… ಚಾಲಕ ಸ್ಥಳದಲ್ಲೇ ಮೃತ್ಯು
Team Udayavani, Oct 26, 2023, 2:10 PM IST
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ಗುರುವಾರ ಸಂಭವಿಸಿದೆ.
ಅಣಜೂರು ಜಯಮ್ಮನಾಗೇಶರವರ ಪುತ್ರ ರಂಜನ್(38) ಮೃತ ದುರ್ದೈವಿ.
ರಂಜನ್ ಜನ್ನಪುರದಲ್ಲಿ ಹೋಟೆಲ್ ನಡೆಸುತ್ತಿದ್ದ ಎನ್ನಲಾಗಿದ್ದು ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಬ್ರುಕೊಡುಗೆ ತಿರುವು ಬಳಿ ತಡೆಗೋಡೆ ಇಲ್ಲದೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು ಆದರೂ ತಡೆ ಗೋಡೆ ನಿರ್ಮಿಸದೆ ನಿರ್ಲಕ್ಷ ವಹಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಇದನ್ನೂ ಓದಿ: Bigg Boss: ಬಿಗ್ ಬಾಸ್ ವಿನ್ನರ್ ಗೆ ಸುಲಿಗೆ ಕರೆ; 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪರಿಚಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.