ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯ
Team Udayavani, Jul 20, 2017, 12:22 PM IST
ಶೃಂಗೇರಿ: ವ್ಯಾಸಂಗದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ
ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ಅವರು ಬುಧವಾರ ಆದಿಚುಂಚನಗಿರಿ ಸಮುದಾಯಭವನದಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯೋಪಾಧ್ಯಾಯರಿಗೆ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಅಂದಿನ ಪಾಠ ಪ್ರವಚನಗಳನ್ನು ಅಂದೇ ಪುನಃ ಮನನ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಸಮಾಜದ ಹಿತವನ್ನು ಕಾಪಾಡಲು ಶಿಕ್ಷಣ ಪೂರಕವಾಗಬೇಕು. ಮನೆಯೇ ಮೊದಲ ಪಾಠ ಶಾಲೆಯಾಗಿದ್ದು,ಯೋಗ್ಯ ಶಿಕ್ಷಕನ ಅಡಿ ಪಳಗಿದ ಶಿಷ್ಯ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುತ್ತಾನೆ. ಗುರು ಶಿಷ್ಯನ ಏಳಿಗೆಯನ್ನು ಬಯಸುತ್ತಾನೆ ಎಂದರು.
ಚಿಕ್ಕಮಗಳೂರು ಬಿಜಿಎಸ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಸುಬ್ಬರಾಯ ಮಾತನಾಡಿ, ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಸಾಧನೆ ಮಾಡಿದ ವ್ಯಕ್ತಿಗಳು ಕಠಿಣ ಶ್ರಮದಿಂದ ಸಾಧನೆ ಮಾಡಿರುತ್ತಾರೆ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು. ಬದಲಾದ ಶಿಕ್ಷಣ ಪದ್ಧತಿಯಲ್ಲಿ ವಿದ್ಯಾರ್ಥಿಗಳು ಬರೆದು ಕಲಿಕೆ ಮಾಡುವುದನ್ನು ಕಡಿಮೆ ಮಾಡಿದ್ದು,ಗಣಿತದಂತಹ ವಿಷಯಗಳು ಬರೆದು ಕಲಿತಷ್ಟು ಅದರಲ್ಲಿ ಪರಿಣಿತಿ ಹೊಂದಲು ಸಾಧ್ಯವಾಗುತ್ತದೆ ಎಂದರು.
ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ರಾಜ್ಯದ ವಿವಿಧೆಡೆಯ ಬಿಜಿಎಸ್ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಚಿಕ್ಕಬಳ್ಳಾಪುರದ ಡಾ| ಎನ್.ಶಿವರಾಮ ಶೆಟ್ಟಿ ಮತ್ತು ಡಾ| ಶಿವರಾಮ ತರಬೇತಿ ನೀಡಿದರು. ಬಿಜಿಎಸ್ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ
ಕೆ.ಸಿ.ನಾಗೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.