ಚುನಾವಣೆಗೂ ಮಠದ ಭೇಟಿಗೂ ಸಂಬಂಧವಿಲ್ಲ
Team Udayavani, Mar 7, 2019, 10:31 AM IST
ಶೃಂಗೇರಿ: ಲೋಕಸಭಾ ಚುನಾವಣೆಗೂ ಶೃಂಗೇರಿ ಪೀಠಕ್ಕೆ ಆಗಮಿಸುತ್ತಿರುವುದಕ್ಕೂ ಸಂಬಂಧವಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಇಲ್ಲಿಗೆ ಆಗಮಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಶ್ರೀ ಶಾರದಾ ಪೀಠಕ್ಕೆ ಆಗಮಿಸುವ ಮುನ್ನ ಬುಧವಾರ ಕೊರಡಕಲ್ಲಿನ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ನಿಖೀಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಹಿನ್ನೆಲೆಯಲ್ಲಿ ಶಾರದಾಪೀಠಕ್ಕೆ ಬಂದಿಲ್ಲ. ಮೊದಲಿನಿಂದಲೂ ನಮ್ಮ ಕುಟುಂಬ ಶೃಂಗೇರಿಗೆ ಯಾವಾಗಲೂ ಆಗಮಿಸುತ್ತಿದೆ ಎಂದರು.
ಶ್ರೀಮಠದ ಭಕ್ತರಾಗಿರುವ ನಮ್ಮ ಕುಟುಂಬ ಮಠಕ್ಕೆ ಬರುತ್ತಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ನಾನು ಅಧಿಕಾರದಲ್ಲಿ ಇಲ್ಲದಿದ್ದಾಗಲೂ ಇಲ್ಲಿಗೆ ಬರುತ್ತಿದ್ದೆ. ಜಗದ್ಗುರುಗಳ ಹಾಗೂ ದೇವಿಯ ಆಶೀರ್ವಾದ ಪಡೆಯಲು ಶ್ರೀಮಠಕ್ಕೆ ಆಗಮಿಸಿರುವುದಾಗಿ ಹೇಳಿದರು.
ರೈತರ ಸಾಲ ಮನ್ನಾ ವಿಷಯದಲ್ಲಿ ಪ್ರಧಾನಿ ಮೋದಿಯವರು ಸಾಲ ಮನ್ನಾ ಮಾಡುವುದು ಪಾಪದ ಕೃತ್ಯ ಎಂದು ಹೇಳಿದ್ದರು ಆದರೆ ಈಗ ಚುನಾವಣೆ ಎದುರಾಗೋ ಸಂದರ್ಭದಲ್ಲಿ ರೈತರ ಖಾತೆಗೆ 6 ಸಾವಿರ ರೂ. ಜಮಾ ಮಾಡುವುದಾಗಿ ಹೇಳುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ ಎಂದರು.
ರಾಜ್ಯ ಸರಕಾರ ರೈತರ ಹಾಗೂ ಜನ ಸಾಮಾನ್ಯರ ಪರವಾಗಿ ಆಡಳಿತ ನೀಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಕಳೆದ ಐದು ವರ್ಷದಲ್ಲಿ ಏನು ಕೊಟ್ಟಿದ್ದಾರೆ ಎಂಬುದು ಜನತೆ ತೀರ್ಮಾನ ಮಾಡಲಿ. ರೈತರ ಖಾತೆಗೆ ಕೇವಲ ಅಲ್ಪ ಮೊತ್ತದ ಹಣ ನೀಡಿ ಅದನ್ನೇ ದೊಡ್ಡ ಸಾಧನೆ
ಎಂಬಂತೆ ಮಾತನಾಡುತ್ತಿದ್ದಾರೆ. ಆದರೆ ರಾಜ್ಯ ಸರಕಾರ ರೈತರ 42 ಸಾವಿರ ಕೋಟಿ ರೂ. ಮನ್ನಾ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಿದೆ.
ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ ಎಂದು ಮೋದಿ ವ್ಯಾಖ್ಯಾನಿಸಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಅನೇಕ ಮುಖಂಡರ ಸಲಹೆ, ಸಹಕಾರ ಪಡೆಯುತ್ತಿದ್ದೇನೆ. ಅದನ್ನು ರಿಮೋಟ್ ಕಂಟ್ರೋಲ್ ಎಂದು ಹೇಳುವುದು ಸರಿಯಲ್ಲ. ದೇವೇಗೌಡ ಕುಟುಂಬ ಗೌಡ ಜನಾಂಗವನ್ನು ಜಿಪಿಎ ಎಂದು ಭಾವಿಸಿದೆ ಎಂಬ ಶಾಸಕ ಪ್ರೀತಂಗೌಡ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಈ ರೀತಿ ಊಹೆ ಮಾಡಿಕೊಂಡರೆ ನಾನೇನು ಮಾಡಲಿ. ಅವರ ಮಾತು ಹುಡುಗಾಟಿಕೆಯದ್ದು. ಜನರ ಪ್ರೀತಿ ವಿಶ್ವಾಸದಿಂದ ನಮ್ಮ ಕುಟುಂಬ ರಾಜಕೀಯದಲ್ಲಿದ್ದು,ಜನರ ಸೇವೆ ಮಾಡುವ ಅವಕಾಶ ದೊರಕಿದೆ ಎಂದರು.
ಮುಖ್ಯಮಂತ್ರಿಗಳೊಂದಿಗೆ ಮಾಜಿ ಪ್ರದಾನಿ ಎಚ್ .ಡಿ.ದೇವೇಗೌಡ, ಚನ್ನಮ್ಮ, ಅನಿತಾಕುಮಾರಸ್ವಾಮಿ, ನಿಖೀಲ್‌ಗೌಡ ಆಗಮಿಸಿದ್ದರು. ಮುಖ್ಯಮಂತ್ರಿಗಳನ್ನು ಹೆಲಿಪ್ಯಾಡಿನಲ್ಲಿ ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಎಚ್.ಜಿ.ವೆಂಕಟೇಶ್, ಬಿ.ಬಿ.ನಿಂಗಯ್ಯ, ಜಿಲ್ಲಾಧಿಕಾರಿ ಡಾ|ಗೌತಮ್ ಮತ್ತಿತರರು ಇದ್ದರು.
ಶ್ರೀ ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಶ್ರೀಮಠದ ಆಡಳಿತಾಧಿಕಾರಿ ಡಾ|ಗೌರಿಶಂಕರ್ ಪೂರ್ಣಕುಂಭ ಸ್ವಾಗತ ನೀಡಿದರು. ಗುರುವಾರ ಮುಖ್ಯಮಂತ್ರಿಗಳ ಕುಟುಂಬ ಶ್ರೀಮಠದಲ್ಲಿ ವೀಶೇಷ ಪೂಜೆ ನೆರವೇರಿಸಲಿದ್ದು, ನಂತರ ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ
ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದಾರೆ.
ರೈತರ ಸಾಲ ಮನ್ನಾ ವಿಷಯದಲ್ಲಿ ಪ್ರಧಾನಿ ಮೋದಿಯವರು ಸಾಲ ಮನ್ನಾ ಮಾಡುವುದು ಪಾಪದ ಕೃತ್ಯ ಎಂದು ಹೇಳಿದ್ದರು
ಆದರೆ ಈಗ ಚುನಾವಣೆ ಎದುರಾಗೋ ಸಂದರ್ಭದಲ್ಲಿ ರೈತರ ಖಾತೆಗೆ 6 ಸಾವಿರ ರೂ. ಜಮಾ ಮಾಡುವುದಾಗಿ ಹೇಳುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ
ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.