ಅನಾಥ ಮಕ್ಕಳಿಗೆ ಮೀಸಲಾತಿ ಕಲ್ಪಿಸಲು ಚಿಂತನೆ
ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆಯಿಂದ ಅನಾಥ ಮಕ್ಕಳ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ: ಹೆಗ್ಡೆ
Team Udayavani, May 12, 2022, 1:03 PM IST
ಚಿಕ್ಕಮಗಳೂರು: ಅನಾಥ ಮಕ್ಕಳಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಅನುಕೂಲತೆ ದೃಷ್ಟಿಯಿಂದ ಅನಾಥ ಮಕ್ಕಳಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ 1 ತಿಂಗಳಲ್ಲಿ ವರದಿ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಬುಧವಾರ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಾಥ ಮಕ್ಕಳಿಗೆ ಬಾಲಮಂದಿರಗಳಲ್ಲಿ ಆಶ್ರಯ ನೀಡಿ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸ ಲಾಗಿದೆ. ಇತರೆ ಮಕ್ಕಳ ಜೊತೆ ಸ್ಪ ರ್ಧೆ ನಡೆಸಲು ಮೀಸಲಾತಿಯಿಂದ ಅನುಕೂಲವಾಗಲಿದೆ ಎಂದರು.
ತಮಿಳುನಾಡು, ತೆಲಂಗಾಣ ಸೇರಿದಂತೆ ಇತರೆ ರಾಜ್ಯಗಳಲ್ಲಿ ಅನಾಥ ಮಕ್ಕಳಿಗೆ ಮೀಸಲಾತಿ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿನ ಅನಾಥ ಮಕ್ಕಳಿಗೆ ಮೀಸಲಾತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನಾಥ ಮಕ್ಕಳ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಮೀಸಲಾತಿ ಪ್ರಮಾಣಪತ್ರ ನೀಡುವ ಸಂದರ್ಭದಲ್ಲಿ ಕೆಲವು ಗೊಂದಲಗಳು ಇದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತಿದೆ. ಮೀಸಲಾತಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಲ್ಲಿ ಶೈವರೆಡ್ಡಿ ಜನಾಂಗದಿಂದ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಹಾಗೇ ತರೀಕೆರೆ, ಕಡೂರು, ಮೂಡಿಗೆರೆ ತಾಲೂಕಿನಲ್ಲಿ ಮಡಿ ಒಕ್ಕಲಿಗ ಮನವಿ ಸಲ್ಲಿಸಿದ್ದು, ಅವರ ಶೈಕ್ಷಣಿಕ ಸಾಮಾಜಿಕ ಸ್ಥಿತಿಗತಿಯನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.
ಪಂಚಮಸಾಲಿ ವೀರಶೈವ ಜನಾಂಗವನ್ನು ಹಿಂದುಳಿದ ವರ್ಗ 2ಎಗೆ ಸೇರಿಸುವ ಬೇಡಿಕೆ ಇದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಪರಿಶೀಲನೆ ಮತ್ತು ಉಳಿದ ಲಿಂಗಾಯುತ ಸಮುದಾಯದ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.
ಕೆಲವರಿಗೆ ಮೀಸಲಾತಿ ಪಟ್ಟಿಯಲ್ಲಿದ್ದೇವೆ ಎನ್ನುವುದೇ ಗೊತ್ತಿಲ್ಲ, ಕೆಲವರಿಗೆ ಮೀಸಲಾತಿ ಪಟ್ಟಿಗೆ ಹೇಗೆ ಸೇರಿಸಬೇಕು ಎನ್ನುವುದು ಗೊತ್ತಿಲ್ಲ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಈಗಾಗಲೇ 5 ರಿಂದ 6 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳಿಗೆ ಭೇಟಿ ನೀಡಲಾಗುವುದು ಎಂದರು.
ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಸಾರ್ವಜನಿಕರಿಂದ ಬಂದ ಮನವಿಗಳನ್ನು ಸ್ವೀಕರಿಸಿ ಸೌಲಭ್ಯ ವಂಚಿತರಾಗಿದ್ದಾರೆಯೇ ಅಧ್ಯಯನ ಮಾಡಿ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು. ಹಿಂದುಳಿದ ವರ್ಗ ಆಯೋಗದ ಸದಸ್ಯರಾದ ಎಚ್.ಎಸ್. ಕಲ್ಯಾಣಕುಮಾರ್, ಕೆ.ಟಿ. ಸುವರ್ಣ, ರಾಜಶೇಖರ್, ಅರುಣ್ ಕುಮಾರ್, ಶಾರದಾ ನಾಯ್ಕ, ಜಿ.ಪಂ. ಸಿಇಒ ಜಿ.ಪ್ರಭು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋಮಶೇಖರ್ ಇದ್ದರು.
ರಾಜ್ಯದಲ್ಲಿ 1123 ಜಾತಿಗಳಿದ್ದು, ಮೀಸಲಾತಿ ಪ್ರಮಾಣ ಪತ್ರದಲ್ಲಿ ಕೆಲವೊಂದು ದೋಷಗಳಿದ್ದು ದೋಷಮುಕ್ತಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹಿಂದುಳಿದ ವರ್ಗ ಆಯೋಗ, ಜಿಲ್ಲಾಧಿಕಾರಿ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಗೆ ಸಂಪರ್ಕಿಸಬಹುದಾಗಿದೆ. – ಕೆ.ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.