Mudigere: ಆಸ್ಪತ್ರೆ ಐಸಿಯುನಲ್ಲೇ ಕಳ್ಳತನ ! ದೂರು ದಾಖಲು

Team Udayavani, Oct 29, 2023, 1:21 PM IST

5-chikkamagaluru

ಮೂಡಿಗೆರೆ: ಹೃದಯಾಘಾತವಾಗಿದ್ದ ಮಹಿಳೆಯೋರ್ವರನ್ನು ಆಸ್ಪತ್ರೆಗೆ ತಂದಾಗ ಅವರು ಮೃತಪಟ್ಟಿದ್ದು, ಮೃತದೇಹವನ್ನು ಆಸ್ಪತ್ರೆಯಿಂದ ಹೊರತಂದಾಗ ಅವರ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳು ಕಾಣೆಯಾಗಿರುವ ಬಗ್ಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದ ಶಮಂತ್ ಎಂಬವರು ದೂರು ನೀಡಿದ್ದಾರೆ.

ಅವರು ತಮ್ಮ ದೂರಿನಲ್ಲಿ ತಿಳಿಸಿರುವಂತೆ ಆ. 23ರ ಸೋಮವಾರದಂದು ತಳವಾರದ ತಮ್ಮ ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ನನ್ನ ಆಪ್ತ ಸ್ನೇಹಿತರಾದ ಶೇಖರ್ ಮತ್ತು ಅವರ ಹೆಂಡತಿ ಅನಿತ, ತಾಯಿ ಲಕ್ಷ್ಮಿದೇವಿ ಹಾಗೂ ಅವರ ಕುಟುಂಬದವರೊಂದಿಗೆ ನನ್ನ ಮನೆಗೆ ಬಂದಿದ್ದರು.

ಮರುದಿನ ಅಂದರೆ ಆ.24 ರಂದು ಬೆಳಿಗ್ಗೆ 6 ಗಂಟೆಯ ಸಮಯ ಲಕ್ಷ್ಮಿದೇವಿ ಎಂಬವರಿಗೆ ತೀವ್ರ ಹೃದಯಾಘಾತವಾದ ಕಾರಣ ಶೇಖರ್ ಅವರ ಕಾರಿನಲ್ಲಿ ಮೂಡಿಗೆರೆ ಎಂ.ಜಿ.ಎಂ ಸರ್ಕಾರಿ ಆಸ್ಪತ್ರೆಗೆ ಸುಮಾರು 6-30 ಗಂಟೆ ಸಮಯಕ್ಕೆ ಕರೆದುಕೊಂಡು ಬರಲಾಗಿದೆ.

ನಂತರ ಆಸ್ವತ್ರೆಯ ಸಿಬ್ಬಂದಿಗಳು ತಕ್ಷಣ ಅವರನ್ನು ತುರ್ತು ಚಿಕಿತ್ಸಾ ವಿಭಾಗದ ರೂಮಿನೊಳಗೆ ತಪಾಸಣೆ ನಡೆಸಲು ಕರೆದುಕೊಂಡು ಹೋಗಿದ್ದು, ಹೋಗುವಾಗ ಲಕ್ಷ್ಮಿ ದೇವಿಯವರ ಎರಡೂ ಕೈಗಳಲ್ಲಿ ತಲಾ ಎರಡರಂತೆ ಒಟ್ಟು ನಾಲ್ಕು ಚಿನ್ನದ ಬಳೆಗಳನ್ನು ಧರಿಸಿದ್ದರು.

ವೈದ್ಯರು ಪರೀಕ್ಷಿಸಿ ಲಕ್ಷ್ಮಿದೇವಿ ಮೃತಪಟ್ಟಿರವುದಾಗಿ ತಿಳಿಸಿದ್ದು, ಮೃತದೇಹವನ್ನು ತುರ್ತು ಚಿಕಿತ್ಸಾ ವಿಭಾಗದಿಂದ ಹೊರಗಡೆ ತೆಗೆದುಕೊಂಡು ಬಂದ ಸಮಯ ಲಕ್ಷ್ಮಿದೇವಿಯ ಎರಡು ಕೈಗಳಲ್ಲಿ ಒಂದೊಂದು ಬಳೆಗಳು ಮಾತ್ರ ಇರುವುದು ಕಂಡು ಬಂದಿದೆ. ಈ ಬಗ್ಗೆ ಲಕ್ಷ್ಮಿದೇವಿ ಸೊಸೆ ಅನಿತಾ ಸಿಬ್ಬಂದಿಗಳನ್ನು ವಿಚಾರಿಸಿದಾಗ ನಮಗೆ ಗೊತ್ತಿಲ್ಲವೆಂದು ತಿಳಿಸಿದ್ದಾರೆ.

ಆದ್ದರಿಂದ ಲಕ್ಷ್ಮಿದೇವಿ ಕೈಯಲ್ಲಿದ್ದ ನಾಲ್ಕು ಚಿನ್ನದ ಬಳೆಗಳಲ್ಲಿ ಎರಡು ಚಿನ್ನದ ಬಳೆಗಳನ್ನು ತುರ್ತು ಚಿಕಿತ್ಸಾ ವಿಭಾಗದ ಒಳಗೆ ಯಾರೋ ಕಳವು ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ ಎರಡು ಚಿನ್ನದ ಬಳೆಗಳು ಸುಮಾರು 35 ರಿಂದ 40 ಗ್ರಾಂ ತೂಕವಿರುವುದಾಗಿ ಲಕ್ಷ್ಮಿ ದೇವಿ ಮಗ ಶೇಖರ್ ತಿಳಿಸಿದ್ದಾರೆ.

ಬಳೆಗಳ ಒಟ್ಟು ಬೆಲೆ ಸುಮಾರು 2 ಲಕ್ಷ ರೂ. ಎನ್ನಲಾಗಿದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದಾಗ, ಸಿಸಿ ಕ್ಯಾಮರಾ ಪರಿಶೀಲಿಸಿ, ಕಳವಾದ ಚಿನ್ನದ ಬಳೆಗಳನ್ನು ಪತ್ತೆ ಮಾಡಿಕೊಡಬೇಕಾಗಿ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.

ಈ ಪದೆಕರಣಕ್ಕೆ ಸಂಬಂಧಿಸಿಂತೆ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.