ಶೃಂಗೇರಿ ಶಾರದಾಂಬೆಗೆ ವೀಣಾ ಶಾರದಾಲಂಕಾರ

Team Udayavani, Oct 16, 2018, 6:35 AM IST

ban16101810medn.jpg

ಶೃಂಗೇರಿ: ಶರನ್ನವರಾತ್ರಿ ಉತ್ಸವದ ಏಳನೇ ದಿನ ಶ್ರೀ ಶಾರದಾ ಪೀಠದಲ್ಲಿ ಶ್ರೀ ಶಾರದಾಂಬೆಗೆ ವೀಣಾಶಾರದಾಲಂಕಾರ ಮಾಡಲಾಗಿತ್ತು. ತಾಯಿ ಶಾರದೆಯು ಕರದಲ್ಲಿ ಪುಸ್ತಕ, ಜ್ಞಾನ ಮುದ್ರೆ, ಅಮೃತ ಕಲಶ, ವೀಣೆ ಹಿಡಿದು ಭಕ್ತರನ್ನು ಅನುಗ್ರಹಿಸಿದಳು. ಶ್ರೀ ಶಾರದೆಯ ಅಲಂಕಾರ ನಯನ ಮನೋಹರವಾಗಿತ್ತು. ಶ್ರೀಮಠದ ನರಸಿಂಹವನದ ಗುರುಭವನದಲ್ಲಿ ವಿಶ್ವದ ಬೃಹತ್‌ ವೀಣೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನವರಾತ್ರಿಯ ಸಂದರ್ಭದಲ್ಲಿ ಉಭಯ ಜಗದ್ಗುರುಗಳು ಪ್ರಾತಃ ಕಾಲದ ಆಹಿ°ಕ ಅನುಷ್ಠಾನದ ನಂತರ ಗುರು ಪಾದುಕೆಗಳಿಗೂ ಹಾಗೂ ಶ್ರೀ ಚಕ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳು ಬೆಳಗ್ಗೆ ಗುರುನಿವಾಸದಿಂದ ಆಗಮಿಸಿ, ಶ್ರೀ ಮಠದ ಎಲ್ಲಾ ದೇವಸ್ಥಾನಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಾರದಾಂಬಾ ದೇಗುಲಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಾಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ನೀಡಿದರು. 

ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ತುಂಗಾ ನದಿಯನ್ನು ದೋಣಿಯಲ್ಲಿ ದಾಟಿ, ಗಂಗಾ ಪೂಜೆ ನೆರವೇರಿಸಿದ ಬಳಿಕ ವಾದ್ಯ ಮೇಳದೊಂದಿಗೆ ಶ್ರೀ ಮಠದ ಹೊರ ಪ್ರಾಕಾರ ಮತ್ತು ಒಳ ಪ್ರಾಕಾರದ ದೇಗುಲಗಳಿಗೆ ಆಗಮಿಸಿ ಪೂಜೆ ಸಲ್ಲಿಸಿದರು. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಮಂಗಳಾರತಿ ಸ್ವೀಕರಿಸಿದರು.

ಉಭಯ ಜಗದ್ಗುರುಗಳು ಶ್ರೀ ಶಾರದಾಂಬೆಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಶಾರದಾ ದೇಗುಲದಲ್ಲಿ ಶ್ರೀಮಠದ ಆಡಳಿತಾ ಧಿಕಾರಿ ಗೌರಿಶಂಕರ್‌ ಗುರು ಪಾದುಕೆ ಹಾಗೂ ಸರಸ್ವತಿ ಪೂಜೆ ಸಲ್ಲಿಸಿದರು. ಶ್ರೀಮಠದ ಪುರೋಹಿತ ಕೃಷ್ಣ ಭಟ್‌ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಯಿತು. ಆಶ್ವಯಜ ಶುಕ್ಲ ಸಪ್ತಮಿಯಂದು ಮೂಲಾ ನಕ್ಷತ್ರ ದಿನ ಸರಸ್ವತಿ ಪೂಜೆ ಇರುವುದರಿಂದ ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತರು ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಿದರು.

ಧಾರ್ಮಿಕ ಕಾರ್ಯಕ್ರಮ: ನವರಾತ್ರಿ ಅಂಗವಾಗಿ ಶ್ರೀಮಠದ ಯಾಗಶಾಲೆಯಲ್ಲಿ ಹೋಮಾದಿಗಳು, ವಿವಿಧ ಪಾರಾಯಣ ನಡೆಯುತ್ತಿದೆ. ಸುಹಾಸಿನಿ ಪೂಜೆ ಸಹಿತ ಅನೇಕ ಧಾರ್ಮಿಕ ವಿಧಿ ವಿಧಾನಗಳು ಪ್ರತಿ ದಿನವೂ ನಡೆಯುತ್ತಿದೆ.

ಟಾಪ್ ನ್ಯೂಸ್

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.