ಈ ಗ್ರಾಮಕ್ಕೆ ರಸ್ತೆಯೇ ಇಲ್ಲ; ರೋಗಿಯನ್ನ ಜೋಳಿಗೆಯಲ್ಲಿ ಹೊತ್ತು ತಂದ ಕುಟುಂಬಸ್ಥರು!
Team Udayavani, Jul 12, 2023, 2:44 PM IST
ಚಿಕ್ಕಮಗಳೂರು: ಸೂಕ್ತ ರಸ್ತೆ ಇಲ್ಲದೆ ವಯೋವೃದ್ಧೆಯನ್ನ ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸುವ ಪರಿಸ್ಥಿತಿ ಜಿಲ್ಲೆಯಲ್ಲಿ ಇಂದಿಗೂ ಜೀವಂತವಾಗಿದೆ.
ಜಿಲ್ಲೆಯ ಕಳಸ ತಾಲೂಕಿನ ಕಲ್ಕೋಡು ಗ್ರಾಮದಲ್ಲಿ 70 ವರ್ಷದ ಶೇಷಮ್ಮರನ್ನ ಕುಟುಂಬಸ್ಥರು ಸುಮಾರು 1 ಕಿ.ಮೀ. ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸೂಕ್ತ ರಸ್ತೆ ಇಲ್ಲದ ಕಾರಣ ಜೋಳಿಗೆಯಲ್ಲಿ ಹೊತ್ತು ತಂದಿದ್ದಾರೆ. ಕಲ್ಕೋಡು ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆ, 30-40 ಜನಸಂಖ್ಯೆಯ ಕಾಡಂಚಿನ ಕುಗ್ರಾಮಗಳಿವೆ. ಆದರೆ ಓಡಾಡಲು ಸೂಕ್ತ ರಸ್ತೆ ಇಲ್ಲ.
ಕಲ್ಕೋಡು ಗ್ರಾಮದಿಂದ ಕಳಸ ತಾಲೂಕಿಗೆ ಬರಬೇಕು ಅಂದ್ರೆ 4 ಕಿ.ಮೀ. ಆಗುತ್ತದೆ.3-4 ಕಿ.ಮೀ. ಬಂದ್ರೆ ಆಟೋ ಸಿಗುತ್ತೆ,ಆದರೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಧಿಕಾರಿಗಳು ರಸ್ತೆ ಬಿಡ್ತಿಲ್ಲ.ಮುಕ್ಕಾಲು ಕಿ.ಮೀ. ರಸ್ತೆಗಾಗಿ ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು, ಜನನಾಯಕರು ಈವರೆಗೂ ಯಾರೂ ಕೂಡ ಸ್ಪಂದಿಸಿಲ್ಲ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.