ಅರಣ್ಯ ಇಲಾಖೆಯಿಂದ ಸಸಿಗಳ ವಿತರಣೆಗೆ ಸಿದ್ಧತೆ: ಜಗನ್ನಾಥ್
Team Udayavani, May 29, 2020, 8:04 AM IST
ಮೂಡಿಗೆರೆ: ತಾಲೂಕಿನ ರೈತರು ಹಾಗೂ ಸಾರ್ವಜನಿಕರಿಗೆ ವಿತರಿಸಲು ಅರಣ್ಯ ಇಲಾಖೆಯಿಂದ ಸುಮಾರು 1.95 ಲಕ್ಷ ಗಿಡಗಳು ಸಿದ್ಧವಾಗಿದ್ದು, ಜೂನ್ ಒಂದರಿಂದ ಸಸಿಗಳ ವಿತರಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿ ಕಾರಿ ಜಗನ್ನಾಥ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇಕೋಟೆ ಹಾಗೂ ಅಂಗಡಿ ಗ್ರಾಮಗಳ ಸಸ್ಯ ಕೇಂದ್ರಗಳಲ್ಲಿ ನೇರಳೆ, ಬೀಟೆ, ಮಹಾಗನಿ, ಸಂಪಿಗೆ ತಾರೆ, ಬಿದಿರು, ಶ್ರೀಗಂಧ, ಬೈನೆ, ಹಣ್ಣಿನ ಗಿಡಗಳಾದ ಹೆಬ್ಬಲಸು, ಮಾವು, ನೇರಳೆ, ನೆಲ್ಲಿ ಸೇರಿದಂತೆ ವಿವಿಧ ತಳಿಗಳ ಗಿಡಗಳನ್ನು ಬೆಳೆಸಲಾಗಿದೆ. ಮಗುವಿಗೊಂದು ಮರ, ಶಾಲೆಗೊಂದು ವನ ಯೋಜನೆಯಡಿ 2230 ಗಿಡಗಳನ್ನು ನೀಡಲಾಗುತ್ತದೆ. ಹಸಿರು ಕರ್ನಾಟಕ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಮನೆಗಳಿಗೆ 19800 ಸಸಿಗಳನ್ನು ನೀಡಲಾಗುತ್ತದೆ. ರೈತರು ಹಾಗೂ ಸಾರ್ವಜನಿಕರಿಗಾಗಿ 78400 ಗಿಡಗಳನ್ನು ಹಾಗೂ ಕಾವೇರಿ ಕೂಗು ಯೋಜನೆ ಅಡಿ ಕಾವೇರಿ ನದಿಯ ಉಪನದಿಗಳ ಪ್ರದೇಶಗಳಲ್ಲಿ 95 ಸಾವಿರ ಗಿಡಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದರು.
ರೈತರ ಜಮೀನನಿನಲ್ಲಿ ಸರ್ಕಾರ ರಿಯಾಯಿತಿ ದರದಲ್ಲಿ ಗಿಡ ನೀಡಲು ನಿರ್ಧರಿಸಿದೆ. ರೈತರು ಸಸ್ಯ ಕ್ಷೇತ್ರದಲ್ಲಿ ಇರುವ ಪುಸ್ತಕದಲ್ಲಿ ಅಗತ್ಯ ದಾಖಲೆ ನೀಡಿ ನೋಂದಾಯಿಸಿಕೊಳ್ಳಬೇಕು ಎಂದರು. ಈ ವೇಳೆ ವಲಯ ಅರಣ್ಯ ಅಧಿಕಾರಿ ಮೋಹನ್, ಉಪ ವಲಯ ಅರಣ್ಯ ಅಧಿಕಾರಿ ರಮೇಶ್, ಚಿದಾನಂದ್, ಅರಣ್ಯ ರಕ್ಷಕ ರಮೇಶ್, ಸಸ್ಯ ಕ್ಷೇತ್ರಪಾಲಕ ಚಂದ್ರಯ್ಯ, ಚಾಲಕ ತಿಪ್ಪೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.