ಭ್ರಷ್ಟ ಅಧಿಕಾರಿಗಳ ಹಣದಾಹಕ್ಕೆ ಅಮಾಯಕ ಬಲಿ ?; ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ!
Team Udayavani, Jan 30, 2022, 11:36 AM IST
ಶೃಂಗೇರಿ: ತಾಲ್ಲೂಕಿನಲ್ಲಿ ಅಕ್ರಮ ಸಕ್ರಮ ಭೂ ಹಗರಣ ;ಅಧಿಕಾರಿಗಳ ಭ್ರಷ್ಟತೆ ಮುಗ್ಧ ಯುವಕನೋರ್ವನನ್ನು ಬಲಿ ತೆಗೆದುಕೊಂಡಿದೆ .
ಇಲ್ಲಿನ ತಹಸೀಲ್ದಾರ್ ವಾಹನದ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ, ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಹೆಗ್ತುರು ಸಮೀಪದ ವಿಜೇತ್ (26) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮನೆಯ ಸಮೀಪದಲ್ಲಿರುವ ಅಡಿಕೆ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳೇನು ಎಂದು ತಿಳಿದಿಲ್ಲ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆ ಗಮನಿಸಿದಾಗ ದೊಡ್ಡವರ ದುರಾಸೆಗೆ ಅಮಾಯಕನ ಬಲಿಯಾಯಿತೇ ಎಂಬ ಅನುಮಾನ ಕಾಡುತ್ತಿದೆ.
ಶೃಂಗೇರಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು , ಪ್ರಕರಣ ದಾಖಲಾಗಿದೆ.
ಈ ಮಧ್ಯೆ ಶೃಂಗೇರಿಗೆ ತಹಸೀಲ್ದಾರ್ ಅವರನ್ನು ನೇಮಕ ಮಾಡುವವರೆಗೂ ಚುನಾವಣಾ ತಹಸೀಲ್ದಾರ ಎಸ್ ವಿ ಪ್ರಸಾದ್ ಅವರನ್ನು ಶೃಂಗೇರಿಯ ತಹಸೀಲ್ದಾರರಾಗಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
Mundugaru:ನಕ್ಸಲ್ ಪೀಡಿತ ಪ್ರದೇಶದಲ್ಲಿ ಪೇಜಾವರ ಶ್ರೀಗಳ ಸಂಚಾರ; ಕಾಡಿನಲ್ಲಿ ರಾಮಮಂತ್ರ ಘೋಷ
Chikkamagaluru: ದತ್ತ ಜಯಂತಿ ಶೋಭಾಯಾತ್ರೆ ಆರಂಭ
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್‌ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.