ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಸುರೇಶ್‌

Team Udayavani, Feb 1, 2019, 10:16 AM IST

bell-4.jpg

ಕೊಪ್ಪ: ವಿದ್ಯಾರ್ಥಿಗಳು ಭಯಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಉತ್ತಮ ಅಂಕ ಪಡೆದು ಕೆಲಸ ಪಡೆದುಕೊಳ್ಳಬೇಕು. ಯಾವುದೇ ಕ್ಷೇತ್ರದಲ್ಲೂ ಶ್ರದ್ಧೆಯಿಂದ ಕೆಲಸ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ ಎಂದು ಇಸ್ರೋದ ಖ್ಯಾತ ವಿಜ್ಞಾನಿ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ತಾಲೂಕಿನ ಅಂದಗಾರಿನ ಬಿ.ಎನ್‌. ಸುರೇಶ್‌ ತಿಳಿಸಿದರು.

ಶಿಕ್ಷಣ ಇಲಾಖೆ ಮತ್ತು ಲಯನ್ಸ್‌ ಸಂಸ್ಥೆ ಸಹಯೋಗದಲ್ಲಿ ಪಟ್ಟಣದ ಪುರಭವನದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ಶಕ್ತಿ ದೇಶದ ಸಂಪತ್ತು. ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯುವಕರಿಗೆ ಸರಿಯಾದ ಮಾರ್ಗದರ್ಶನ ಮತ್ತು ಸಹಕಾರ ಸಿಕ್ಕಿದಲ್ಲಿ ಭಾರತ ವಿಶ್ವದಲ್ಲಿಯೇ ಮುಂಚೂಣಿ ರಾಷ್ಟ್ರವಾಗುತ್ತದೆ ಎಂದರು.

ಕಲಿಯುವ ಪ್ರವೃತ್ತಿ ಅಂಕಗಳಿಕೆಗೆ ಸೀಮಿತವಾಗದೇ ನಿರಂತರವಾಗಿರಬೇಕು. ವಾಸ್ತವ ಜಗತ್ತನ್ನು ಅರಿಯಬೇಕು. ಯಾವುದೇ ಕೆಲಸ ಮಾಡುವಾಗ ಹಿಂಜರಿಕೆ ಇರಬಾರದು. ಸಾಧನೆಯ ಹಾದಿಯಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಉತ್ತಮ ಸಾಧನೆ ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ನಮ್ಮ ಸಾಧನೆಗಳು ಮಾತಾಗಬೇಕೆ ಹೊರತು ಮಾತುಗಳೇ ಸಾಧನೆಯಾಗಬಾರದು ಎಂದು ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನವನ್ನು ದುರ್ಬಳಕೆ ಮಾಡದೇ ಮಾನವ ಜನಾಂಗದ ಏಳ್ಗೆಗೆ ಬಳಸಬೇಕು. ದೇಶದ ಅಭಿವೃದ್ಧಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಎಲ್ಲವೂ ಅವಶ್ಯವಾಗಿದೆ. 50 ವರ್ಷಗಳ ಹಿಂದೆ ಭಾರತದಂತೆ ಹಿಂದುಳಿದ ದೇಶವಾಗಿದ್ದ ಚೀನಾ ಇಂದು ಅಮೆರಿಕಾಕ್ಕೆ ಸಡ್ಡು ಹೊಡೆಯುತ್ತಿದೆ. ಭಾರತವೂ ಪ್ರಗತಿಯತ್ತ ದಾಪುಗಾಲು ಹಾಕುತ್ತಿದ್ದು, ಫ್ರಾನ್ಸ್‌ ದೇಶವನ್ನು ಹಿಂದಿಕ್ಕಿ 6ನೇ ಸ್ಥಾನದಲ್ಲಿದೆ. ಮುಂದಿನ ಹತ್ತು ವರ್ಷಗಳಲ್ಲಿ ವಿಶ್ವದ ನಂ. 1 ಸ್ಥಾನ ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಗಣಪತಿ, ಲಯನ್ಸ್‌ ಪ್ರಾಂತೀಯ ಅಧ್ಯಕ್ಷ ತಾರಾನಾಥ್‌, ಸಬಿತಾ ತಾರಾನಾಥ್‌, ಕೊಪ್ಪ ಘಟಕದ ಅಧ್ಯಕ್ಷ ಕೆ.ಜಿ. ಶೋಭಿಂತ್‌, ಸಹದೇವ ಬಾಲಕೃಷ್ಣ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಚಿಶ್ಚಂದ್ರ ಶೆಟ್ಟಿ, ಕ್ಷೇತ್ರ ಸಮನ್ವಯ ಅಧಿಕಾರಿ ಎನ್‌. ಶೇಖರಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.