ಡೆಂಘೀ ಹರಡದಂತೆ ಕ್ರಮ ವಹಿಸಿ
Team Udayavani, Aug 20, 2017, 5:31 PM IST
ಚಿಕ್ಕಮಗಳೂರು: ನಗರ ಸ್ಥಳೀಯ-ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸ್ವತ್ಛತೆ ಕೈಗೊಂಡು ಸಾಂಕ್ರಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಡೆಂಘೀ ಮತ್ತು ಇತರೆ ಸಾಂಕ್ರಮಿಕ ರೋಗಗಳ ನಿಯಂತ್ರಣದ ಕುರಿತು ಆಯೋಜಿಸಿದ್ದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆ.17ರವರೆಗೆ 178 ಡೆಂಘೀ ಪ್ರಕರಣಗಳು, 15 ಚಿಕೂನ್ ಗೂನ್ಯ ಪ್ರಕರಣ ಹಾಗೂ 6 ಮಲೇರಿಯಾ ಪ್ರಕರಣಗಳು ಕಂಡು ಬಂದಿವೆ. ಸ್ವತ್ಛತೆ ಕಾಪಾಡದಿದ್ದರೆ ಸೊಳ್ಳೆಗಳು ಹೆಚ್ಚಾಗಿ ರೋಗಗಳ ಹರಡುವಿಕೆಗೆ ಕಾರಣವಾಗುತ್ತದೆ. ಆದ್ದರಿಂದ ತಮ್ಮ ವ್ಯಾಪ್ತಿಯಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕೆಂದು ಸೂಚಿಸಿದರು. ಚರಂಡಿಗಳನ್ನು ಸ್ವತ್ಛಗೊಳಿಸಬೇಕು. ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಪ್ರಚಾರ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸಿ ಮನೆಯ ಸುತ್ತಮುತ್ತ ಸ್ವತ್ಛತೆ ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನೀರು ಶೇಖರಣೆಗೆ ನಿರ್ಮಿಸಿರುವ ತೊಟ್ಟಿಗಳನ್ನು ಭದ್ರವಾದ ಮುಚ್ಚುಳದಿಂದ ಮುಚ್ಚುವ ವ್ಯವಸ್ಥೆ ಮಾಡಬೇಕೆಂದು ಜನರಲ್ಲಿ ಅರಿವೂ ಮೂಡಿಸಬೇಕು. ಒಂದು ವೇಳೆ ಪ್ರಕರಣಗಳು ಕಂಡು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಇದುವರೆಗೂ 6,41,771 ಮನೆಗಳು, 36,02251 ತಾಣಗಳಲ್ಲಿ ಲಾರ್ವಾ ಸಮೀಕ್ಷೆ ನಡೆಸಲಾಗಿದೆ 6,41,771 ಮನೆಗಳು, 18,611 ತಾಣಗಳಲ್ಲಿ ಲಾರ್ವಾ ಕಂಡು ಬಂದಿದ್ದು ನಿರ್ಮೂಲನೆ ಮಾಡಲಾಗಿದೆ. ರಾಷ್ಟ್ರೀಯ ಮಲೇರಿಯಾ ನಿರ್ಮೂಲನಾ ಚೌಕಟ್ಟು ಕಾರ್ಯಕ್ರಮದಡಿ 48 ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಿ ಮಕ್ಕಳಲ್ಲಿ ಅರಿವು ಮೂಡಿಸಲಾಗಿದೆ. ಮಲೇರಿಯಾ ನಿಯಂತ್ರಣಕ್ಕಾಗಿ ಆನಾಫಿಲಿಸ್ ಸೊಳ್ಳೆ ಉತ್ಪತಿಗೆ ಕಾರಣವಾಗುವ ನೀರಿನ ತಾಣಗಳಿಗೆ ಲಾರ್ವಾಹಾರಿ ಮೀನು ಬಿಡಲು ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಯ ಸದಸ್ಯರು ಮತ್ತು ಸ್ವಸಹಾಯ ಸಂಘಗಳ ನೆರವು ಪಡೆದು ಲಾರ್ವಾ ಸಮೀಕ್ಷೆ ಮತ್ತು ನಿರ್ಮೂಲನಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಕಲ್ಲು ಗಣಿಗಳಲ್ಲಿ ಮಳೆಗಾಲದಲ್ಲಿ ನೀರು ಶೇಖರಣೆಯಾಗಿ ಸೊಳ್ಳೆಗಳ ಉತ್ಪತಿಗೆ ಕಾರಣವಾಗುವುದರಿಂದ ಕ್ವಾರಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಹೆಚ್ಚಿನ ಪ್ರಕರಣಗಳು ಪಟ್ಟಣ ಪ್ರದೇಶಗಳಲ್ಲಿ ಕಂಡು ಬರುತ್ತಿದ್ದು ನಗರಸಭೆ, ಪುರಸಭೆಗಳ ಅಧಿಕಾರಿಗಳು ಪ್ರತಿ ವಾರ್ಡ್‌ಗಳಿಗೂ ಭೇಟಿ ನೀಡಿ ಕಸದ ರಾಶಿಯಿದ್ದರೆ ತೆಗೆಸಿ
ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಪ್ರತಿ ಹಳ್ಳಿಗಳಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಅರಿವು
ಮೂಡಿಸಲು ಕ್ರಮ ವಹಿಸಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಉಪ ಕಾರ್ಯದರ್ಶಿ
ರಾಜಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಚ್. ಮಲ್ಲಿಕಾರ್ಜುನಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.