ಗ್ರಾಮಠಾಣಾ ಜಾಗ ಗುರುತಿಸಲು ಒತ್ತಾಯ
Team Udayavani, Oct 31, 2020, 7:07 PM IST
ಚಿಕ್ಕಮಗಳೂರು: ಗ್ರಾಮಠಾಣಾ ಜಾಗವನ್ನು 15 ದಿನದೊಳಗೆ ಗುರುತಿಸದಿದ್ದರೆ ಮುಂದಿನ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ತಾಪಂ ಮಾಜಿ ಅಧ್ಯಕ್ಷ ಡಿ.ಜೆ. ಸುರೇಶ್ ಎಚ್ಚರಿಸಿದರು.
ಗುರುವಾರ ನಗರದ ತಾಪಂ ಅಂಬೇಡ್ಕರ್ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ಶಾರದಾ ಶಶಿಧರರ್ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ತಾಪಂ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಾಗಿನಿಂದಲೇ ಈ ಸಮಸ್ಯೆ ಪರಿಹರಿಸುವಂತೆ ಹೇಳಲಾಗುತ್ತಿದೆ. ಆದರೆ ಸಮಸ್ಯೆ ಬಗೆಹರಿದಿಲ್ಲ, ಕೂದುವಳ್ಳಿ, ವಸ್ತಾರೆ, ಬಸ್ಕಲ್ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮಠಾಣಾ ಜಾಗವನ್ನು ಕೂಡಲೇ ಗುರುತಿಸಬೇಕು. ಕುಮಾರಗಿರಿಯಲ್ಲಿ ಸ್ಮಶಾನಕ್ಕೆ ಜಾಗವಿಲ್ಲ ಆದಷ್ಟು ಬೇಗ ಜಾಗ ಗುರುತಿಸುವಂತೆ ಇಲಾಖೆ ಅಧಿಕಾರಿಗಳಿಗೆ ಹೇಳಿದರು. ತಾಪಂ ಅಧ್ಯಕ್ಷೆ ಶಾರದಾ ಶಶಿಧರ್ ಮಾತನಾಡಿ, ಪರದೇಶಪ್ಪನ ಮಠದವರಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ನೀಡುವಂತೆ ನೀಡಬೇಕು. ಹಿಂದಿನ ಜಿಲ್ಲಾಧಿಕಾರಿಗಳು ಕೆಲವರಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ನೀಡಿದ್ದರೂ ಈಗ ಅಲ್ಲಿ ವಾಸವಾಗಿರುವ ಎಲ್ಲರೂ ಶೌಚಾಲಯ ನಿರ್ಮಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ತಾಪಂ ಸದಸ್ಯ ಸಿದ್ದಾಪುರ ರಮೇಶ್ ಮಾತನಾಡಿ, ವಿದ್ಯಾರ್ಥಿ ನಿಲಯಗಳಿಗೆ ಆಹಾರಧಾನ್ಯ ಬಿಡುಗಡೆಗೊಂಡಿದ್ದು, ಸಿರಿವಾಸೆ ಮತ್ತು ಮಲ್ಲಂದೂರು ಸೇರಿದಂತೆ ಇತರೆಡೆ ಸಂಗ್ರಹಿಸಲಾಗಿದೆ. ಆಹಾರಧಾನ್ಯಗಳನ್ನು ಉಪಯೋಗಿಸದೆ ಸ್ವಲ್ಪದಿನ ಹಾಗೇ ಬಿಟ್ಟರೇ ಹಾಳಾಗಲಿದೆ. ಆದ್ದರಿಂದ ಕೂಡಲೇ ಸರ್ಕಾರಕ್ಕೆ ಹಿಂದಿರುಗಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸುಗಡವಾನಿ ಶಾಲೆಗೆ ಸೇರಿದ ಜಾಗ ಒತ್ತುವರಿಯಾಗಿದೆ. ದಾಖಲೆ ಇಲ್ಲದೆ ಮನೆ, ಕಣ, ಶೆಡ್ ನಿರ್ಮಿಸಿದ್ದರೆ ವಾರದೊಳಗೆ ಸ್ಥಳಕ್ಕೆ ತೆರಳಿ ದಾಖಲಾತಿ ಪರಿಶೀಲಿಸಿ ತೆರವುಗೊಳಿಸದಿದ್ದರೆ ತಾಲೂಕು ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ ಎಂದು ಸಿದ್ದಾಪುರ ರಮೇಶ್ ಎಚ್ಚರಿಸಿದರು.
ಕೆ.ಯು. ಮಹೇಶ್ ಮಾತನಾಡಿ, ಕಂಚೇನಹಳ್ಳಿ ಗ್ರಾಮದ ಕ್ಯಾತನಕಟ್ಟೆಗೆ ಹೋಗುವುದಕ್ಕೆ ದಾರಿಯಿಲ್ಲದೆ ದಲಿತರು ಜೀವನ ನಿರ್ವಹಣೆಗೆಂದು ಅರ್ಧ, ಒಂದು ಎಕರೆ ಗದ್ದೆಯನ್ನು ಪಾಳುಬಿಡುವಂತಾಗಿದೆ. ಶಾಸಕರು ದಾರಿ ಬಿಡಿಸಿಕೊಡಲು ಸೂಚಿಸಿದರೂ ಅಧಿಕಾರಿಗಳು ಮಾತು ಕೇಳುತ್ತಿಲ್ಲವೆಂದು ಸಭೆಗೆ ತಿಳಿಸಿದರು.
ಗಿರಿಜನರಿಗೆ ನೀಡುವ ಪೌಷ್ಟಿಕ ಆಹಾರವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಸಭೆಯ ಗಮನ ಸೆಳೆದಾಗ, ಇದಕ್ಕೆ ಉತ್ತರಿಸಿದ ತಾಪಂ ಕಾರ್ಯ ನಿರ್ವಹಣಾಧಿಕಾರಿ ರೇವಣ್ಣ, ಈ ಕುರಿತು ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಗಮನ ಸೆಳೆಯುವುದಾಗಿ ತಿಳಿಸಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.