ಶೃಂಗೇರಿ ಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
Team Udayavani, Nov 5, 2018, 6:25 AM IST
ಶೃಂಗೇರಿ: ಶ್ರೀ ಶಾರದಾಪೀಠದ 36 ನೇ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳ ಸನ್ಯಾಸ ಸ್ವೀಕಾರ ದಿನದ ಅಂಗವಾಗಿ ಭಾನುವಾರ ಶ್ರೀ ಮಠದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಬೆಳಗ್ಗೆ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳು ಗುರುನಿವಾಸದಲ್ಲಿ ಶ್ರೀ ಚಂದ್ರಮೌಳೇಶ್ವರಸ್ವಾಮಿ, ಶ್ರೀಚಕ್ರ ಹಾಗೂ ರತ್ನಗರ್ಭ ಗಣಪತಿಗೆ ಪೂಜೆ ಸಲ್ಲಿಸಿದರು. ಶ್ರೀ ಶಾರದಾ ದೇಗುಲಕ್ಕೆ ಆಗಮಿಸಿ ಪೀಠದಲ್ಲಿರುವ ಹೊರಪ್ರಾಕಾರದ ಶ್ರೀವಿದ್ಯಾಶಂಕರ, ಶ್ರೀ ಸುಬ್ರಮಣ್ಯ ಸ್ವಾಮೀಜಿ, ಶ್ರೀ ಸುರೇಶ್ವರಾಚಾರ್ಯ, ಶ್ರೀವಾಗೀಶ್ವರಿ ದೇವಸ್ಥಾನ ಶ್ರೀ ಶಂಕರಾಚಾರ್ಯ, ಶ್ರೀ ತೋರಣಗಣಪತಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಾರದಾ ಸನ್ನಿ ಧಿಯಲ್ಲಿ ದೇವೀ ಸಪ್ತಶತಿ ಪಾರಾಯಣ, ಶ್ರೀಸೂಕ್ತ, ಪುರುಷ ಸೂಕ್ತ ಪಾರಾಯಣ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಇವರೊಂದಿಗೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಹಾಜರಿದ್ದರು. ಇದಕ್ಕೂ ಮೊದಲು ಭಾರತೀತೀರ್ಥರು ಗುರುಭವನದಲ್ಲಿ ಶ್ರೀ ಚಂದ್ರಶೇಖರ ಭಾರತೀ, ಶ್ರೀ ಅಭಿನವ ವಿದ್ಯಾತೀರ್ಥಸ್ವಾಮೀಜಿಗಳ ಅಧಿಷ್ಠಾನಮಂದಿರದಲ್ಲಿ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.