ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವ ಸಂಪನ್ನ
Team Udayavani, Jan 21, 2019, 10:21 AM IST
ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ಆನೆಗುಂದ ಅಗ್ರಹಾರದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ಶ್ರೀ ಗಂಗಾಧರೇಶ್ವರ ಸ್ವಾಮಿ ಮತ್ತು ಶ್ರೀ ಗೋಪಾಲಕೃಷ್ಣ ಸ್ವಾಮಿ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಕಲಾಹೋಮ, ಗಣಪತಿ ಹೋಮ, ದುರ್ಗಾಹೋಮ, ರುದ್ರಹೋಮ, ಸಂಹಿತಾ ಪಾರಾಯಣ ಹಾಗೂ ಸ್ವಾಮಿಗೆ ವಿಶೇಷ ಅಭಿಷೇಕ ನಡೆಯಿತು.ನಂತರ ಉತ್ಸವ ಮೂರ್ತಿಯನ್ನು ಅಲಂಕೃತವಾದ ರಥದಲ್ಲಿ ಕುಳ್ಳಿರಿಸಿ ಭಕ್ತದಿಗಳ ಜಯ ಘೋಷದೊಂದಿಗೆ ದೇಗುಲದ ಹೊರ ಆವರಣದಲ್ಲಿ ಮೂರು ಸುತ್ತು ಎಳೆಯಲಾಯಿತು. ರಥೋತ್ಸವದ ಅಂಗವಾಗಿ ಅಗ್ರಹಾರದಲ್ಲಿ ತಳಿರು, ತೋರಣ ಹಾಗೂ ರಂಗೋಲಿ ಚಿತ್ತಾರ ಬಿಡಿಸಲಾಗಿತ್ತು.
ರಾತ್ರಿ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವ, ರಂಗಪೂಜೆ, ಮಹಾ ಮಂಗಳಾರತಿ ನಡೆಯಿತು. ಸುತ್ತಲಿನ ಆನೆಗುಂದ, ಹೆಗ್ಗದ್ದೆ, ಕಾವಡಿ, ಬೆಳಂದೂರು, ಕರುವಾನೆ, ಮಿಗಿನಕಲ್ಲು, ಅಡ್ಡಗದ್ದೆ, ಶೃಂಗೇರಿ, ಕಿರಕೋಡಿನ ನೂರಾರು ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.
ಅರ್ಚಕ ವಸಂತಭಟ್ ನೇತೃತ್ವದಲ್ಲಿ ಸುಬ್ರಹ್ಮಣ್ಯ ಭಟ್, ಕೃಷ್ಣಮೂರ್ತಿ ಭಟ್ ಮತ್ತಿತರ ಋತ್ವಿಜರ ತಂಡ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್ ಶೂಟಿಂಗ್
Udupi: ಕುದ್ರು ನೆಸ್ಟ್ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.