#Gobackshobha; ‘ಗಂಡಸರಲ್ಲೊಂದು ಮನಸ್ಥಿತಿಯಿದೆ..’; ಗೋಬ್ಯಾಕ್ ಅಭಿಯಾನಕ್ಕೆ ಶೋಭಾ ಗರಂ
Team Udayavani, Feb 26, 2024, 12:04 PM IST
ಚಿಕ್ಕಮಗಳೂರು: ಗಂಡಸರಲ್ಲಿ ಒಂದು ಮನಸ್ಥಿತಿ ಇದೆ. ಅಧಿಕಾರ ನಮ್ಮಲ್ಲೇ ಇರಬೇಕು ಎಂದು ದುಡ್ಡಿನ ದರ್ಪದಿಂದ, ಅಹಂಕಾರದಿಂದ ಗೋಬ್ಯಾಕ್ ಶೋಭಾ ಅಭಿಯಾನ ಮಾಡಿಸಿದ್ದಾರೆ. ಕಳೆದ ಚುನಾವಣೆಯಲ್ಲೂ ಮಾಡಿಸಿದ್ದರು. ಇದಕ್ಕೆ ಹೈಕಮಾಂಡ್ ಸರಿಯಾದ ಉತ್ತರ ಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನನ್ನ ವಿರುದ್ದ ಕಳೆದ ಚುನಾವಣೆಯಲ್ಲಿ ಗೋಬ್ಯಾಕ್ ಮಾಡಿದ್ದರು. ಈ ಚುನಾವಣೆಯಲ್ಲೂ ಮಾಡಿದ್ದಾರೆ. ವ್ಯವಸ್ಥಿತವಾಗಿ ಮಾಡಿದ್ದಾರೆ. ಮಾಡಿಸುತ್ತಿದ್ದಾರೆ. ಹೈಕಮಾಂಡ್ ನನಗೆ ಯಾವ ಜವಬ್ದಾರಿ ನೀಡಿದೆಯೋ ಅದನ್ನು ಪ್ರಾಮಾಣಿಕವಾಗಿ, ಕಪ್ಪು ಚುಕ್ಕೆ ಬಾರದಂತೆ ರಾಜಕೀಯ ಮಾಡಿದ್ದೇನೆ. ಯಾರು ಷಡ್ಯಂತ ಮಾಡಿದರೂ ಉತ್ತರ ನಾನು ಕೊಡಲ್ಲ. ಹೈಕಮಾಂಡ್, ಹಿರಿಯರು ಕೊಡುತ್ತಾರೆ ಎಂದು ಆಕ್ರೋಶ ಹೊರ ಹಾಕಿದರು.
ಪತ್ರ ಯಾರು ಬರೆದರು, ಯಾರದ್ದು ಹ್ಯಾಂಡ್ ರೈಟಿಂಗ್, ಯಾರು ಪೋಸ್ಟ್ ಮಾಡಿದರು, ಎಷ್ಟು ಪೋಸ್ಟ್ ಮಾಡಿದರು. ಇದೆಲ್ಲದರ ಬಗ್ಗೆ ಕೇಂದ್ರ ಕೂಡ ವರದಿ ತರಿಸಿಕೊಂಡಿದೆ. ಸತ್ಯ ಕೇಂದ್ರದವರಿಗೆ ತಿಳಿದಿದೆ ಎಂಬ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ಗೊತ್ತಿದೆ. ಅವರ ಶಾಸಕರನ್ನು ಉಳಿಸಿಕೊಳ್ಳಲು ಆಗಲ್ಲ ಎಂದು ಬಿಜೆಪಿ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಾದ ಮೇಲೆ ಎಲ್ಲವೂ ಆಚೆ ಬರುತ್ತದೆ. ಕಾಂಗ್ರೆಸ್ ಆಂತರಿಕ ರಾಜಕೀಯದ ಬಗ್ಗೆ ನಾನೂ ಕಮೆಂಟ್ ಮಾಡಲ್ಲ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಡುವೆ ಏನು ನಡೆಯುತ್ತಿದೆ ಎಂದು ಚುನಾವಣೆ ಬಳಿಕ ಆಚೆಗೆ ಬರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.