ಪಾರ್ಕಿಂಗ್‌ ಶುಲ್ಕ ವಿರೋಧಿಸಿ ನಗರಸಭೆಗೆ ಮುತ್ತಿಗೆ 

Team Udayavani, Oct 30, 2021, 3:05 PM IST

ಪಾರ್ಕಿಂಗ್‌ ಶುಲ್ಕ ವಿರೋಧಿಸಿ ನಗರಸಭೆಗೆ ಮುತ್ತಿಗೆ 

ಚಿಕ್ಕಮಗಳೂರು: ಎಂ.ಜಿ. ರಸ್ತೆಯಲ್ಲಿ ಪಾರ್ಕಿಂಗ್‌ ಶುಲ್ಕ ವಿಧಿಸಲು ಮುಂದಾಗಿರುವ ಕ್ರಮ ವಿರೋಧಿಸಿ ಕಾಂಗ್ರೆಸ್‌ನ ಕಿಸಾನ್‌ಸೆಲ್‌ ಮತ್ತು ಕಿಸಾನ್‌ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದಕಾರ್ಯಕರ್ತರು ನಗರಸಭೆ ಮತ್ತು ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪಾರ್ಕಿಂಗ್‌ ಶುಲ್ಕ ವಿಧಿಸುವುದನ್ನು ಕೈಬಿಡುವಂತೆ ಆಗ್ರಹಿಸಿದರು.

ಇದೇ ವೇಳೆ ನಗರಸಭೆ ಕಚೇರಿ ಒಳಗೆ ನುಗ್ಗಲು ಮುಂದಾದ ಮುಖಂಡರು ಮತ್ತು ಕಾರ್ಯಕರ್ತರನ್ನು ತಡೆದ ಪೊಲೀಸರೊಂದಿಗೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು.

ಪೌರಾಯುಕ್ತ ಬಿ.ಸಿ. ಬಸವರಾಜ್‌ ಸ್ಥಳಕ್ಕಾಗಮಿಸಿದರು. ಈ ವೇಳೆ ಪ್ರತಿಭಟನಾಕಾರರು ನಗರದ ಎಲ್ಲಾ ರಸ್ತೆಗಳೂ ಗುಂಡಿ-ಗೊಟರಿನಿಂದ ಕೂಡಿದ್ದರೂ ಅತ್ತ ತಿರುಗಿ ನೋಡದ ನಗರಸಭೆ ಕಂದಾಯ ಹೆಚ್ಚಳ, ಕಸದ ಗಾಡಿಯ ಶುಲ್ಕ ಹೆಚ್ಚಳ ಸೇರಿದಂತೆ ಅನೇಕ ಜನವಿರೋ ಧಿ ನೀತಿಗಳ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ವರ್ಷಗಳಿಂದ ನಗರದ ವರ್ತಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇದೀಗ ಎಂ.ಜಿ. ರಸ್ತೆಯಲ್ಲಿ ಪಾರ್ಕಿಂಗ್‌ ಶುಲ್ಕ ವಿ ಧಿಸಿದರೆ ಮೊದಲೇ ವ್ಯಾಪಾರವಿಲ್ಲದೆ ಕಂಗೆಟ್ಟಿರುವ ವ್ಯಾಪಾರಸ್ಥರು ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ ಬೀದಿಗೆ ಬೀಳಬೇಕಾಗುತ್ತದೆ ಎಂದರು.

ಆಡಳಿತ ಮಂಡಳಿ ಇಲ್ಲದಿದ್ದರೂ ಪಾರ್ಕಿಂಗ್‌ ಶುಲ್ಕ ವಿಧಿಸುವ ಬಗ್ಗೆ ಏಕಾಏಕಿ ನಿರ್ಧಾರ ಮಾಡುವ ಮೂಲಕ ನಗರಸಭೆ ಗೂಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿದಮುಖಂಡರು ನಗರದ ಅನೇಕ ರಸ್ತೆಗಳಲ್ಲಿ ಇಲ್ಲದಿರುವ ಬೀದಿದೀಪಗಳನ್ನು ಹಾಕಲು ಇನ್ನೂ ಎಷ್ಟು ವರ್ಷಬೇಕು ಎಂದು ಆಯುಕ್ತರನ್ನು ಪ್ರಶ್ನಿಸಿದರು.

ಪೌರಾಯುಕ್ತ ಬಿ.ಸಿ. ಬಸವರಾಜ್‌ ಮಾತನಾಡಿ, ನಗರದಲ್ಲಿ ಇದೀಗ ನಡೆಯುತ್ತಿರುವ ಯುಜಿಡಿ ಕಾಮಗಾರಿ ಮುಗಿದ ನಂತರ ರಸ್ತೆ ಸರಿಪಡಿಸುವುದು ಸೇರಿದಂತೆ ಉಳಿದಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಬೀದಿದೀಪಗಳಿಗೆ ಎಲ್‌ಇಡಿ ಲೈಟ್‌ಗಳನ್ನು ಅಳವಡಿಸಲಾಗುವುದು ಎಂದರು.

ನ.1ರಿಂದ ಪಾರ್ಕಿಂಗ್‌ ಶುಲ್ಕ ವಿಧಿಸುವುದನ್ನು ಶಾಸಕರ ಸೂಚನೆ ಮೇರೆಗೆ ಮುಂದೂಡಲಾಗಿದ್ದು ವ್ಯಾಪಕ ಚರ್ಚೆ ನಂತರ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಿಸಾನ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅರೇನಳ್ಳಿ ಪ್ರಕಾಶ್‌, ಉಪಾಧ್ಯಕ್ಷರಾದ ಬಲರಾಮ್‌, ದಿನೇಶ್‌ಮತ್ತಾವರ, ಕಾರ್ಯದರ್ಶಿ ಸೋಮಶೇಖರ್‌,ಕಾಂಗ್ರೆಸ್‌ ಕಿಸಾನ್‌ ಸೆಲ್‌ನ ರಾಜ್ಯ ಸಂಚಾಲಕಸಿ.ಎನ್‌.ಅಕ್ಮಲ್‌, ರಾಜ್ಯಕಾರ್ಯದರ್ಶಿ ಆದಿತ್ಯಗೌಡ, ರಿಜ್ವಾನ್‌, ಜಬ್ಬಿ, ಜಮೀರ್‌, ನೂರ್‌ಅಹ್ಮದ್‌, ಸಾದಿಕ್‌, ಎನ್‌.ಎಸ್‌.ಯು.ಐ. ಅಧ್ಯಕ್ಷ ಆದಿಲ್‌, ಪ್ರಶಾಂತ್‌ ಪ್ರತಿಭಟನೆಯಲ್ಲಿ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.