ಶೃಂಗೇರಿ ಬಾವುಟ ಪ್ರಕರಣ: ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದ ಆರೋಪಿ ಬಂಧನ
Team Udayavani, Aug 14, 2020, 3:28 PM IST
ಚಿಕ್ಕಮಗಳೂರು: ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯರ ಪುತ್ಥಳಿಗೆ ಅನ್ಯಧರ್ಮದ ಬಾವುಟ ಎಸೆದಿದ್ದ ಪ್ರಕರಣವೀಗ ಬಹುತೇಕ ಅಂತ್ಯಕಂಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಿಲಿಂದಾ ಅಲಿಯಾಸ್ ಮಿಲ್ಲಿ ಎಂಬಾತನೇ ಬಂಧಿತ ಆರೋಪಿ. ಈತ ಕುಡಿದ ನಶೆಯಲ್ಲಿ ಆರೋಪಿ ಈ ರೀತಿ ಕೃತ್ಯ ಮಾಡಿದ್ದಾನೆ. ಇದು ಪೂರ್ವ ನಿಯೋಜಿತ ಘಟನೆ ಅಲ್ಲ, ಈತ ಯಾವುದೇ ಸಂಘಟನೆ,ಪಕ್ಷಕ್ಕೆ ಸೇರಿದವನಲ್ಲ. ಆರೋಪಿಯು ತನಿಖೆಯಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಚಿಕ್ಕಮಗಳೂರು ಎಸ್ ಪಿ ಅಕ್ಷಯ್ ಹೇಳಿದ್ದಾರೆ.
ಶಂಕರಾಚಾರ್ಯ ಪುತ್ಥಳಿಯ ಬಳಿ ಎಸೆದಿರುವುದು, ಈದ್ ಮಿಲಾದ್ ಹಬ್ಬದ ಶುಭಕೋರುವ ಬ್ಯಾನರ್ ಆಗಿದ್ದು, ಕುಡಿದ ಮತ್ತಿನಲ್ಲಿ ಆರೋಪಿ ಬ್ಯಾನರನ್ನು ಪ್ರತಿಮೆ ಬಳಿ ಹಾಕಿದ್ದಾನೆ. ಈತ ಯಾವುದೇ ಪಕ್ಷ, ಸಂಘಟನೆಗೆ ಸಂಬಂಧಿಸಿದ ವ್ಯಕ್ತಿಯಲ್ಲ ಎಂದು ಎಸ್ ಪಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.