ರಾಜ್ಯ ಸರ್ಕಾರ ಟೇಕಾಫ್ ಆಗಿಲ್ಲ
Team Udayavani, Jun 22, 2018, 11:31 AM IST
ಚಿಕ್ಕಮಗಳೂರು: ರಾಜ್ಯ ಸರ್ಕಾರವಿನ್ನೂ ಟೇಕಾಫ್ ಆಗಿಲ್ಲ. ಸರ್ಕಾರ ಎಷ್ಟು ತಿಂಗಳು ಮುಂದುವರೆಯುವುದೋ ಎಂಬ ಆತಂಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕಾಡುತ್ತಿದೆ ಎಂದು ಸಂಸದೆ, ಬಿಜೆಪಿ ರಾಜ್ಯ ಪ್ರಧಾನ
ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಹೇಳಿದರು.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ ಮಂತ್ರಿ ಮಂಡಲ ರಚನೆ ಸಮರ್ಪಕವಾಗಿಲ್ಲ. ಸಾಲಮನ್ನಾ ಮಾಡಲು ನೆರವು ನೀಡಿ ಎಂದು ಕುಮಾರಸ್ವಾಮಿ ಕೇಂದ್ರದ ಮೊರೆ ಹೋಗಿದ್ದಾರೆ. ಆದರೆ, ಉತ್ತರ ಪ್ರದೇಶ ಸರ್ಕಾರ 1 ಲಕ್ಷ ರೂ.ರೈತರ ಸಾಲ ಮನ್ನಾ ಮಾಡಿದೆ. ಮಹಾರಾಷ್ಟ್ರದಲ್ಲಿಯೂ ಸಾಲ ಮನ್ನಾ
ಮಾಡಲಾಗಿದೆ. ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸುತ್ತಿರುವ ಪಂಜಾಬಿನಲ್ಲಿಯೂ ರೈತರ ಸಾಲ ಮನ್ನಾ ಮಾಡಲಾಗಿದೆ. ಆದರೆ ನಮ್ಮ ರಾಜ್ಯ ಸರ್ಕಾರ ಕೇಂದ್ರದ ನೆರವು ಕೇಳುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷ ಹಾಗೂ ಜೆಡಿಎಸ್ ಎರಡೂ ಸಹ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಆಗ ಕೇಂದ್ರ ಸರ್ಕಾರವನ್ನು ಕೇಳಿದ್ದರೆ. ಸಿ.ಎಂ. ಆದ ನಂತರ ಜವಾಬ್ದಾರಿಯಿಂದ ಆಡಳಿತ ನಡೆಸಬೇಕು ಎಂದರು.
ಒಂದು ವರ್ಷ ಅಲ್ಲ, ಒಂದು ತಿಂಗಳು ಅಧಿಕಾರದಲ್ಲಿ ಇರುತ್ತೇನೋ, ಇಲ್ಲವೋ ಎಂಬ ಭಯ ಮುಖ್ಯಮಂತ್ರಿಯನ್ನು
ಕಾಡುತ್ತಿದೆ. ಇದೊಂದು ಅನೈತಿಕ ಸರ್ಕಾರ. 78 ಸ್ಥಾನವಿದ್ದ ಕಾಂಗ್ರೆಸ್ 38 ಸ್ಥಾನವಿದ್ದ ಜೆಡಿಎಸ್‌ಗೆ ಅಧಿಕಾರ ಬಿಟ್ಟುಕೊಟ್ಟಿದೆ.
ಕಾಂಗ್ರೆಸ್‌ಗೆ ನ್ಯಾಯ ಸಿಗುತ್ತೆ ಅನ್ನೋ ಭರವಸೆ ಇಲ್ಲ. ಅಪ್ಪ, ಮಕ್ಕಳು, ಅಣ್ಣತಮ್ಮಂದಿರು ಸೇರಿ ರಾಜ್ಯಭಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಅನ್ನು ಹೇಗೆ ಮುಗಿಸುತ್ತಾರೆ ಎಂಬುದನ್ನು ಬರುವಂತಹ ದಿನದಲ್ಲಿ ನೋಡಬಹುದಾಗಿದೆ ಎಂದು ಹೇಳಿದರು.
ಬೇಳೂರು ಗೋಪಾಲಕೃಷ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಈಗ ಯಾವ ಪಕ್ಷದಲ್ಲಿದ್ದಾರೋ ಆ ಪಕ್ಷವೇ ಆಡಳಿತದಲ್ಲಿದೆ. ನನ್ನ ಮನೆ ಮೇಲೆ ಐಟಿ ರೈಡ್ ಮಾಡಿಸಲಿ. ಬಿಜೆಪಿಯಲ್ಲಿ ಸೀಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈ ರೀತಿಯ ಆರೋಪವನ್ನು ಮೊದಲಿಂದಲೂ ಅವರು ಮಾಡುತ್ತಲೇ ಇದ್ದಾರೆ. ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ.
ಕಾಂಗ್ರೆಸ್ ಜೆಡಿಎಸ್ ಮಾಡಿರುವ ಪಾಪಕ್ಕೆ ಅವರೇ ಕುಸಿದು ಹೋಗಲಿದ್ದಾರೆ. ಕುಸಿಯುವುದನ್ನು ನೋಡಲು ನಾವೂ ಕಾಯುತ್ತಿದ್ದೇವೆ ಎಂದರು. ಕೇಂದ್ರ ಸರ್ಕಾರ ಐಟಿ ಸಂಸ್ಥೆಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶೋಭಾ, ದೇಶದಲ್ಲಿ 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸಿದೆ. ಆಗೆಲ್ಲ ಆ ಪಕ್ಷ ಐಟಿಯನ್ನು ದುರ್ಬಳಿಕೆ ಮಾಡಿಕೊಂಡಿದೆಯೇ ಎಂದು ಪ್ರಶ್ನಿಸಿದರು.
ಉಪ್ಪು ತಿಂದವರು, ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಐಟಿಯ ಹೆದರಿಕೆ ಇರುತ್ತದೆ. ನ್ಯಾಯಯುತವಾಗಿ ತೆರಿಗೆ ಕಟ್ಟಿದವರಿಗೆ ಅದರ ಭಯ ಇರುವುದಿಲ್ಲ. ಹಗರಣಗಳನ್ನು ಹೊರಗೆಳೆಯಲು ಹೋದರೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆಯುತ್ತಿದೆ. ಐಟಿ ದಾಳಿಯನ್ನು ರಾಜಕೀಯಗೊಳಿಸುವ ಮೂಲಕ ವ್ಯವಸ್ಥೆಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.