Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

50 ಸಾವಿರ ಜನರಿಂದ ಏಕಕಂಠದಲ್ಲಿ ಸ್ತೋತ್ರ ಪಠಣ

Team Udayavani, Jan 11, 2025, 12:57 AM IST

sringeri-new

ಶೃಂಗೇರಿ: ಜಗದ್ಗುರು ಶಂಕರಾಚಾರ್ಯ ಶ್ರೀಭಾರತೀತೀರ್ಥ ಮಹಾ ಸ್ವಾಮೀಜಿಯವರು ಸನ್ಯಾಸ ಸ್ವೀಕರಿಸಿ 50 ವರ್ಷಗಳಾದ ಹಿನ್ನೆಲೆಯಲ್ಲಿ “ಸುವರ್ಣ ಭಾರತೀ ಮಹೋತ್ಸವ’ ನಿಮಿತ್ತ ಶೃಂಗೇರಿಯ ಶ್ರೀ ಶಾರದಾಪೀಠದಲ್ಲಿ ಶನಿವಾರ ಆಯೋಜಿಸಿರುವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’ ಕಾರ್ಯಕ್ರಮಕ್ಕಾಗಿ ಕ್ಷಣಗಣನೆ ಆರಂಭವಾಗಿದೆ.

ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಸಂಕಲ್ಪದಂತೆ ಶ್ರೀಮಠದ ಶ್ರೀ ಶಾಂಕರ ತಣ್ತೀ ಪ್ರಸಾರ ಅಭಿಯಾನ ಮತ್ತು ವೇದಾಂತ ಭಾರತೀ ಸಂಸ್ಥೆಗಳು ವರ್ಷವಿಡೀ ಕೈಗೊಂಡ ಕಲ್ಯಾಣವೃಷ್ಠಿ ಸ್ತವ ಸ್ತೋತ್ರ, ಶಿವಪಂಚಾಕ್ಷರಿ ನಕ್ಷತ್ರ ಮಾಲಾ ಸ್ತೋತ್ರ ಮತ್ತು ಲಕ್ಷ್ಮೀ  ನೃಸಿಂಹ ಕರಾವಲಂಬ ಸ್ತೋತ್ರ ಅಭಿಯಾನದ ಮಹಾಸಮರ್ಪಣೆಯಲ್ಲಿ ಸುಮಾರು 50 ಸಾವಿರ ಭಕ್ತರು ಏಕಕಂಠದಲ್ಲಿ ಸಾಮೂಹಿಕ ಸ್ತೋತ್ರ ಪಠಣ ಮೊಳಗಿಸಲಿದ್ದಾರೆ.

ಶ್ರೀ ಶಾರದಾಪೀಠದ ಗುರುಭವನದ ಭಾರತೀನಗರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಉಭಯ ಜಗದ್ಗುರುಗಳಾದ ಶ್ರೀಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀವಿಧುಶೇಖರ ಭಾರತೀ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಲಿದ್ದು ಆಶೀರ್ವಚನ ನೀಡಲಿದ್ದಾರೆ. ಎಡತೊರೆಯ ಶ್ರೀ ಶಂಕರಭಾರತೀ ಸ್ವಾಮೀಜಿ ಸೇರಿದಂತೆ ವಿವಿಧ ಪೀಠದ ಮಠಾಧಿಪತಿಗಳು ಪಾಲ್ಗೊಳ್ಳಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಸಚಿವ ಕೆ.ಜೆ. ಜಾರ್ಜ್‌, ಶಾಸಕ ಟಿ.ಡಿ. ರಾಜೇಗೌಡ ಮುಂತಾದವರು ಭಾಗವಹಿಸಲಿದ್ದಾರೆ.

ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ವೃಕ್ಷಾರೋಪಣ ಕಾರ್ಯಕ್ರಮದಡಿ ಸುಮಾರು 3500 ಶಾಲಾಮಕ್ಕಳಿಗೆ ಸಸಿಗಳನ್ನು ವಿತರಿಸಲಾಗಿದೆ. ಶೃಂಗೇರಿಯಲ್ಲಿ ಸುಮಾರು 50 ಸಾವಿರ ಸಸಿಗಳನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ನೆರವಿನಿಂದ ನೆಡಲಾಗಿದೆ. ಸುಮಾರು 300 ಗೋವುಗಳನ್ನು ರಕ್ಷಿಸಿ ಶ್ರೀಮಠದ ಗೋಶಾಲೆಯಲ್ಲಿ ಸಾಕಲಾಗುತ್ತಿದೆ. ಆರೋಗ್ಯ, ಆಧ್ಯಾತ್ಮಿಕ ಕಾರ್ಯಕ್ರಮಗಳು, ವಿದ್ವತ್‌ ಗೋಷ್ಠಿಗಳನ್ನೂ ಶ್ರೀಶಾರದಾಪೀಠದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.

ಕಲ್ಯಾಣವೃಷ್ಟಿ ಸ್ತವ ಸ್ತೋತ್ರವು ಲಕ್ಷ್ಮೀ ಕಟಾಕ್ಷವನ್ನು ಒದಗಿಸುತ್ತದೆ. ಈ ಸ್ತೋತ್ರ ಪಾರಾಯಣದಿಂದ ಲಕ್ಷ್ಮೀಯು ಸ್ಥಿರವಾಗಿ ನೆಲೆಸುತ್ತಾಳೆ ಎಂದು ಭಗವತ್ಪಾದ ಶಂಕರರೇ ಸ್ತೋತ್ರದ ಕೊನೆಯಲ್ಲಿ ಹೇಳಿದ್ದಾರೆ. ಆದ್ದರಿಂದ ಮಾತೆಯಲ್ಲಿ ಭಕ್ತಿಯಿಂದ ಪಠಣ ಮಾಡಿದರೆ ಚಿತ್ತಕ್ಕೆ ಶಾಂತಿ ದೊರಕುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಜಗದ್ಗುರುಗಳು ಅನುಗ್ರಹಿಸಿದ್ದಾರೆ.

ವರ್ಷಪೂರ್ತಿ ದೇಶಾದ್ಯಂತ ಕಾರ್ಯಕ್ರಮ
ಸುವರ್ಣ ಸಂಭ್ರಮ ಅಂಗವಾಗಿ ವರ್ಷಪೂರ್ತಿ ದೇಶಾದ್ಯಂತ ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಶೃಂಗೇರಿ ಅಲ್ಲದೇ ಪಕ್ಕದ ತಾಲೂಕುಗಳ‌ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಸೇರಿದಂತೆ ಬೆಂಗಳೂರು, ತಿರುಮಲ, ಚೆನ್ನೈ, ಮುಂಬೈ, ನವದೆಹಲಿ ಇತ್ಯಾದಿ ಕಡೆಗಳಲ್ಲಿರುವ ಶ್ರೀಶಾರದಾಪೀಠದ ಶಾಖೆಗಳಲ್ಲಿ ನಿತ್ಯ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ.

ಬಡಜನರಿಗೆ ಮಳೆ-ಗಾಳಿ-ಚಳಿಗಳಿಂದ ರಕ್ಷಿಸಿಕೊಳ್ಳಲು ಕಂಬಳಿ, ಛತ್ರಿ ಹಾಗೂ ಜಾಕೆಟ್‌ಗಳನ್ನು ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಜತೆಗೆ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಭರಿಸಲಾಗಿದೆ. ಲೇಖನ ಸಾಮಗ್ರಿ, ಡಿಜಿಟಲ್‌ ಟ್ಯಾಬ್‌, ಪುಸ್ತಕಗಳನ್ನೂ ವಿತರಿಸಲಾಗಿದೆ.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.