Paralympic ಕ್ರೀಡಾಪಟು ರಕ್ಷಿತಾರಾಜು ದೇಶಕ್ಕೆ ಹೆಮ್ಮೆಯ ಮಗಳು: ಬಿ.ಶಿವರಾಮ ಶೆಟ್ಟಿ
ಬಣಕಲ್, ಕೊಟ್ಟಿಗೆಹಾರದಲ್ಲಿ ಪ್ಯಾರಾ ಒಲಂಪಿಕ್ ಅಂಧ ಕ್ರೀಡಾಪಟು ರಕ್ಷಿತಾರಾಜುಗೆ ಭವ್ಯ ಸ್ವಾಗತ
Team Udayavani, Nov 10, 2023, 6:19 PM IST
ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರದಲ್ಲಿ ಪ್ಯಾರಿಸ್ ನ ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಅಂಧ ಕ್ರೀಡಾಪಟು ರಕ್ಷಿತಾರಾಜುಗೆ ತಾಯಿ ನಾಡಿನಲ್ಲಿ ವಾದ್ಯ ತಂಡದ ಮೂಲಕ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಭವ್ಯ ಸ್ವಾಗತ ನೀಡಲಾಯಿತು.
ಶುಕ್ರವಾರ ಬಣಕಲ್, ಕೊಟ್ಟಿಗೆಹಾರದ ವಿವಿಧ ಶಾಲೆಗಳ ಮಕ್ಕಳು,ಶಿಕ್ಷಕರು, ಬಣಕಲ್ ಪ್ರೆಂಡ್ಸ್ ಕ್ಲಬ್, ಕೊಟ್ಟಿಗೆಹಾರ ಗೆಳೆಯರ ಬಳಗ, ಆಟೋ ಚಾಲಕ ಮಾಲಕರ ಸಂಘ , ಅಂಬೇಡ್ಕರ್ ಸಂಘ, ಹಾಗೂ ವಿವಿಧ ಸಂಘಟನೆಗಳಿಂದ ಅವಳನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ರೋಡ್ ಶೋ ನಂತರ ಬಣಕಲ್ ಗ್ರಾಮದ ಹಿರಿಯರಾದ ಬಿ.ಶಿವರಾಮ ಶೆಟ್ಟಿ ಮಾತನಾಡಿ’ರಕ್ಷಿತಾ ದೇಶದ ಹೆಮ್ಮೆಯ ಮಗಳು.ಕ್ರೀಡಾರಂಗದಲ್ಲಿ ಅವರ ಸಾಧನೆ ಅನನ್ಯವಾದುದು. ಸರ್ಕಾರ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾಶಾಲೆ ತೆರೆಯುವ ಮೂಲಕ ಪ್ರೋತ್ಸಾಹ ನೀಡಬೇಕು’ಎಂದರು.
ಕಸಾಪ ಬಣಕಲ್ ಘಟಕದ ಅಧ್ಯಕ್ಷ ಟಿ.ಎಂ.ಆದರ್ಶ್ ಮಾತನಾಡಿ’ ದೇಶಕ್ಕೆ ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆಯುವ ಮೂಲಕ ಯುವ ಪೀಳಿಗೆಯ ಗಮನ ಸೆಳೆದಿದ್ದಾಳೆ.ಸರ್ಕಾರ ಅವರಿಗೆ ವಿವಿಧ ಸೌಲಭ್ಯ ನೀಡಬೇಕು’ಎಂದರು.
ಬಣಕಲ್ ಗ್ರಾಮ ಪಂಚಾಯಿತಿ ಸದಸ್ಯರು, ಊರಿನ ಗ್ರಾಮಸ್ಥರು, ವಿವಿಧ ಸಂಘಟನೆಗಳ ಮುಖಂಡರು, ಸದಸ್ಯರು, ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕರು ಭಾಗವಹಿಸಿದ್ದರು.
ಕೊಟ್ಟಿಗೆಹಾರದಲ್ಲಿ ತೆರೆದ ಪಿಕಪ್ ವಾಹನದಲ್ಲಿ ವಿವಿಧ ಸರ್ಕಾರಿ ಶಾಲೆ,ಪ್ರೌಢಶಾಲೆಯ ಮಕ್ಕಳು ರಕ್ಷಿತಾರನ್ನು ಮೆರವಣಿಗೆ ಮೂಲಕ ರೋಡ್ ಶೋ ನಡೆಸಿ ಗೌರವ ಸಲ್ಲಿಸಿದರು.
ಕೊಟ್ಟಿಗೆಹಾರದ ಹಿರಿಯರಾದ ಹಾಜಿ ಟಿ.ಎ ಖಾದರ್ ಮಾತನಾಡಿ’ ದೇಶದ ಕ್ರೀಡೆಯ ಚಿನ್ನದ ರಾಣಿ ರಕ್ಷಿತಾ ಎಲ್ಲಾ ಮಕ್ಕಳಿಗೆ ಆದರ್ಶರಾಗಿದ್ದಾರೆ.ಅಂಗವಿಕಲತೆ ಇದ್ದರೂ ಯಾವ ಸಾಧನೆಯ ಛಲದೊಂದಿಗೆ ದೇಶ, ರಾಜ್ಯ ಅದರಲ್ಲೂ ಮಲೆನಾಡಿನ ಕೀರ್ತಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿರುವುದು ಸಂತಸ ತಂದಿದೆ ಎಂದರು.
ಏಕಲವ್ಯ ಶಾಲೆಯ ಪ್ರಾಂಶುಪಾಲ ಬಿ ಟಿ.ವೆಂಕಟೇಶ್ ಮಾತನಾಡಿ’ ಕ್ರೀಡೆಯಲ್ಲಿ ರಕ್ಷಿತಾ ಸಾಧನೆ ಮೆಟ್ಟಿಲೇರಿ ಸೂರ್ಯನ ಕಿರಣದ ಪ್ರಕಾಶಮಾನದಂತೆ ಮಿಂಚಿದ್ದಾರೆ.ನಾವು ಅವಳ ಆದರ್ಶ ಪಡೆದು ಚಂದ್ರ, ನಕ್ಷತ್ರಗಳು ಹಣತೆಯಂತೆ ಮಿಂಚಲು ಪ್ರಯತ್ನಿಸಬೇಕು.ಎಲ್ಲ ಮಕ್ಕಳು ರಕ್ಷಿತಾರಂತೆ ಸಾಧನೆ ಮಾಡಬೇಕು’ ಎಂದರು.
ಕೋಚ್ ರಾಹುಲ್ ಬಾಲಕೃಷ್ಣ ಮಾತನಾಡಿ’ ರಕ್ಷಿತಾ ಚಿನ್ನ ಗೆದ್ದಿರುವುದು ಸಂತಸ ತಂದಿದೆ.ಅದರಲ್ಲೂ ಊರಿನವರು ಅವಳ ಸಾಧನೆಗೆ ಸನ್ಮಾನಿಸಿ ಗೌರವಿಸಿರುವುದು ಇನ್ನಷ್ಟು ಪ್ರೇರಣೆಯಾಗಿದೆ ಎಂದರು.
ಸನ್ಮಾನ ಸ್ವೀಕರಿಸಿದ ರಕ್ಷಿತಾರಾಜು ಮಾತನಾಡಿ’ ನನ್ನ ಗೆಲುವಿಗೆ ಅಜ್ಜಿಯ ಪ್ರೋತ್ಸಾಹ, ಕೋಚ್ ರಾಹುಲ್, ಗೈಡ್ ರನ್ನರ್ ತಬರೇಶ್, ಸೌಮ್ಯ ಹಾಗೂ ನನಗೆ ಎಲ್ಲ ಸಹಕಾರ ನೀಡಿದ ಸರ್ವರಿಗೂ ನಾನು ಅಭಾರಿಯಾಗಿದ್ದೇನೆ.ಸನ್ಮಾನ ಸ್ವೀಕರಿಸಿ ಮತ್ತಷ್ಟು ಸಾಧನೆ ಮಾಡಲು ನನಗೆ ಪ್ರೇರಣೆಯಾಗಿದೆ ಎಂದರು.ಈ ಸಂದರ್ಭದಲ್ಲಿ ರಕ್ಷಿತಾಳ ಅಜ್ಜಿ ಲಲಿತಮ್ಮ, ಚಿಕ್ಕಪ್ಪ ರವಿ, ಮುಖ್ಯ ಶಿಕ್ಷಕ ಪಿ.ವಾಸುದೇವ್, ಶಿಕ್ಷಕರಾದ ಜಿ.ಎಚ್ ಶ್ರೀನಿವಾಸ್, ಪ್ರವೀಣ್,ಅಕ್ರಂ, ಮುಖಂಡರಾದ ಅರುಣ್ ಪೂಜಾರಿ, ಎನ್.ಟಿ.ದಿನೇಶ್, ಸೋಮೇಶ್ ಮರ್ಕಲ್, ಸಂಜಯ್ ಗೌಡ, ಮಧುಕುಮಾರ್, ಬಿ.ಬಿ.ಮಂಜುನಾಥ್, ಎ.ಆರ್.ಅಭಿಲಾಷ್, ಮಹೇಶ್,ಟಿ.ಎಂ.ನರೇಂದ್ರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.