ಖಾಂಡ್ಯ ಕ್ಷೇತ್ರದ ಅಭಿವೃದ್ಧಿಗೆ ಕೋಟಿ ರೂ.
Team Udayavani, Dec 10, 2019, 2:10 PM IST
ಬಾಳೆಹೊನ್ನೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ಶ್ರೀ ಖಾಂಡ್ಯ ಕ್ಷೇತ್ರದಲ್ಲಿ ಯಾತ್ರಿ ನಿವಾಸ ಹಾಗೂ ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ, ಸಕ್ಕರೆಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದರು.
ಸಮೀಪದ ಖಾಂಡ್ಯ ಕ್ಷೇತ್ರದಲ್ಲಿ ಯಾತ್ರಿನಿವಾಸದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಈ ಹಿಂದೆ ಚಿಕ್ಕಮಗಳೂರು ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗಿದ್ದು, ರಾಜಕಾರಣದ ಪ್ರವೇಶದಲ್ಲಿ ಅನುಭವದ ಕೊರತೆಯಿಂದ ಖಾಂಡ್ಯ ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಖಾಂಡ್ಯ ಕ್ಷೇತ್ರದ ಋಣವನ್ನು ತೀರಿಸಬೇಕಾದ ಜವಾಬ್ದಾರಿಯಾಗಿದೆ ಎಂದರು.
ಕ್ಷೇತ್ರ ವಿಂಗಡಣೆಯಾದ ಮೇಲೆ ಖಾಂಡ್ಯ ಹೋಬಳಿ ಶೃಂಗೇರಿ ಕ್ಷೇತ್ರಕ್ಕೆ ಸೇರ್ಪಡೆಯಾಗಿದೆ. ಇದೀಗ ಜಿಲ್ಲಾ ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವನಾಗಿ ಅನುದಾನವನ್ನು ಬಿಡುಗಡೆ ಮಾಡಿಸಿ ನಿರ್ಮಿತಿ ಕೇಂದ್ರಕ್ಕೆ ಗುತ್ತಿಗೆ ನೀಡಲಾಗಿದೆ ಎಂದರು.
ಮಲೆನಾಡಿಗರು ಸಂಸ್ಕೃತಿ– ಸಂಪ್ರದಾಯವನ್ನು ಅಳವಡಿಸಿಕೊಂಡವರಾಗಿದ್ದಾರೆ. ವಿಶ್ವಾಸ ರಾಜಕಾರಣ ಅಳವಡಿಸಿಕೊಂಡು ಅಭಿವೃದ್ಧಿ ಮಾಡುವ ಉದ್ದೇಶವಿದೆ. ದ್ವೇಷ ರಹಿತ ರಾಜಕಾರಣ ಬಿಟ್ಟು ವಿಶ್ವಾಸ ಪೂರ್ಣ ರಾಜಕೀಯವೇ ನಮ್ಮ ಉದ್ದೇಶವಾಗಿದೆ. ಖಾಂಡ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಸ್.ವಿ.ಮಂಜುನಾಥ್, ದೇವಸ್ಥಾನ ಮಂಡಳಿ ಸದಸ್ಯರು, ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್ ಒಮ್ಮತದಿಂದ ಅಭಿವೃದ್ಧಿ ಮಾಡೋಣವೆಂದು ತಿಳಿಸಿದರು.ಜಿ.ಪಂ. ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಮಾತನಾಡಿ, ಪ್ರವಾಹ ಬಂದ ಸಂದರ್ಭದಲ್ಲಿ ಈ ಕ್ಷೇತ್ರಕ್ಕೆ ಅನುದಾನ ನೀಡುವುದಾಗಿ ಭರವಸೆ ನೀಡಿದ್ದು, ಆ ಭರವಸೆಯನ್ನು ಸಚಿವರು ಈಡೇರಿಸಿದ್ದಾರೆ ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಖಾಂಡ್ಯ ಹೋಬಳಿ ಅಭಿವೃದ್ಧಿಗೆ ಸಚಿವರು ನೀಡಿದ ಸಹಕಾರವನ್ನು ಶ್ಲಾಘಿಸಿದರು. ಅಧಿಕಾರ ಶಾಶ್ವತವಲ್ಲ, ಅಭಿವೃದ್ಧಿ ಶಾಶ್ವತವೆಂದು ತುರ್ತಾಗಿ ಗುಣಮಟ್ಟದ ಕಟ್ಟಡ ಕಾಮಗಾರಿಯನ್ನು ಮಾಡಿಸಲಾಗುವುದೆಂದು ತಿಳಿಸಿದರು.
ಮಾಜಿ ಸಚಿವ ಡಿ.ಎನ್‌ಜಿವರಾಜ್, ಜಿ.ಪಂ. ಸದಸ್ಯೆ ಕವಿತಾ ಲಿಂಗರಾಜ್, ದೇವದಾನ ಗ್ರಾ.ಪಂ. ಅಧ್ಯಕ್ಷ ರಮೆಶ್, ತಾ.ಪಂ. ಸದಸ್ಯೆ ಸಾವಿತ್ರಿ ರಾಜಕುಮಾರ್, ಸಂಗವೇಶ್ವರಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರೇಗೌಡ ಹಾಗೂ ಬಾಳೆಹೊನ್ನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ, ಮುಖಂಡರಾದ ವೆನಿಲ್ಲಾ ಭಾಸ್ಕರ್, ಕಾಂಡ್ಯ ಹೋಬಳಿ ಬಿಜೆಪಿ ಅಧ್ಯಕ್ಷ ಹುಯಿಗೆರೆ ರವಿ, ಮಾಜಿ ಅಧ್ಯಕ್ಷ ಚಂದ್ರಶೇಖರ್, ಬೆಳಸೆ ಮಂಜುನಾಥ್, ಜಯಶೀಲ, ಉದಯ್ ಕುಮಾರ್ ಹೆಗಡೆ ಸೇರಿದಂತೆ ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಗುರುಮೂರ್ತಿ ನಿರೂಪಿಸಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ವಿ. ಮಂಜುನಾಥ್ ಸ್ವಾಗತಿಸಿ, ಬೆಳಸೆ ರತ್ನಾಕರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.