ಕೋವಿಡ್ ಹರಡದಂತೆ ಎಚರ ವಹಿಸಿ: ಸುರೇಶ್
Team Udayavani, Apr 11, 2020, 4:24 PM IST
ತರೀಕೆರೆ: ಅಜ್ಜಂಪುರ ತಾಲೂಕಿನ ಪಿಡಿಒಗಳಿಗೆ ಶಾಸಕ ಡಿ.ಎಸ್.ಸುರೇಶ್ ಮಾಸ್ಕ್ ವಿತರಣೆ ಮಾಡಿದರು.
ತರೀಕೆರೆ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್-19 ವಿರುದ್ಧ ಸೇವೆ ಸಲ್ಲಿಸುತ್ತಿರುವ ಗ್ರಾ.ಪಂ. ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಮಾಸ್ಕ್ ನೀಡಲಾಗುತ್ತಿದೆ. ಅವಶ್ಯಕತೆ ಬಿದ್ದಲ್ಲಿ ಇನ್ನಷ್ಟು ಮಾಸ್ಕ್ಗಳನ್ನು ಒದಗಿಸಲಾಗುವುದು ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.
ಅವರು ತಾ.ಪಂ. ಸಭಾಂಗಣದಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆಮಾಸ್ಕ್ ವಿತರಸಿ ಮಾತನಾಡಿದರು. ಮೊದಲ ಹಂತದಲ್ಲಿ ಪ್ರತಿ ಗಾ.ಪಂಗೆ 500, ವ್ಯಾಪ್ತಿ ದೊಡ್ಡದಾಗಿರುವ ಪಂಚಾಯಿತಿಗಳಿಗೆ 1000 ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ಇವುಗಳನ್ನು ಗಾ.ಪಂಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ನೀಡಬೇಕು. ಈಗಾಗಲೇ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಇನ್ನಿತರ ಸಿಬ್ಬಂದಿಗೆ ಮಾಸ್ಕ್ಗಳನ್ನು ಒದಗಿಸಲಾಗಿದೆ. ಕೊರೊನಾ ಸೋಂಕು ತಡೆಗೆ ಇವರೆಲ್ಲ ನಿರ್ವಹಿಸುತ್ತಿರುವ ಕೆಲಸ ಶ್ಲಾಘನೀಯ ಎಂದರು.
ಪಡಿತರ ವಿತರಣೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪಡಿತರ ಚೀಟಿ ಹೊಂದಿರದ ಕುಟುಂಬಗಳಿಗೂ ಆಹಾರ ಧಾನ್ಯ ವಿತರಣೆ ಮಾಡಲು ಈಗಾಗಲೇ ಸರಕಾರ ನಿರ್ಧರಿಸಿದೆ. ಪಡಿತರ ಚೀಟಿ ಹೊಂದಿರುವ ವ್ಯಕ್ತಿಗಳಿಂದ ಹಣ ವಸೂಲಿ ಮಾಡಬಾರದು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಯಾವುದೇ ವಾಹನ ಸೌಲಭ್ಯವಿರದ ಕಾರಣ ಕೆಮ್ಮಣ್ಣು ಗುಂಡಿಯಲ್ಲಿರುವ ಕೆಲವು ಕುಟುಂಬಗಳು ಪಡಿತರ ಪಡೆಯಲು ಸಾಧ್ಯವಾಗಿಲ್ಲ. ಅವರಿಗೆ ಸ್ಥಳದಲ್ಲಿಯೇ ಪಡಿತರ ನೀಡುವಂತೆ ಆಹಾರ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದರು. ತಾಲೂಕುಗಳಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ಪಡಿತರವನ್ನು ಶಾಸಕರು ಮತ್ತು ಬಿಜೆಪಿಯಿಂದ ವಿತರಣೆ ಮಾಡಲಾಗುತ್ತಿದೆ ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು. ತಾ.ಪಂ ಅದ್ಯಕ್ಷೆ ಪದ್ಮಾವತಿ, ಇಓ ವಿಶಾಲಾಕ್ಷಮ್ಮ ವಿವಿಧ ಗ್ರಾಪಂ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.