ಸಂಕಷ್ಟದಲ್ಲಿ ಪಿಂಚಣಿ ಫಲಾನುಭವಿಗಳು

ತಾಂತ್ರಿಕ ಕಾರಣದಿಂದ ಸ್ಥಗಿತ ಪಿಂಚಣಿ ನಂಬಿದವರಿಗೆ ಈಗ ತೊಂದರೆ

Team Udayavani, May 18, 2020, 6:00 PM IST

18-May-28

ಸಾಂದರ್ಭಿಕ ಚಿತ್ರ

ಶೃಂಗೇರಿ: ಸಾಮಾಜಿಕ ಭದ್ರತಾ ಯೋಜನೆಯಡಿ ಸರಕಾರದಿಂದ ಬರುತ್ತಿದ್ದ ಮಾಸಾಶನ ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡು ಫಲಾನುಭವಿಗಳು ಪರದಾಡುವಂತಾಗಿದೆ.

ಯೋಜನೆಯಡಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಶೇಷ ಚೇತನರು ಸಹಿತ ತಾಲೂಕಿನಲ್ಲಿ ಸಾವಿರಕ್ಕೂ ಹೆಚ್ಚು ಜನರು ಪ್ರಯೋಜನ ಪಡೆಯುತ್ತಿದ್ದಾರೆ. ಪಿಂಚಣಿ ಬರುತ್ತಿದ್ದ ಅನೇಕರಿಗೆ ಇದೀಗ ಕಳೆದ ಒಂದು ವರ್ಷದಿಂದ ಪಿಂಚಣಿ ಬಾರದೇ ಅದನ್ನೇ ನಂಬಿಕೊಂಡಿದ್ದ ವೃದ್ಧರು, ವಿಧವೆಯರು, ವಿಶೇಷ ಚೇತನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಔಷಧಿ, ಮಾತ್ರೆ ಖರೀದಿಸಲು ಮಾಸಾಶನ ನಂಬಿಕೊಂಡಿದ್ದವರು ಇದೀಗ ತೊಂದರೆಗೆ ಒಳಗಾಗಿದ್ದಾರೆ.

ವಿವಿಧ ಯೋಜನೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತಿದ್ದು, ಬ್ಯಾಂಕಿನ ಹೆಸರು ಬದಲಾಗಿದ್ದು, ಖಾತೆ ಸಂಖ್ಯೆ, ಐಎಫ್‌ಎಸ್‌ಸಿ ಸಂಖ್ಯೆ ಬದಲಾಗಿರುವುದರಿಂದ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತಿದ್ದ ಪಿಂಚಣಿ ಸ್ಥಗಿತಗೊಂಡಿದೆ. ಕಳೆದ ನಾಲ್ಕು ತಿಂಗಳಿಂದ ನೂರಾರು ಫಲಾನುಭವಿಗಳಿಗೆ ಪಿಂಚಣಿ ಲಭ್ಯವಾಗುತ್ತಿಲ್ಲ.

ಸಾಮಾಜಿಕ ಭದ್ರತಾ ಯೋಜನೆಯಡಿ ತಾಂತ್ರಿಕ ಕಾರಣದಿಂದ ಕೆಲವು ಫಲಾನುಭವಿಗಳಿಗೆ ಪಿಂಚಣಿ ಲಭ್ಯವಾಗುತ್ತಿಲ್ಲ. ಈ ಬಗ್ಗೆ ಡಿಸಿ ಕಚೇರಿಗೆ ಕಳೆದ ಅಕ್ಟೋಬರ್‌, ಫೆಬ್ರವರಿ ಮತ್ತು ಇತ್ತೀಚೆಗೆ ಮತ್ತೊಮ್ಮೆ ಪತ್ರ ಬರೆಯಲಾಗಿದೆ. 32 ಫಲಾನುಭವಿಗಳ ಪಿಂಚಣಿ ಸಮಸ್ಯೆ ಇದ್ದು, ಅದರಲ್ಲಿ 15 ಫಲಾನುಭವಿಗಳಿಗೆ ಈಗ ಪಿಂಚಣಿ ಬರುತ್ತಿದೆ. 17 ಫಲಾನುಭವಿಗಳ ಪಿಂಚಣಿ ಇನ್ನೂ ಬಂದಿಲ್ಲ. ಈ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಾಗಿದೆ.
ಶಿವರಾಂ,
ಶಿರಸ್ತೆದಾರ, ಶೃಂಗೇರಿ

ವಿಧವಾ ವೇತನ ಪಡೆಯುತ್ತಿದ್ದ ನನಗೆ ಸಮೀಪದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತಿತ್ತು. ಕಳೆದ ನಾಲ್ಕೈದು ತಿಂಗಳಿಂದ ಪಿಂಚಣಿ ಬರುತ್ತಿಲ್ಲ. ಬ್ಯಾಂಕಿನಲ್ಲಿ ಕೇಳಿದರೆ ಶೀಘ್ರವೇ ಬರುತ್ತದೆ ಎಂದು ಹೇಳುತ್ತಿದ್ದಾರೆ. ಸರಕಾರ ಪಿಂಚಣಿಯನ್ನು ಬರುವಂತೆ ಮಾಡಬೇಕು.
ಸುಶೀಲ,
ಮೆಣಸೆ, ಶೃಂಗೇರಿ

ಸರಕಾರದಿಂದ ಹಲವಾರು ವರ್ಷದಿಂದ ಪಿಂಚಣಿ ಪಡೆಯುತ್ತಿದ್ದೆ. ಅಂಚೆ ಮೂಲಕ ಮನೆ ಬಾಗಿಲಿಗೆ ಬರುತ್ತಿದ್ದ ಪಿಂಚಣಿ, 2019 ಏಪ್ರಿಲ್‌ನಿಂದ ಸ್ಥಗಿತಗೊಂಡಿದ್ದು,ಅತ್ಯಗತ್ಯ ಔಷಧಿ, ಮಾತ್ರೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪಿಂಚಣಿ ಮತ್ತೆ ಪಡೆಯಲು ಹರ ಸಾಹಸ ಪಟ್ಟರೂ, ತಾಲೂಕು ಕಚೇರಿಗೆ ಹತ್ತಾರು ಸಾರಿ ಅಲೆದಾಡಿ, ಜನಪ್ರತಿನಿಧಿಗಳಿಗೂ ಮನವಿ ಮಾಡಿದ್ದರೂ, ಪಿಂಚಣಿ ಮಾತ್ರ ಬರುತ್ತಿಲ್ಲ. ಜಿಲ್ಲಾಧಿಕಾರಿಗಳು ನನ್ನ ಕಷ್ಟಕ್ಕೆ ಸ್ಪಂದಿಸಿ, ಮತ್ತೆ ಪಿಂಚಣಿ ಲಭ್ಯವಾಗುವಂತೆ ಮಾಡಲಿ.
ಗಂಗಮ್ಮ,
ಕೊರಡಕಲ್ಲು, ಶೃಂಗೇರಿ

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.