![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 5, 2021, 4:47 PM IST
ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 8 ರಂದು ತೇಜಸ್ವಿ ಸಾಹಿತ್ಯ ವಿಚಾರ ಮಂಥನ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 11-30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ವರ್ತಮಾನದಲ್ಲಿ ತೇಜಸ್ವಿ ವಿಚಾರಧಾರೆ ವಿಷಯದ ಕುರಿತು ಚಿಕ್ಕಮಗಳೂರಿನ ನಿವೃತ್ತ ಉಪನ್ಯಾಸಕರಾದ ಬಿ ತಿಪ್ಪೆರುದ್ರಪ್ಪ ಅವರು ಉಪನ್ಯಾಸ ನೀಡಲಿದ್ದಾರೆ. ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿಯವರ ನೆನಪಿನ ಕಥಾಸ್ಪರ್ಧೆ 2021 ರ ತೆರೆದ ಅಂಚೆ ಎಂಬ ಕಥಾ ಸಂಕಲನ ಬಿಡುಗಡೆಯಾಗಲಿದೆ.
ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿಲ್ಲ
ಆ ದಿನ ಸಂಜೆ ತೇಜಸ್ವಿ ಓದು ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಪಾಕಕ್ರಾಂತಿ ಮತ್ತು ಇತರ ಕಥೆಗಳು ಕೃತಿಯ ಬಗ್ಗೆ ಸಾಹಿತಿಗಳಾದ ರೇಖಾ ನಾಗರಾಜರಾವ್ ಅವರು ಮಾತನಾಡಲಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರವಾಗಲಿದ್ದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಫೇಸ್‌ಬುಕ್‌ನ ಕೆಪಿಪಿಟ್ರಸ್ಟ್ ಅಧಿಕೃತ ಪೇಜ್‌ನಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 8971920839, 9663098873 ಗೆ ಸಂಪರ್ಕಿಸಬಹುದಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.