ಸೀತಾಕಟ್ಟೆ ಅಣೆಕಟ್ಟು ವಿವಾದ:ವೃಕ್ಷಲಕ್ಷ ಆಂದೋಲನ ತಜ್ಞರ ಭೇಟಿ


Team Udayavani, Jun 1, 2018, 4:23 PM IST

bell-2.jpg

ಸಾಗರ: ಜನತೆಗೆ ಸರಿಯಾದ ಮಾಹಿತಿ ನೀಡಿಲ್ಲ. ಪ್ರವಾಸೋದ್ಯಮ ಇಲಾಖೆ ಯೋಜನೆ ರೂಪಿಸುವಾಗ ಸ್ಥಳೀಯ ಗ್ರಾಪಂ ಸಂಬಂಧಿತ ಹಳ್ಳಿಗಳ ಜನರ ಜೊತೆ ಮಾತುಕತೆ ನಡೆಸಿಲ್ಲ. ಶರಾವತಿ ಲಿಂಗನಮಕ್ಕಿ ಯೋಜನೆಗಳಿಂದ ನಿರಾಶ್ರಿತರಾದ ರೈತರು ಇಲ್ಲಿದ್ದಾರೆ. ಪಕ್ಕದಲ್ಲಿ ಶರಾವತಿ ಅಭಯಾರಣ್ಯವಿದೆ. ನದಿಯ ಎರಡೂ ದಂಡೆಗಳಲ್ಲಿ ಅರಣ್ಯ ಭೂಮಿ ಇದೆ. ಅರಣ್ಯ, ಪರಿಸರ ಪರವಾನಗಿ ಇಲ್ಲದೇ ಯೋಜನೆ ಜಾರಿ ಮಾಡಿದರೆ ಅದು ಅಕ್ರಮ ಯೋಜನೆ ಆಗುತ್ತದೆ. ನದಿಯ ಎರಡೂ ದಂಡೆಗೆ ಗೋಡೆ ಕಟ್ಟುವ ಪ್ರಸ್ತಾವನೆ ಮೂರ್ಖತನದ್ದು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಜೋಗ ಜಲಪಾತದ ಬಳಿಯ ಜೋಗಿಮಠ ಎಂಬಲ್ಲಿನ ಪ್ರಸ್ತಾಪಿತ ಸೀತಾಕಟ್ಟೆ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೃಕ್ಷಲಕ್ಷ ತಜ್ಞರ ತಂಡದ ನೇತೃತ್ವ ವಹಿಸಿ ವರ್ಷವಿಡೀ ಜೋಗ ಜಲಪಾತ ನೋಡಲು ಅನುಕೂಲವಾಗುವ ಅಣೆಕಟ್ಟು ನಿರ್ಮಿಸುವ ಖಾಸಗಿ ಕಂಪನಿಯ ಯೋಜನೆಯ ಪರಿಸರ ದುಷ್ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಿದ ನಂತರ ಅವರು ಮಾತನಾಡಿದರು. 

ಜೋಗ ಅಭಿವೃದ್ಧಿ ಪ್ರಾಧಿಕಾರ ಪ್ರವಾಸೋದ್ಯಮ ಅಭಿವೃದ್ಧಿ ಹೆಸರಲ್ಲಿ ಜೋಗ ಜಲಪಾತ ನೈಸರ್ಗಿಕ ಪರಿಸ್ಥಿತಿಗೆ ಅಡ್ಡಿಪಡಿಸುವ ಕಾರ್ಯಕ್ಕೆ ಮುಂದಾಗಬಾರದು. ಜಲಪಾತದ ಮೇಲ್ಭಾಗದಲ್ಲಿ ಅಣೆಕಟ್ಟು, ಗೋಡೆ ನಿರ್ಮಾಣ, ಪೈಪ್‌ಲೈನ್‌ ನಿರ್ಮಾಣ, ವಿದ್ಯುತ್‌ ತಂತಿ ಮಾರ್ಗ ಇತ್ಯಾದಿ ಕಾಮಗಾರಿ ಸಲ್ಲದು. ಅರಣ್ಯ ನಾಶ, ತೀವ್ರ ಮಾನವ ಹಸ್ತಕ್ಷೇಪಕ್ಕೆ ಸರ್ಕಾರ ಮುಂದಾಗಬಾರದು.

ಬದಲಾಗಿ ಜೋಗ ಜಲಪಾತಕ್ಕೆ ನದಿಗೆ ಇನ್ನೂ ಹೆಚ್ಚು ನೀರು ಹರಿದು ಬರಲು ಶರಾವತಿ ಕಣಿವೆ ರಕ್ಷಣೆಗೆ, ಜಲಾಯನ ಅಭಿವೃದ್ಧಿಗೆ ಸರ್ಕಾರ, ಜೋಗ ಪ್ರಾಧಿಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ನಿಯೋಗದಲ್ಲಿ ಡಾ| ಟಿ.ವಿ. ರಾಮಚಂದ್ರ, ಡಾ| ಕೇಶವ ಕೊರ್ಸೆ, ಡಾ| ಸುಭಾಸ್‌ ಚಂದ್ರನ್‌, ವೆಂಕಟೇಶ ಕೆ. ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.