ಕೋವಿಡ್ ವಿರುದ್ಧ ಹೋರಾಟ ಯುದ್ಧವಿದಂತೆ

ಕೆಲವರ ಬೇಜವಾಬ್ದಾರಿಯೇ ಸೋಂಕು ಹೆಚ್ಚಳಕ್ಕೆ ಕಾರಣಮತ್ತೆ ಸೋಂಕು ಕಂಡರೆ ಕಠಿಣ ಕ್ರಮ

Team Udayavani, Apr 25, 2020, 6:32 PM IST

25-April-10

ತರೀಕೆರೆ: ಸಚಿವ ಸಿ.ಟಿ. ರವಿ ನಿತ್ಯ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಬಡಿಸಿದರು.

ತರೀಕೆರೆ: ಚಿಕ್ಕಮಗಳೂರಿನಲ್ಲಿ ಆರಂಭವಾಗಲಿರುವ ವೈದ್ಯಕೀಯ ಕಾಲೇಜಿಗೆ ಹಲವಾರು ಅಡೆ-ತಡೆಗಳು ಇದ್ದವು. ಅರಣ್ಯ ಇಲಾಖೆ ಅನುಮತಿ ನೀಡಿರಲಿಲ್ಲ. ಆದರೆ ಈಗ ಅರಣ್ಯ ಇಲಾಖೆ ಕೆಲವು ಷರತ್ತುಗಳೊಂದಿಗೆ ವೈದ್ಯಕೀಯ ಕಾಲೇಜಿನ ಆರಂಭಕ್ಕೆ ಅನುಮತಿ ನೀಡಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಕ್ಯಾಬಿನೆಟ್‌ ಕಾಲೇಜು ಆರಂಭಿಸಲು ಅನುಮತಿ ನೀಡಿರುವುದು ಸಂತಸ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ತಿಳಿಸಿದರು.

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಆವರಣದಲ್ಲಿ ಶಾಸಕ ಡಿ.ಎಸ್‌. ಸುರೇಶ್‌ ನಡೆಸುತ್ತಿರುವ ನಿತ್ಯ ಅನ್ನ ದಾಸೋಹದಲ್ಲಿ ಅನ್ನ ವಿತರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೋವಿಡ್ ಸೋಂಕಿನಿಂದಾಗಿ ಜನಸಾಮಾನ್ಯರ ಸ್ಥಿತಿ ಅತಂತ್ರವಾಗಿದೆ, ಸಣ್ಣ, ಸಣ್ಣ ವ್ಯಾಪಾರಿಗಳು, ಉದ್ದಿಮೆದಾರರು ಸಂಕಷ್ಟದಲ್ಲಿದ್ದಾರೆ. ಇದನ್ನು ಅರಿತಿರುವ ಕೇಂದ್ರ ಸರಕಾರ 1ಲಕ್ಷ 70 ಕೋಟಿ ರೂ. ನೆರವನ್ನು ನೀಡಿದೆ. ಸ್ವಾತ್ರಂತ್ರ್ಯಾ ನಂತರದಲ್ಲಿ ದೇಶದಲ್ಲಿ ಘೋಷಿಸಿರುವ ಅತಿ ಹೆಚ್ಚಿನ ನೆರವು ಇದಾಗಿದೆ. ಅತಿವೃಷ್ಟಿ, ಅನಾವೃಷ್ಟಿ, ಯುದ್ಧ ಮತ್ತು ಆರ್ಥಿಕ ಸಂಕಷ್ಟಗಳು ಎದುರಾದಾಗಲೂ ಇಂತಹ ನೆರವು ಯಾವುದೇ ಸರಕಾರ ನೀಡಿರಲಿಲ್ಲ ಎಂದರು.

ಕೋವಿಡ್ ಸೋಂಕು ವಿರುದ್ದದ ಹೋರಾಟ ಒಂದು ಯುದ್ಧವಿದ್ದಂತೆ. ಈ ಯುದ್ಧದಲ್ಲಿ ನಾವಿನ್ನೂ ಗೆಲುವು ಸಾಧಿಸಿಲ್ಲ ಮತ್ತು ಶತ್ರುವಿನ ನಾಮಾವಶೇಷವಾಗಿಲ್ಲ. ಕೋವಿಡ್ ಒಂದು ಕಾಣದ ಶತ್ರುವಿದ್ದ ಹಾಗೆ. ಅದು ನಾಶವಾಗಿಲ್ಲ ಮತ್ತು ಔಷದ ಇನ್ನೂ ಸಿದ್ಧವಾಗಿಲ್ಲ. ಜನರು ವೈಯಕ್ತಿಕ, ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಲಾಕ್‌ಡೌನ್‌ ಸಂಪೂರ್ಣ ತೆಗೆದು ಹಾಕಿಲ್ಲ ಎಂದರು.

ಸರಕಾರ ನೀಡಿದ ಮಾರ್ಗಸೂಚಿಯನ್ನು ಅನುಸರಿಸಿದ್ದರೆ ದೇಶ ಕೋವಿಡ್ ಮುಕ್ತವಾಗುತ್ತಿತ್ತು. ಆದರೆ ಕೆಲ ಜನರ ದುರುದ್ದೇಶ ಮತ್ತು ಅರಿವಿಲ್ಲದ ಕಾರಣ ದಿನನಿತ್ಯ ಪ್ರಕರಣಗಳು ದಾಖಲಾಗುತ್ತಿವೆ. ಜನರ ಹಿತದೃಷ್ಟಿಯಿಂದ ಲಾಕ್‌ಡೌನ್‌ ಸಡಿಲಿಕೆ ಮಾಡಲಾಗಿದೆ. ಜಿಲ್ಲೆ ಹಸಿರು ವಲಯದಲ್ಲಿದೆ. ಸಡಿಲಿಕೆ ಕಾರಣದಲ್ಲಿ ಸೋಂಕು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಡಿ.ಎಸ್‌.ಸುರೇಶ್‌, ಕಡೂರು ಶಾಸಕ ಬೆಳ್ಳಿಪ್ರಕಾಶ್‌, ಜಿಪಂ ಸದಸ್ಯ ಕೆ.ಆರ್‌. ಆನಂದಪ್ಪ, ರಾಜೇಶ್ವರಿ, ಬಿಜೆಪಿ ಅದ್ಯಕ್ಷ ಅಜಯಕುಮಾರ್‌, ಡಿ.ಎಸ್‌. ಗಿರೀಶ್‌, ಡಿವೈಎಸ್‌ಪಿ ರೇಣುಕಾಪ್ರಸಾದ್‌, ತಹಶೀಲ್ದಾರ್‌ ಸಿ.ಜಿ. ಗೀತಾ, ಇಒ ವಿಶಾಲಾಕ್ಷಮ್ಮ, ಸಿಒ ಗಿರೀಶ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.