ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಆರ್.ಅಶೋಕ್
Team Udayavani, Jun 24, 2023, 1:04 PM IST
ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಕುಮಾರ್ ಕಟೀಲ್ ಇದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಹೇಳಿಕೆ ನನಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ. ಸದ್ಯಕ್ಕೆ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಪಾರ್ಲಿಮೆಂಟ್ ಚುನಾವಣೆ ಇದೆ, ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನ್ನ ಬಳಿ ಯಾವ ಮಾಹಿತಿ ಇಲ್ಲ ಎಂದರು.
ಬಳ್ಳಾರಿಯಲ್ಲಿ ಕಟೀಲ್ ರಾಜೀನಾಮೆ ನೀಡಿದ್ದೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ, ಡೆಲ್ಲಿಯವರು ಅಂಗೀಕಾರ ಮಾಡಬೇಕಲ್ವಾ? ಪಾರ್ಲಿಮೆಂಟ್ ಚುನಾವಣೆಯಿದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿಯರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು.
ಇದೇ ವೇಳೆ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಮಾತನಾಡಿದ ಅಶೋಕ್, ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ ಎಂದರು.
ಇದನ್ನೂ ಓದಿ:ರಾಜ್ಯಾಧ್ಯಕ್ಷ ಸ್ಥಾನಕ್ಕೆ ‘ರಾಜೀನಾಮೆ ಕೊಟ್ಟಿಲ್ಲ’: ನಳಿನ್ ಕುಮಾರ್ ಸ್ಪಷ್ಟನೆ
ಡಿ ಕೆ ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ. ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗುವುದಿಲ್ಲ ಎನ್ನುವ ಗ್ಯಾರಂಟಿಯಿದೆ. ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಯಾರಿಗೆ ಹೇಳಿದ್ದಾರೆ, ಅದು ಡಿಕೆಶಿಗೆ ಹೇಳಿದ್ದು ಎಂದು ಜಗಜ್ಜಾಹೀರು ಎಂದು ಅಶೋಕ್ ಹೇಳೀದರು.
ಡಿಕೆ ಶಿವಕುಮಾರ್ ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಕಿರಿಕಿರಿ ಬೀದಿಗೆ ಬಂದರೆ ಈ ಸರಕಾರ ಬಿದ್ದು ಹೋಗುತ್ತದೆ.
ಸಿಎಂ ಆದವರು ಹಿಂದಿನ ಸಿಎಂರನ್ನು ಭೇಟಿ ಮಾಡುವುದು ಮಾಮೂಲಿ. ನಾನು ಡಿಸಿಎಂ ಆಗಿದ್ದೆ, ಆದರೆ ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ ಎಂದು ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.